SSLC Result: ವಿಶ್ವದರ್ಶನ ಪ್ರೌಢಶಾಲೆಗೆ ಶೇ.98.33 ಫಲಿತಾಂಶ - Vistara News

ಉತ್ತರ ಕನ್ನಡ

SSLC Result: ವಿಶ್ವದರ್ಶನ ಪ್ರೌಢಶಾಲೆಗೆ ಶೇ.98.33 ಫಲಿತಾಂಶ

ಯಲ್ಲಾಪುರದ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಒಳ್ಳೆಯ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ

VISTARANEWS.COM


on

sslc result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಇಲ್ಲಿಯ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result) ಶೇ. 98.33 ಫಲಿತಾಂಶ ಪಡೆದುಕೊಂಡಿದ್ದು, ಶಾಲೆಯ ವಿದ್ಯಾರ್ಥಿ ಆದರ್ಶ ಹೆಗಡೆಕಟ್ಟೆ 622 ಅಂಕ ಪಡೆದುಕೊಂಡಿದ್ದಾರೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯು ಶೇ. 90.47 ಫಲಿತಾಂಶ ಪಡೆದುಕೊಂಡಿದ್ದು, ಗುಣಾತ್ಮಕ ಫಲಿತಾಂಶ ಶೇ. 82.47 ದಾಖಲಿಸಿದೆ.

ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒಟ್ಟು 60 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಇವರಲ್ಲಿ 59 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಶಾಲೆಯ ವಿದ್ಯಾರ್ಥಿ ಅಭಿಷೇಕ್ ಅಶೋಕ್ ಶೆಟ್ 625 ಕ್ಕೆ 620 ಅಂಕ (ಶೇ. 99.2) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಇನ್ನೋರ್ವ ವಿದ್ಯಾರ್ಥಿ ಕುಮಾರ್ ವಿಶ್ವಾಸ್ ಸತೀಶ ಭಟ್ಟ 625 ಕ್ಕೆ 620 ( ಶೇ.99.2) ಅಂಕಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಅಭಿಜ್ಞಾ ಪಟಗಾರ 625 ಕ್ಕೆ 617 ಅಂಕಗಳಿಸಿ(98.72%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರೌಢಶಾಲೆಯ ಗುಣಾತ್ಮಕ ಫಲಿತಾಂಶ ಶೇ. 94.12 ಆಗಿದ್ದು, ಡಿಸ್ಟಿಂಕ್ಷನ್ ನಲ್ಲಿ ಒಟ್ಟು 39 ವಿದ್ಯಾರ್ಥಿಗಳು ಹಾಗೂ ಪ್ರಥಮ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲೆಯ ಪ್ರಕಟಣೆಯು ತಿಳಿಸಿದೆ.

ಇದನ್ನೂ ಓದಿ|SSLC Result | ಔಟ್‌ ಆಫ್‌ ಔಟ್‌ ಸಾಧಕರು, 626/625 ಅಂಕ ಪಡೆದವರ ಪಟ್ಟಿ ಇಲ್ಲಿದೆ ನೋಡಿ

ಕನ್ನಡ ಮಾಧ್ಯಮ ಪ್ರೌಢಶಾಲೆಯ 63 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಪ್ರತಿಕ್ಷಾ ಭಟ್ಟ ಶೇ. 95.4 ಮತ್ತು ‌ವಿದ್ಯಾರ್ಥಿ ಭರತ ಗಾವಡೆ ಶೇ. 95.4  ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಚಿನ್ಮಯ ಹೆಗಡೆ ಶೇ.94.2 ಅಂಕ ಪಡೆದು ದ್ವಿತೀಯ ಸ್ಥಾನ, ತನ್ಹಾಜ್ ಶೇಖ್ ಶೇ.92 ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.  ಅತ್ಯುನ್ನತ ಶ್ರೇಣಿಯಲ್ಲಿ 11, ಪ್ರಥಮ ಶ್ರೇಣಿಯಲ್ಲಿ 33, ದ್ವಿತೀಯ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲೆ ತಳಿಸಿದೆ.

ವಿದ್ಯಾರ್ಥಿಗಳ ಸಾಧನೆಯ ಕುರಿತು ಹೆಮ್ಮೆ ವ್ಯಕ್ತಪಡಿಸಿರುವ ಶಾಲೆಯ ಆಡಳಿತ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ್ ಕೋಣೆಮನೆ ಹಾಗೂ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ವಿದ್ಯಾರ್ಥಿಗಳ ಶ್ರಮಕ್ಕೆ ಸಂದ ತಕ್ಕ ಪ್ರತಿಫಲ ಇದಾಗಿದೆ ಎಂದಿದ್ದಾರೆ.

ಶಾಲೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ, ಪ್ರಾಂಶುಪಾಲರಾದ ಗಣೇಶ್ ಭಟ್ಟ , ಉಪ ಪ್ರಾಂಶುಪಾಲರಾದ ಆಸ್ಮಾ ಶೇಖ್ ಸೇರಿದಂತೆ ಶಿಕ್ಷಕ ವೃಂದದವರು ಕೂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Murder Case : ಗಣೇಶ ಹಬ್ಬದಲ್ಲಿ ಸಹೋದರರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ

Murder case : ಕಳೆದ ವರ್ಷ ಗಣೇಶ ಹಬ್ಬದಲ್ಲಿ ಮಾಡಿದ ಖರ್ಚಿನ ಮಾಹಿತಿ ಕೇಳಿದ್ದಕ್ಕೆ ಸಹೋದರರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

Murder Case A scuffle between brothers during Ganesh festival ends in murder
Koo

ಕಾರವಾರ: ಗಣೇಶ ಹಬ್ಬಕ್ಕೆ ಖರ್ಚು ಮಾಡಿದ ಹಣದ ಲೆಕ್ಕ ಕೊಡದ್ದಕ್ಕೆ ಸಹೋದರರ ನಡುವೆ ಗಲಾಟೆ ಆಗಿದ್ದು, ಕೊಲೆಯಲ್ಲಿ (Murder case)ಅಂತ್ಯವಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಘಟನೆ ನಡೆದಿದೆ. ನಗರದ ಸಾಯಿಕಟ್ಟಾದ ಬಿಂದು ಮಾಧವ ದೇವಸ್ಥಾನದ ಬಳಿ ದುರ್ಘಟನೆ ನಡೆದಿದ್ದು, ಸಂದೇಶ ಪ್ರಭಾಕರ ಬೋರ್ಕರ್ ಕೊಲೆಯಾದ ದುರ್ದೈವಿ.

ಸಂದೇಶ್‌ನ ಚಿಕ್ಕಪ್ಪನ ಮಗ ಮನೀಶ್ ಬೋರ್ಕರ್ ಚಾಕು ಇರಿದವನು. ಪ್ರತಿವರ್ಷ ಬೋರ್ಕರ್ ಕುಟುಂಬಸ್ಥರು ಚತುರ್ಥಿಯಂದು ಮನೆಯಲ್ಲಿ ಗಣಪತಿ ಮೂರ್ತಿ ಸ್ಥಾಪಿಸಿ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದರು. ನಿನ್ನೆ ಶನಿವಾರ ಮಧ್ಯಾಹ್ನ ಗಣಪತಿ ಪೂಜೆ ನಂತರ ಪ್ರಭಾಕರ್ ಹಾಗೂ ಮನೋಹರ್ ಬೋರ್ಕರ್ ನಡುವೆ ಕಳೆದ ವರ್ಷ ಹಬ್ಬಕ್ಕೆ ಖರ್ಚು ಮಾಡಿದ ಹಣದ ಲೆಕ್ಕಾಚಾರದ ಕುರಿತು ಗಲಾಟೆ ನಡೆದಿದೆ.

ಈ ವಿಚಾರವಾಗಿ ಎರಡೂ ಕುಟುಂಬಸ್ಥರ ಮಕ್ಕಳು ಕೈ ಕೈ ಮಿಲಾಯಿಸಿಕೊಂಡಿದ್ದು ಗಲಾಟೆ ತಾರಕ್ಕೇರಿದಾಗ ಪ್ರಭಾಕರ್ ಹಿರಿಯ ಮಗ ಸಂದೇಶ್‌ಗೆ ಮನೋಹರ್ ಅವರ ಕಿರಿಯ ಪುತ್ರ ಚಾಕು ಇರಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಚಾಕು ಇರಿದ ಮನೀಶ್ ಹಾಗೂ ಆತನಿಗೆ ಸಹಕಾರ ನೀಡಿದವರನ್ನು ಕಾರವಾರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು; ಸೆರೆವಾಸದಲ್ಲಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸಿಗುತ್ತಾ ಬೇಲ್‌!

