Site icon Vistara News

Uttara Kannada News: ಕಾರವಾರದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್‌ ಸಮಾವೇಶ

Heavy rain in Uttara Kannada district district NDRF team for rescue says DC Gangubai Manakar

ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ (Guarantee Schemes) ಫಲಾನುಭವಿಗಳ ಬೃಹತ್ ಸಮಾವೇಶವು ಇಂದು (ಮಾರ್ಚ್ 16) ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿಡಿಯೋ ಸಂವಾದದ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳ, ಜಿಲ್ಲೆಯ ಸುಮಾರು 25,000ಕ್ಕೂ ಅಧಿಕ ಫಲಾನುಭವಿಗಳು ಈ ಸಮಾವೇಶಕ್ಕೆ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದಾರೆ. ಎಲ್ಲ ಫಲಾನುಭವಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ರೂಟ್ ಮ್ಯಾಪ್ ನಿಗದಿಪಡಿಸಲಾಗಿದೆ ಎಂದರು.

ಇದನ್ನೂ ಓದಿ: Tooth Decay: ನಮ್ಮ ಈ ಎಲ್ಲ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಮೂಲ ಕಾರಣ!

ಸಮಾವೇಶಕ್ಕೆ ಆಗಮಿಸುವ ಎಲ್ಲ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಭೋಜನದ ವ್ಯವಸ್ಥೆ ಮಾಡಿದ್ದು, ಎಲ್ಲ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದು, ಪುನಃ ಅವರ ಸ್ಥಳಗಳಿಗೆ ಬಿಡಲು ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದರು.

ಇದನ್ನೂ ಓದಿ: Yadgiri News: ಭಕ್ತ ಸಾಗರದ ಮಧ್ಯೆ ಸಂಭ್ರಮದಿಂದ ಜರುಗಿದ ಶ್ರೀ ವಿಶ್ವಾರಾಧ್ಯರ ರಥೋತ್ಸವ

ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಿದ್ಯುತ್, ಧ್ವನಿವರ್ಧಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಸೂಕ್ತ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳ ಆಯ್ದ ಫಲಾನುಭವಿಗಳಿಂದ ಯೋಜನೆಗಳ ಕುರಿತಂತೆ ತಮ್ಮ ಅನಿಸಿಕೆ ವ್ಯಕ್ತಪಡಿಸುವಿಕೆ ಹಾಗೂ ವಿವಿಧ ಯೋಜನೆಯ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಇಲ್ಲಿದೆ ವಿವರ

ಗ್ಯಾರಂಟಿ ಯೋಜನೆಯ ಸಮಾವೇಶದ ಯಶಸ್ವಿಗೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಿರುವ ಎಲ್ಲ ಸಮಿತಿಗಳು, ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಇದೇ ವೇಳೆ ತಿಳಿಸಿದರು. ವಿಡಿಯೊ ಸಂವಾದದಲ್ಲಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version