Site icon Vistara News

Social Media: ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಉಸ್ತುವಾರಿ ಕೋಶ

Drinking water problem Provide water immediately by tanker says DC

ಕಾರವಾರ: ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಚುನಾವಣೆ ಕುರಿತ ಸುದ್ದಿಗಳ ಪ್ರಸಾರವು ಹೆಚ್ಚಿದ್ದು, ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶಗಳನ್ನು ಎಲ್ಲಾ ಜಿಲ್ಲೆಗಳಲ್ಲಿ (Uttara Kannada News) ತೆರೆಯಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಅಂತರ್ಜಾಲದಲ್ಲಿ ಪ್ರಕಟಗೊಳ್ಳುವ ಸುದ್ದಿಗಳು, ಪ್ರಸಕ್ತ ವಿದ್ಯಮಾನಗಳು ಮತ್ತು ಓಟಿಟಿ ಪ್ಲಾಟ್ ಫಾರಂನಲ್ಲಿ ಉತ್ಪ್ರೇಕ್ಷಿತ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಸೈಬರ್ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಸೆಲ್‌ ಅನ್ನು ರಚಿಸಲಾಗಿದೆ.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ನಿಗಾ ಇಡಲು ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶ ಜಿಲ್ಲೆಯಲ್ಲಿ ರಚನೆಯಾಗಿದ್ದು, ಇದು 24×7 ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ: Gold Rate Today: ಬಂಗಾರದ ಧಾರಣೆಯಲ್ಲಿ ಇಳಿಕೆ; ಹಾಲ್‌ಮಾರ್ಕ್‌ ಗಮನಿಸಿ ಖರೀದಿಸಿ

ಈ ಕೋಶದಲ್ಲಿ ಉತ್ತರ ಕನ್ನಡ ಪೊಲೀಸ್ ಇಲಾಖೆಯ ಡಿಎಸ್ಬಿ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಎನ್ಐಸಿ ಅಧಿಕಾರಿ, ಹಾಗೂ 2 ಜನ ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿ ಕಚೇರಿಯ ತಾಂತ್ರಿಕ ಸಮಾಲೋಚಕರು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕೋಶವು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟ್ಟರ್, ಟೆಲಿಗ್ರಾಂ, ಇನಸ್ಟಾಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್‌ಗಳಲ್ಲಿ ಪ್ರಚಾರವಾಗುವ ಎಲ್ಲಾ ಬಗೆಯ ಸುದ್ದಿ ಮತ್ತು ಆಡಿಯೋ ವಿಡಿಯೋ ಸಂದೇಶಗಳ ಮೇಲೆ ಹದ್ದಿನ ಕಣ್ಣು ಇಡುವ ಮೂಲಕ ಸುಳ್ಳು ಸುದ್ದಿಗಳ ನಿಯಂತ್ರಣ ಮಾಡಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಪ್ರಕರಣಗಳು ಕಂಡು ಬಂದಲ್ಲಿ, ಸಂಬಂಧಪಟ್ಟ ಸುದ್ದಿ ಅಥವಾ ವಿಡಿಯೋ ಪ್ರಸಾರದ ಮೂಲವನ್ನು ಪತ್ತೆಹಚ್ಚಿ, ಸಂಬಂಧಿಸಿದ ಲಿಂಕ್, ಸ್ಕ್ರೀನ್‌ ಶಾಟ್‌ಗಳ ದಾಖಲೆ ಸಹಿತ, ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಪಡಿಸುವವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಪೊಲೀಸ್ ಕಾಯ್ದೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: IPL 2024: ರಾಜಸ್ಥಾನ್​ vs ಕೆಕೆಆರ್​ ಪಂದ್ಯದ ದಿನಾಂಕ ಬದಲಾವಣೆ ಸಾಧ್ಯತೆ!

ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ತಂಡಗಳನ್ನು ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಿಗೆ ಗೊಂದಲ ಮೂಡಿಸುವುದರ ಜತೆಗೆ ಸುಗಮ ಮತ್ತು ಶಾಂತಿಯುತ ಚುನಾವಣೆ ನಡೆಯುವುದಕ್ಕೆ ಅಡ್ಡಿಪಡಿಸುವುದನ್ನು ತಡೆಯಲು ಜಿಲ್ಲಾ ಮಟ್ಟದ ಸೋಷಿಯಲ್ ಮೀಡಿಯಾ ದೂರು ಕೋಶ ರಚಿಸಲಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version