Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ - Vistara News

ಉತ್ತರ ಕನ್ನಡ

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Uttara Kannada News: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Blacklist contractors who do not complete work within time says Minister Mankala Vaidya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಎಲ್ಲಾ ಅಧಿಕಾರಿಗಳಿಗೆ (Uttara Kannada News) ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದಂತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ದೊರೆಯದೇ ಚಿಕಿತ್ಸೆಗೆ ಪರದಾಡುವಂತಾಗಿದೆ.

ಅಲ್ಲದೇ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಟೆಂಡರ್ ಅವಧಿಯನ್ನು ವಿಸ್ತರಣೆ, ನವೀಕರಣ ಸೇರಿದಂತೆ ಬಿಲ್ಲು ಪಾವತಿಯನ್ನೂ ಸಹ ಮಾಡದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಸರ್ಕಾರಿ ಕೋಟದಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ 61 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅದರಲ್ಲಿ 24 ವೈದ್ಯರು ಹೇಳದೇ ಕೇಳದೇ ಕೆಲಸ ಬಿಟ್ಟು ಹೋಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವ ವಿದ್ಯಾರ್ಥಿಗೆ ಸರ್ಕಾರವು ಸುಮಾರು 2 ಕೋಟಿ ರೂ ಅಧಿಕ ಮೊತ್ತವನ್ನು ವೆಚ್ಚ ಮಾಡುತ್ತಿದ್ದು, ವೈದ್ಯಕೀಯ ಪದವಿ ಪಡೆದ ಇಂತಹ ವೈದ್ಯರು ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಬೇಕು ಎಂಬ ನಿಯಮವಿದ್ದು, ಅದರಂತೆ ಕೆಲಸಕ್ಕೆ ಸೇರಿ, ಉತ್ತಮ ವೇತನ ನೀಡಿದರೂ ಕೂಡಾ ಯಾವುದೇ ಸೂಕ್ತ ಕಾರಣ ನೀಡದೇ ಕೆಲಸ ಬಿಟ್ಟು ಹೋಗಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವರು, ಅಂತಹ ವೈದ್ಯರ ವಿರುದ್ದ ಕಾನೂನು ಸಲಹೆ ಪಡೆದು ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ವೈದ್ಯರು ಮತ್ತು ಸಿಬ್ಬಂದಿಗಳು ಗೌರವದಿಂದ ಕಾಣುವುದರ ಜತೆಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಹಾಗೂ ಆಸ್ಪತ್ರೆಗೆ ಬರುವವರು ಬಡಜನತೆಯಾಗಿದ್ದು, ಅವರಿಗೆ ಚೀಟಿ ನೀಡಿ ಹೊರಗಡೆಯಿಂದ ಔಷಧ ಪಡೆಯಲು ತಿಳಿಸುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಹಾಗೂ ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದಿದ್ದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಮೂಲಕ ಖರೀದಿಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಗಳನ್ನು ಉಚಿತವಾಗಿ ನೀಡಬೇಕು ಎಂದು ಸೂಚಿಸಿದ ಸಚಿವರು, ಜಿಲ್ಲಾ ಆಸ್ಪತ್ರೆಗೆ ಬೇಕಾದ ಎಂ.ಆರ್.ಐ ಯಂತ್ರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು 112 ಮಂಗನಕಾಯಿಲೆ ಪ್ರಕರಣಗಳು ವರದಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂಬ ಆರೋಗ್ಯ ಇಲಾಖೆಯ ಮಾಹಿತಿಯ ಕುರಿತಂತೆ, ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಾಡು ಪ್ರಾಣಿಯಿಂದ ಮರಣ ಹೊಂದಿದವರಿಗೆ ಅರಣ್ಯ ಕಾಯ್ದೆಯಡಿಯಲ್ಲಿ 15 ಲಕ್ಷ ಪರಿಹಾರ ನೀಡಲು ಅವಕಾಶವಿರುವುದರಿಂದ, ಮಂಗನ ಕಾಯಿಲೆಯಿಂದ ಮರಣ ಹೊಂದಿದವರನ್ನು ಮತ್ತು ಹಾವು ಕಡಿತದಿಂದ ಮರಣ ಹೊಂದಿದವರಿಗೆ ಈ ಕಾಯಿದೆಯಡಿಯಲ್ಲಿಯೇ ಪರಿಹಾರ ಒದಗಿಸುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಜಿಲ್ಲೆಯಲ್ಲಿನ ಸರ್ಕಾರಿ ಜಾಗಗಳು ಯಾವುದೇ ಕಾರಣಕ್ಕೂ ಅತಿಕ್ರಮಣವಾಗದಂತೆ ಜಾಗದ ಸರ್ವೇ ಮಾಡಿಸಿ, ಅದಕ್ಕೆ ಕಂಪೌಂಡ್ ಹಾಕಬೇಕು. ಸರ್ಕಾರಿ ಜಾಗ ಅತಿಕ್ರಮಣವಾದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲಾ ಅಗತ್ಯ ಸಹಕಾರ ನೀಡಲಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣವಾದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳಲು ಆದ ಸಮಸ್ಯೆ ಏನು ಎಂಬುದರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಉತ್ತಮ ಮಾರ್ಗದರ್ಶನ ನೀಡಿ 100% ಉತ್ತೀರ್ಣರಾಗಲು ಶ್ರಮವಹಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವರು, ಕಾಮಗಾರಿ ಆರಂಭಗೊಂಡು 9 ವರ್ಷಗಳು ಕಳೆದರೂ ಇನ್ನೂ ಮುಕ್ತಾಯಗೊಂಡಿಲ್ಲ, ಟೋಲ್ ಮಾತ್ರ ವಸೂಲಿ ಮಾಡುತ್ತಿದ್ದೀರಿ, ಪ್ರತೀ ಸಭೆಯಲ್ಲೂ ಕಾಮಗಾರಿಯ ಪ್ರಗತಿಯ ಬಗ್ಗೆ ಸೂಕ್ತ ಉತ್ತರ ದೊರೆಯುವುದಿಲ್ಲ. ಕಾಮಗಾರಿ ಮುಕ್ತಾಯಗೊಳಿಸದೇ ಶೇಖರಣೆ ಮಾಡಿಟ್ಟುಕೊಂಡಿರುವ ಜಲ್ಲಿ, ಮರಳು ಮತ್ತು ಕಲ್ಲುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು 6 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಸಭೆಗೆ ತಿಳಿಸಿದರು.

