ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ (Uttara Kannada News) ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 35 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳದ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Bengaluru News: ಮಹಿಳೆಯರು ಸೋಷಿಯಲ್ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ
ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ. ಹೀಗೆ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರ್ಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ
ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆ.ಡಿ.ಸಿ.ಸಿ ಬ್ಯಾಂಕ್) ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.