ಯಲ್ಲಾಪುರ: ಇಂದು 2022-2023ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಪಟ್ಟಣದ ವಿಶ್ವದರ್ಶನ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622ಅಂಕ (99.5%) ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾಳೆ. ಈಕೆ ಇಂಗ್ಲಿಷ್‌ನಲ್ಲಿ 125/125, ಕನ್ನಡ, ಗಣಿತ ಹಾಗೂ ವಿಜ್ಞಾನದಲ್ಲಿ 100/100 ಅಂಕಗಳಿಸುವ ಮೂಲಕ ಸಾಧನೆ ಮಾಡಿದ್ದಾಳೆ. ಧಾತ್ರಿ ರವಿಪ್ರಸನ್ನ ಹೆಬ್ಬಾರ 617 ಅಂಕ (98.7%) ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಭವಾನಿ ಎನ್. ಬಿ. ಗೌಡರ 615 ಅಂಕ (98.4%) ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.
ಪರೀಕ್ಷೆಗೆ ಹಾಜರಾದ ಒಟ್ಟೂ ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ: Karnataka Election: ಬಿಟಿಎಂ ಲೇಔಟ್ ಗಲಾಟೆ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಶ್ರೀಧರ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ
ಶಾಲೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳೂ ಉತ್ತಮ ಸಾಧನೆ ಮಾಡಿದ್ದು, ಪೃಥ್ವಿ ಎಂ.ಜೋಷಿ 605 ಅಂಕ (96.8%), ಅನುಷಾ ಎಸ್. ಭಟ್ಟ 601 ಅಂಕ (96.16%), ಚಿನ್ಮಯ ವಿ. ವೈದ್ಯ 587 ಅಂಕ (93.92%) ಗಳೊಂದಿಗೆ ಅನುಕ್ರಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಐವರು ಹಾಗೂ ಹಿಂದಿಯಲ್ಲಿ ಮೂವರು ವಿದ್ಯಾರ್ಥಿಗಳು ಶೇ.100 ಅಂಕವನ್ನು ಪಡೆದಿದ್ದಾರೆ.
ಇನ್ನು ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ದತ್ತಾತ್ರೇಯ ಭಟ್ಟ 603 ಅಂಕ (96.48%), ವಿನಯ ಸಂತೋಷ ನಾಯ್ಕ 600 ಅಂಕ (96%), ವಿಜೇತಾ ವಿಶ್ವನಾಥ ಭಟ್ಟ 596 ಅಂಕ (95.36%) ಗಳಿಸಿ ಕ್ರಮವಾಗಿ ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಅಂಕಗಳನ್ನು ಪಡೆದಿರುತ್ತಾರೆ. 10 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇದನ್ನೂ ಓದಿ: Karnataka Election 2023: ಬಹಿರಂಗ ಪ್ರಚಾರ ಅಂತ್ಯ; ಕಣ ರಂಗೇರಿಸಿದ ಅತಿರಥ, ಮಹಾರಥರ ಕ್ಯಾಂಪೇನ್!
ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಗೌರವ ಕಾರ್ಯದರ್ಶಿ ನರಸಿಂಹ ಕೋಣೆಮನೆ, ಆಡಳಿತ ಮಂಡಳಿಯವರು, ವಿಭಾಗ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.