Site icon Vistara News

Uttara Kannada News: ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಡಿಸಿ ಮಾನಕರ್‌

5th round of foot and mouth fever vaccination programme

ಕಾರವಾರ: ಜಿಲ್ಲೆಯ ರೈತರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆಯನ್ನು ತಪ್ಪದೇ ಹಾಕಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಂಗವಾಗಿ ಹಸುಗಳಿಗೆ ಪೂಜೆ ಸಲ್ಲಿಸಿ, ಅವುಗಳಿಗೆ ಹಿಂಡಿ ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಇಂದಿನಿಂದ ಏಪ್ರಿಲ್ 30‌ ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಜಾನುವಾರುಗಳು ಲಸಿಕೆಯಿಂದ ವಂಚಿತವಾಗದಂತೆ ಹಾಗೂ ಜಿಲ್ಲೆಯ ರೈತರು, ಜಾನುವಾರು ಸಾಕಾಣಿಕೆದಾರರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸುವಂತೆ ಹೇಳಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಇನ್ನೂ 4 ದಿನ ಬಿಸಿಲು, ಏ.6ರಿಂದ ಮಳೆ ಎಚ್ಚರಿಕೆ, ಬೆಂಗಳೂರಿನಲ್ಲಿ ಯಾವಾಗ?

ಕಾಲುಬಾಯಿ ಜ್ವರದಿಂದ, ರೈತರಿಗೆ ಆರ್ಥಿಕ ನಷ್ಟ ಉಂಟಾಗಲಿದ್ದು, ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಹಾಗೂ ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆಗಳಿದ್ದು, ಆ ನಿಟ್ಟಿನಲ್ಲಿ ರೋಗದಿಂದ ಸಂಪೂರ್ಣ ಸುರಕ್ಷತೆಗಾಗಿ ತಮ್ಮ 4-5 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗವನ್ನು ಪಡೆಯಬೇಕು ಎಂದರು.

ಜಿಲ್ಲೆಯ ಎಲ್ಲಾ 1289 ಗ್ರಾಮಗಳಲ್ಲಿ ಪಶುಪಾಲನಾ ಇಲಾಖೆಯಿಂದ ಲಸಿಕೆಯನ್ನು ನೀಡಲು ಬಂದ ಲಸಿಕೆದಾರರಿಗೆ ರೈತರು ಅಗತ್ಯ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಬೇಕಾದಷ್ಟು ಕಾಲುಬಾಯಿ ಲಸಿಕೆ ದಾಸ್ತಾನಿದ್ದು, ಪತ್ರಿ 50-80 ಜಾನುವಾರುಗಳಿಗೆ ಒಂದು ಬ್ಲಾಕ್‌ನಂತೆ ಒಟ್ಟು 4957 ಬ್ಲಾಕ್‌ಗಳನ್ನು ರಚಿಸಲಾಗಿದ್ದು, 233 ಲಸಿಕೆದಾರರ ಮೂಲಕ ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ಬಳಸಲಾಗುತ್ತಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಕೆ.ಎಂ. ಮೋಹನಕುಮಾರ್‌ ಹೇಳಿದರು.

ಇದೇ ವೇಳೆ ಕಾಲುಬಾಯಿ ಲಸಿಕೆ ಅಭಿಯಾನ ಕುರಿತ ಭಿತ್ತಿಪತ್ರಗಳನ್ನು ಡಿಸಿ ಬಿಡುಗಡೆಗೊಳಿಸಿದರು.

ಇದನ್ನೂ ಓದಿ: Summer Tips: ಬೇಸಿಗೆಯಲ್ಲಿ ಪದೇಪದೆ ಫ್ರಿಜ್‌ ನೀರು ಕುಡಿದರೆ ಏನಾಗುತ್ತದೆ?

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 ಚಂದ್ರಶೇಖರ್, ಪೌರಾಯುಕ್ತ ರವಿಕುಮಾರ್, ಪಶುವೈದ್ಯಾಧಿಕಾರಿ ಡಾ. ಪ್ರಶಾಂತ್‌ ಕುಮಾರ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಭಾಸ್ಕರ್ ಗೌಡ ಹಾಗೂ ಇತರರು ಇದ್ದರು.

Exit mobile version