ಗಣೇಶೋತ್ಸವದಲ್ಲಿ ಗುಂಪುಗಳ ಮಾರಾಮಾರಿ

ಗಣೇಶೋತ್ಸವ ಹಿನ್ನೆಲೆಯಲ್ಲಿ ಪಟಾಕಿ ಹಚ್ಚುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾ ಮಾರಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಯುವಕರ ಹೊಡೆದಾಟದ ವಿಡಿಯೊ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಯುವಕರ ಗಲಾಟೆಯಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ‌ ನಿರ್ಮಾಣವಾಗಿತ್ತು.

ಅರಬಿಳಚಿ ಕ್ಯಾಂಪ್‌ನಲ್ಲೂ ಗಲಾಟೆ

ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಗಣೇಶ ಮೂರ್ತಿ ತರುವಾಗ ಡೊಳ್ಳು ಬಾರಿಸುವವರ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯ ಘರ್ಷಣೆಯಾಗಿದೆ.

ಮಾಜಿ ತಾಲೂಕು ಪಂಚಾಯತ್ ಸದಸ್ಯ ದಿ.ಅಣ್ಣಾಮಲೈ ಮಗ ಅರ್ಜುನ್‌ ಎಂಬಾತ ಮೇಲೆ ಹಲ್ಲೆ ನಡೆದಿದೆ. ಇತ್ತ ಗಲಾಟೆ ಬಿಡಿಸಲು ಹೋದ ಪೊಲೀಸ್‌ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆ ಕಲ್ಲು ಬಿದ್ದಿದೆ. ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಮಾರು 15 ರಿಂದ 20 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಪೊಲೀಸರ ಸಮ್ಮುಖದಲ್ಲೇ ಊರಿನ ಎಲ್ಲಾ ಗಣಪತಿ ವಿಸರ್ಜನೆ ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಭಾನುವಾರದಂದು ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು ಜತೆಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇನ್ನೂ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಿರಂತರ ಗಾಳಿಯ ವೇಗ 40-50 ಕಿ.ಮೀ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಮುಂದಿನ 48 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Continue Reading

ಬೆಂಗಳೂರು

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡು ಮಹಿಳೆಗೆ ಗುದ್‌ ಬಿಟ್ಟೆ ಎಂದು ಚಿತ್ರ ನಿರ್ದೇಶಕ ನಾಗಶೇಖರ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

I lost control of my eyes while driving the car Film director Nagashekhar
Koo

ಬೆಂಗಳೂರು: ನಿನ್ನೆ ಶುಕ್ರವಾರ ಚಿತ್ರ ನಿರ್ದೇಶಕ ನಾಗಶೇಖರ್ (Nagashekar) ಕಾರು (Road Accident) ಅಪಘಾತವಾಗಿತ್ತು. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ ಸಂಭವಿಸಿತ್ತು. ರಭಸವಾಗಿ ಬಂದ ಕಾರು ಮರಕ್ಕೆ ಗುದ್ದಿತ್ತು. ಇತ್ತ ಫುಟ್‌ಪಾತ್‌ ಮೇಲೆ ನಿಂತಿದ್ದ ಮಹಿಳೆಗೂ ಕಾರು ಡಿಕ್ಕಿ ಹೊಡೆದಿತ್ತು.

ಈ ಸಂಬಂಧ ಜ್ಞಾನಭಾರತಿ ಸಂಚಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿರುವ ನಾಗಶೇಖರ್, ಕಾರು ಓಡಿಸಿಕೊಂಡು ಬರುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ. ಬಳಿಕ ಕಾರನ್ನು ಫುಟ್‌ಪಾತ್‌ ಮೇಲೆ ಹತ್ತಿಸಿದೆ . ಫುಟ್‌ಪಾತ್ ಮೇಲೆ ನಿಂತಿದ್ದ ಲಕ್ಷ್ಮಿ ಎಂಬ ಮಹಿಳೆಗೆ ಸಣ್ಣ-ಪುಟ್ಟ ಗಾಯವಾಗಿದೆ. ನಾನೇ ಮಹಿಳೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೇನೆ. ಆ ಮಹಿಳೆ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಸದ್ಯ ಅಪಘಾತದ ಸಂಬಂಧ ಸಂಚಾರಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ. ಸೆಲ್ಪ್ ಆಕ್ಸಿಡೆಂಟ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಕ್ಲೈಮ್ ಮಾಡಲು ಒಂದು ಮೆಮೋ ಕಾಪಿ ಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೂ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೆಲ್ಡಿಂಗ್ ಬಿಟ್ಟಿದ್ದ ಹಳಿಯಲ್ಲಿ ಬರುತ್ತಿದ್ದ ರೈಲು ನಿಲ್ಲಿಸಿ ದುರಂತ ತಪ್ಪಿಸಿದ್ದಾರೆ. ಉತ್ತರಕನ್ನಡದ ಕುಮಟಾ ಹೊನ್ನಾವರದ ಕೊಂಕಣ ರೈಲ್ವೇ ಮಾರ್ಗದಲ್ಲಿ ಘಟನೆ ನಡೆದಿದೆ. ಮಹಾದೇವ್ ರೈಲು ದುರಂತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಆಗಿದ್ದಾರೆ.