ಮೀನುಗಾರರಿಗೆ ಸಂಕಷ್ಟ ಪರಿಹಾರ ಭತ್ಯೆಯನ್ನು 24 ಗಂಟೆಯೊಳಗೆ ನೀಡುವಂತೆ ಸೂಚನೆ ನೀಡಿದ ಸಚಿವರು, ಮೀನುಗಾರರಿಗೆ ಲಭ್ಯವಿರುವ ಯೋಜನೆಗಳ ಬಗ್ಗೆ ಮೀನುಗಾರರ ಸಂಘಗಳಿಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಾಗೂ ಮೀನುಗಾರರ ಮಹಿಳೆಯರಿಗೆ ಹಾಗೂ ಮೀನುಗಾರಿಕೆ ಉದ್ದೇಶಕ್ಕೆ ನೀಡುವ ಸಾಲವನ್ನು ಅನಗತ್ಯ ಕಾರಣಗಳಿಂದ ತಿರಸ್ಕರಿಸದೇ ಸಕಾಲದಲ್ಲಿ ಸಾಲವನ್ನು ವಿತರಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಂಜೂರಾದ ಅಂಗನವಾಡಿಗಳು ಮುಂದಿನ 6 ತಿಂಗಳ ಒಳಗೆ ಸ್ವಂತ ನಿವೇಶನ ಹಾಗೂ 1 ವರ್ಷದೊಳಗೆ ಸ್ವಂತ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಕುಡಿಯುವ ನೀರಿನ ಯೋಜನೆಗಳಿಗಾಗಿ ರಸ್ತೆಗಳನ್ನು ಹಾಳು ಅಗೆದು ಹಾಳು ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಹಾಗೂ ಭಟ್ಕಳದಲ್ಲಿ ಒಳ ಚರಂಡಿ ಯೋಜನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಂಡು, ಯೋಜನೆಯ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ಕರೆದು ಅಗತ್ಯ ಮಾಹಿತಿ ನೀಡುವಂತೆ ಮತ್ತು ನಗರ ಸ್ಥಳೀಯ ಸಂಸ್ಥೆಯ ಸಮನ್ವಯದೊಂದಿಗೆ ಕಾಮಗಾರಿ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಕೆಡಿಪಿ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Karnataka Weather: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜೂನ್‌ 26) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗಿನ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

VISTARANEWS.COM


on

Karnataka Weather
ಬುಧವಾರ ಸುರಿದ ಮಳೆಗೆ ಮಂಗಳೂರಿನ ಪಡೀಲು ರೈಲ್ವೆ ಅಂಡರ್‌ ಪಾಸ್ ಜಲಾವೃತವಾಗಿರುವುದು.
Koo

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್‌ 27) ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ (Rain News) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ದ.ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು(ಜೂ.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ‌ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗಿನ 2 ತಾಲೂಕುಗಳಲ್ಲಿ ರಜೆ

ಕೊಡಗು: ಜಿಲ್ಲೆಯಲ್ಲಿ ಹಲವೆಡೆ ವರುಣಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಲಾಗಿದೆ.

