Site icon Vistara News

Uttara Kannada News: ಯೋಗವು ದೈನಂದಿನ ಜೀವನದ ಭಾಗವಾಗಲಿ: ಡಿಸಿ ಗಂಗೂಬಾಯಿ ಮಾನಕರ್‌

10th International Yoga Day celebration Programme in karwar

ಕಾರವಾರ: ಪ್ರತಿನಿತ್ಯ ಯೋಗ (Yoga) ಮಾಡುವ ಮೂಲಕ, ಇಂದಿನ ಧಾವಂತದ ಬದುಕಿನಲ್ಲಿ ಕಾಡುವ ಹಲವು ರೀತಿಯ ಒತ್ತಡಗಳ ನಿವಾರಣೆಯ ಜತೆಗೆ ಉತ್ತಮ ಆರೋಗ್ಯ ಕೂಡ ಲಭಿಸುವುದರಿಂದ, ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ಹೇಳಿದರು.

ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ & ಗೈಡ್, ಎನ್‌ಸಿಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್, ರೋಟರಿ ಪಶ್ಚಿಮ, ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ಮನುಷ್ಯನಿಗೆ ಬಾಹ್ಯ ಸೌಂದರ್ಯದಷ್ಟೇ, ಆಂತರಿಕ ಸೌಂದರ್ಯವೂ ಮುಖ್ಯವಾಗಿರುತ್ತದೆ. ಇವೆರಡನ್ನೂ ಕಾಪಾಡಿಕೊಂಡು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹಾಗೂ ಏಕಾಗ್ರತೆಯಿಂದ ಇರಲು ಮತ್ತು ಶರೀರದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಯೋಗವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಯೋಗ ಬಲ್ಲವನಿಗೆ ರೋಗವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ 5 ರಿಂದ 10 ನಿಮಿಷವಾದರೂ ಯೋಗ ಮಾಡಬೇಕು. ಇದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್. ಎನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ ಹಾಗೂ ಇತರರು ಇದ್ದರು.

ಇದನ್ನೂ ಓದಿ: Yadgiri News: ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಸಲಹೆ

ಯೋಗ ಶಿಕ್ಷಕ ಗಣಪತಿ ಹೆಗಡೆ, ಭಾಗವಹಿಸಿದ್ದ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಕವಿತಾ ಪ್ರಾಣಾಯಾಮ ಮತ್ತು ಧ್ಯಾನದ ಕುರಿತು ತರಬೇತಿ ನೀಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಸ್ವಾಗತಿಸಿದರು.

Exit mobile version