ಬನವಾಸಿ: ಬನವಾಸಿಯಲ್ಲಿ ಮಾ. 5 ಹಾಗೂ 6ರಂದು ನಡೆಯಲಿರುವ ಕದಂಬೋತ್ಸವದ (Banavasi Kadambotsava) ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶನಿವಾರ ಪೂರ್ವ ಸಿದ್ದತೆಯ ಪರಿಶೀಲನೆ (Uttara Kannada News) ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕದಂಬೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುವುದು. ಕದಂಬೋತ್ಸವಕ್ಕೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಸ್ವಚ್ಚತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕದಂಬೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Sirsi News: ಮಾ.5, 6ರಂದು ಬನವಾಸಿ ಕದಂಬೋತ್ಸವ
ಈಗಾಗಲೇ ಕದಂಬೋತ್ಸವ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮಯೂರ ವರ್ಮ ವೇದಿಕೆ ಹಾಗೂ ವೇದಿಕೆಯ ಮುಂಭಾಗದಲ್ಲಿ ಬೃಹತ್ ಪ್ರಮಾಣದ ಪೆಂಡಲ್ ಹಾಕಲಾಗುತ್ತಿದೆ. ಫಲಪುಷ್ಪ ಪ್ರದರ್ಶನದ ತಯಾರಿಗೊಳ್ಳುತ್ತಿದೆ. ಕದಂಬೋತ್ಸವದ ಪ್ರಯುಕ್ತ ಜರುಗಲಿರುವ ಕ್ರೀಡಾಕೂಟಗಳಿಗೆ ಕ್ರೀಡಾಂಗಣ ಕಾರ್ಯ ಪೂರ್ಣಗೊಂಡಿದೆ. ಪ್ರಥಮ ಬಾರಿಗೆ ಕುಸ್ತಿ ಸ್ಪರ್ಧೆ ಏರ್ಪಡಿಸಿದ್ದು ಕುಸ್ತಿ ಪಂದ್ಯದ ಅಖಾಡ ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ ಹೈದರಾಬಾದ್ಗೆ ಆತಂಕ; ಬೌಲಿಂಗ್ ಕೋಚ್ ಅಲಭ್ಯ!
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಶ್ರೀಕೃಷ್ಣ ಕಮಕರ್, ಗ್ರಾಪಂ ಅಧ್ಯಕ್ಷೆ ಬೀಬಿ ಆಯಿಷಾ ಖಾಸಿಮ್ ಖಾನ್, ಕಾಂಗ್ರೆಸ್ ಮುಖಂಡರಾದ ಸಿ.ಎಫ್. ನಾಯ್ಕ್, ಶ್ರೀನಿವಾಸ ಧಾತ್ರಿ, ಶಿವಾಜಿ ಕಾಳೇರಮನೆ, ಶ್ರೀಲತಾ ಕಾಳೇರಮನೆ ಮತ್ತಿತರರು ಇದ್ದರು.