Site icon Vistara News

Uttara Kannada News: ಬನವಾಸಿಯಲ್ಲಿ ಯುಗಾದಿ ಉತ್ಸವದ ಭವ್ಯ ಶೋಭಾಯಾತ್ರೆ

Bhavya shobhayatre of Ugadi festival at Banavasi

ಬನವಾಸಿ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಯುಗಾದಿ (Ugadi) ಹಬ್ಬದ ಅಂಗವಾಗಿ ಉತ್ಸಾಹಿ ಹಿಂದೂ ಯುವಕರ ಯುಗಾದಿ ಉತ್ಸವ ಸಮಿತಿ ವತಿಯಿಂದ ಭವ್ಯ ಶೋಭಾಯಾತ್ರೆ (Uttara Kannada News) ನಡೆಯಿತು.

ಶಾಂತಪುರ ಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶೋಭಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶ್ರೀಗಳು, ಯುಗಾದಿ ವಸಂತ ಋತುವಿನ ಪ್ರಾರಂಭದ ದಿನ. ಪ್ರಕೃತಿಯೂ ಕೂಡ ಚಿಗುರೆಲೆಗಳಿಂದ ಹೊಸ ಋತುವಿಗೆ ಸ್ವಾಗತ ಕೋರಲು ಸಜ್ಜಾಗಿರುವ ಸಮಯ. ಈ ಸಮಯದಲ್ಲಿ ಮರಗಳ ಎಲೆಗಳು ಉದುರುತ್ತದೆ ಮತ್ತು ಹೊಸ ಚಿಗುರು ಪ್ರಾರಂಭವಾಗುತ್ತದೆ. ಹಾಗಾಗಿ ಹೊಸತನದ ಸಂಕೇತವನ್ನು ಪ್ರಕೃತಿಯೂ ಕೂಡ ನೀಡಲು ಪ್ರಾರಂಭಿಸುವ ಸುದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್‌ ಫೌಂಡೇಶನ್

ಯುವ ಪೀಳಿಗೆಯು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ, ಭಾರತೀಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು ಎಂದು ಕರೆ ನೀಡಿದರು.

ಪಟ್ಟಣದಲ್ಲಿ ಅಲಂಕೃತ ತೆರೆದ ವಾಹನದಲ್ಲಿ ಭಾರತಾಂಬೆ ಹಾಗೂ ಶ್ರೀ ರಾಮಚಂದ್ರ ದೇವರ ಭಾವಚಿತ್ರಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಭವ್ಯ ಶೋಭಾಯಾತ್ರೆ ನಡೆಸಲಾಯಿತು. ಇಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಆರಂಭವಾದ ಶೋಭಾಯಾತ್ರೆಯು ಶ್ರೀ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ಸಂಪನ್ನಗೊಂಡಿತು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಹೆಚ್ಚಳ ಮುಂದುವರಿಕೆ; ಇಂದೂ ಏರಿದೆ ₹380; ಎಷ್ಟಿದೆ ದರ?

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಯುಗಾದಿ ಉತ್ಸವ ಸಮಿತಿಯ ಸದಸ್ಯರು, ಸಾವಿರಾರು ಹಿಂದೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.

Exit mobile version