ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ
ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ (Debate Competition) ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಿಶ್ವದರ್ಶನ ಕಾಲೇಜಿನ ವಿದ್ಯಾರ್ಥಿನಿ ಶ್ರೀಗೌರೀ ಭಟ್ಟ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನಗರದ ಕ್ರೈಸ್ಟ್ ಪಿ.ಯು. ಕಾಲೇಜಿನಲ್ಲಿ ಗುರುವಾರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಭಾಗವಾಗಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಶ್ರೀಗೌರೀ ಭಟ್ಟ ಪ್ರಥಮ ಸ್ಥಾನ ಪಡೆದರು. ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿಂಧು ಬಿ ರೂಪೇಶ್ ಅವರು ವಿದ್ಯಾರ್ಥಿನಿಗೆ ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ವೇದಿಕೆಯಲ್ಲಿ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ | KSET Exam-2023: ಡಿ. 31ರಂದು ಕೆ-ಸೆಟ್ ಪರೀಕ್ಷೆ ನಡೆಯಲ್ಲ; ಮುಂದಿನ ದಿನಾಂಕ ಯಾವುದು?
ವಿಶ್ವದರ್ಶನ ಕಾಲೇಜಿನ ಉಪನ್ಯಾಸಕಿ ಕವಿತಾ ಹೆಬ್ಬಾರ ಅವರು ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಗೆ ಮಾರ್ಗದರ್ಶಕರಾಗಿ ವಿದ್ಯಾರ್ಥಿಗಳ ಜತೆ ಇದ್ದರು.
ವಿದ್ಯಾರ್ಥಿನಿ ಶ್ರೀಗೌರೀ ಭಟ್ಟ ಸಾಧನೆಗೆ ವಿಶ್ವದರ್ಶನ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ವ್ಯವಸ್ಥಾಪಕರು, ಪ್ರಾಂಶುಪಾಲರು ಹಾಗೂ ಎಲ್ಲ ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