Site icon Vistara News

SSLC Result: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿವಿವಿ ಸಾರ್ವಭೌಮ ಗುರುಕುಲಕ್ಕೆ ಶೇ. 100 ಫಲಿತಾಂಶ

#image_title

ಕಾರವಾರ: ಕುಮಟಾ ತಾಲೂಕಿನ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result) ಶೇಕಡಾ 100ರಷ್ಟು ಫಲಿತಾಂಶ ಬಂದಿದೆ.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ. ಪ್ರಾಚೀನ ಶಿಕ್ಷಣದಲ್ಲಿ ಸಾಧನೆ ಮಾಡುವ ಜತೆಜತೆಗೆ ಆಧುನಿಕ ಶಿಕ್ಷಣದಲ್ಲೂ ಅಮೋಘ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಹೇಳಿದ್ದಾರೆ.

ಇದನ್ನೂ ಓದಿ: SSLC Result: ವಿಶ್ವದರ್ಶನ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ; ಸಾಧಕ ಮಕ್ಕಳಿಗೆ ಆಡಳಿತ ಮಂಡಳಿ ಅಭಿನಂದನೆ

ಗುರುಕುಲದ ವಿದ್ಯಾರ್ಥಿಗಳು ಕಳೆದ ವರ್ಷವೂ ಶೇಕಡಾ 100ರಷ್ಟು ಫಲಿತಾಂಶ ತಂದುಕೊಟ್ಟಿದ್ದರು. ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳ ಪೈಕಿ ಆರು ಮಂದಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 19 ವಿದ್ಯಾರ್ಥಿಗಳು ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಚಿರಂತನ್ ಯು.ಎಸ್ ಶೇಕಡಾ 96.96 (606 ಅಂಕ) ಪಡೆದು ಗುರುಕುಲಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತಿಲಕಾಚಾರ್ಯ ವಾಸುದೇವಾಚಾರ್ಯ ವಡಕಿ ಹಾಗೂ ಸಂಪತ್ ದಿವಾಕರ ಹೆಗಡೆ ಶೇಕಡಾ 93.44 (584 ಅಂಕ) ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ತೇಜಾ ನಾರಾಯಣ ಅವಧಾನಿ ಶೇಕಡ 90.88 (568) ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: SSLC Result 2023 : ಎಸ್‌ಎಸ್‌ಎಲ್‌ಸಿ ನಂತರ ಏನು ಓದುವಿರಿ; ಇಲ್ಲಿದೆ ಪಠ್ಯ ಸಂಯೋಜನೆಯ ವಿಷಯಗಳ ಮಾಹಿತಿ

ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯಿನಿ ಸೌಭಾಗ್ಯ ಭಟ್ಟ, ವಿದ್ಯಾ ಪರಿಷತ್ ಅಧ್ಯಕ್ಷ ಡಾ.ಎಂ.ಆರ್. ಹೆಗಡೆ, ವಿವಿವಿ ಪದಾಧಿಕಾರಿಗಳಾದ ಡಿ.ಡಿ.ಶರ್ಮಾ, ಅಶ್ವಿನಿ ಉಡುಚೆ ಅವರು ಅಭಿನಂದಿಸಿದ್ದಾರೆ.

Exit mobile version