Road Accident
Road Accident

ಬೆಳಗ್ಗೆ 5 ಗಂಟೆಗೆ ತಿರುವನಂತಪುರದಿಂದ ನವದೆಹಲಿಗೆ ರಾಜಧಾನಿ ಎಕ್ಸಪ್ರೆಸ್ ರೈಲು ಹೊರಟಿತ್ತು. ಇದೇ ವೇಳೆ ಕುಮಟಾ ಸಮೀಪ ಹಳಿಯಲ್ಲಿ ವೆಲ್ಡಿಂಗ್ ಬಿಟ್ಟಿದ್ದನ್ನು ಮಹಾದೇವ ಗಮನಿಸಿದ್ದರು. ಹೊನ್ನಾವರ ಸ್ಟೇಷನ್ ಮಾಸ್ಟರ್‌ಗೆ ಕರೆಮಾಡಿ ರೈಲು ನಿಲ್ಲಿಸಲು ಮಾಹಿತಿ ನೀಡಿದ್ದರು. ರೈಲು ನಿಲ್ದಾಣ ದಾಟಿದ್ದರಿಂದ ಹಳಿಯಲ್ಲಿ 500 ಮೀಟರ್ ಓಡಿ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾರೆ. ಟ್ರ್ಯಾಕ್‌ಮ್ಯಾನ್ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actress Ramya
ಸ್ಯಾಂಡಲ್ ವುಡ್6 hours ago

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Youth immerse Ganesh with 65 grams of gold chain
ಬೆಂಗಳೂರು8 hours ago

Ganesh Fest 2024 : ಯಡವಟ್ಟು ಆಯ್ತು ತಲೆ ಕೆಟ್ಟು ಹೋಯ್ತು; 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು!

Renukaswamy murder
ಸ್ಯಾಂಡಲ್ ವುಡ್9 hours ago

Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

fraud case
ಬೆಳಗಾವಿ11 hours ago

Fraud Case : ಹುಡುಗಿಯರೇ ಹುಷಾರ್‌! ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣ ಕೀಳುತ್ತಾರೆ ಈ ಖದೀಮರು

road accident
ಚಿಕ್ಕೋಡಿ12 hours ago

Road Accident : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್‌; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ

murder case
ಕಲಬುರಗಿ12 hours ago

Murder case : ನಡುರಸ್ತೆಯಲ್ಲಿ ಅಡ್ಡಗಟ್ಟಿ ವ್ಯಕ್ತಿಯ ಹೊಟ್ಟೆ ಬಗೆದು ಕೊಂದ ದುಷ್ಕರ್ಮಿಗಳು

Road Accident
ರಾಯಚೂರು14 hours ago

Road Accident : ಬಸ್‌ಗಳ ನಡುವೆ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ

Murder Case A scuffle between brothers during Ganesh festival ends in murder
ಉತ್ತರ ಕನ್ನಡ15 hours ago

Murder Case : ಗಣೇಶ ಹಬ್ಬದಲ್ಲಿ ಸಹೋದರರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ

actor darshan
ಸಿನಿಮಾ16 hours ago

Actor Darshan : ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು; ಸೆರೆವಾಸದಲ್ಲಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸಿಗುತ್ತಾ ಬೇಲ್‌!

physical abuse
ಬೆಂಗಳೂರು ಗ್ರಾಮಾಂತರ16 hours ago

Physical Abuse : ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ದುಷ್ಟ; ಬೆತ್ತಲೆಗೊಳಿಸಿ ಥಳಿಸಿದ ಯುವಕರು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