ಇನ್ನು ಜೂನ್ 28ರಂದು ಕೂಡ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಕಡೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಆಗುವ ಸಾಧ್ಯತೆಯಿದೆ. ಜೂನ್‌ 30ರವರೆಗೆ ಇದೇ ರೀತಿಯ ಸ್ಥಿತಿ ಕರಾವಳಿ ಜಿಲ್ಲೆಗಳಲ್ಲಿ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗುರುವಾರ ತೀವ್ರ ಬಿರುಗಾಳಿ (ಗಂಟೆಗೆ 35ರಿಂದ 55 ಮಿ.ಮೀ ವೇಗ) ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಬೆಳಗ್ಗೆ 8:30ರಿಂದ ರಾತ್ರಿ 11.30ರವರೆಗೆ 3.4 ರಿಂದ 3.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ.

ಉಡುಪಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ ಸಂಜೆ 5.30ರಿಂದ ರಾತ್ರಿ 11:30 ಗಂಟೆಗಳವರೆಗೆ 3.5 ರಿಂದ 3.7 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗಲಿವೆ.

ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ ಸಂಜೆ 5.30ರಿಂದ ರಾತ್ರಿ 11.30ರವರೆಗೆ 3.7ರಿಂದ 3.9 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಹೀಗಾಗಿ ಸಣ್ಣ ಹಡಗುಗಳು ಸಂಚರಿಸದಂತೆ ಹಾಗೂ ಮನರಂಜನಾ ಚಟುವಟಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ | Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (30-40 kmph) ತುಂಬಾ ಸಾಧ್ಯತೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 C ಮತ್ತು 21C ಇರಲಿದೆ.

Continue Reading

ಕರ್ನಾಟಕ

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

MEIL: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್‌) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ. ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

MEIL got the opportunity to implement Kaiga nuclear power generation project
Koo

ಬೆಂಗಳೂರು: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (MEIL) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ.

ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು (Bengaluru News) ತನ್ನದಾಗಿಸಿಕೊಂಡಿದೆ.

ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡೆಸುವ ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ) ಗುತ್ತಿಗೆಗೆ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮಿದೆ. ಈ ಪ್ರತಿಷ್ಠಿತ ಯೋಜನೆಯು ಕರ್ನಾಟಕದ ಕೈಗಾದಲ್ಲಿ ನಿರ್ಮಾಣವಾಗಲಿದ್ದು, ಶುದ್ಧ ಮತ್ತು ವಿಶ್ವಾಸಾರ್ಹ ಪರಮಾಣು ಶಕ್ತಿಯತ್ತ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ (ಕ್ಯೂಸಿಬಿಎಸ್) ವಿಧಾನವನ್ನು ಪರಿಚಯಿಸುವುದರೊಂದಿಗೆ ಈ ಯೋಜನೆಯು ಮಹತ್ವ ಪಡೆದುಕೊಂಡಿದ್ದು, ಈ ಕಠಿಣ ಯೋಜನೆ ಜಾರಿಗೆ ತಾಂತ್ರಿಕ ಪರಿಣಿತಿ ಮತ್ತು ಕಡಿಮೆ ವೆಚ್ಚದ ವಿದ್ಯುತ್‌ ಉತ್ಪಾದನೆ ಹಾದಿ ಸುಗಮಗೊಳಿಸಲಿದೆ.

ಟೆಂಡರ್ ಪ್ರಕ್ರಿಯೆಯು ಮೇ 2023ರಲ್ಲಿ ಪ್ರಾರಂಭವಾಯಿತು, ತಾಂತ್ರಿಕ ಬಿಡ್ ಅಕ್ಟೋಬರ್ 2023 ರಲ್ಲಿ ತೆರೆಯಲ್ಪಟ್ಟಿತು. ಅತ್ಯಂತ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆಗಳಾದ ಬಿಎಚ್ಇಎಲ್, ಎಲ್ ಅಂಡ್‌ ಟಿ ಮತ್ತು ಎಂಇಐಎಲ್ ಆಸಕ್ತಿ ತೋರಿಸಿತ್ತು. ಎಂಇಐಎಲ್ 12,799.92 ಕೋಟಿ ರೂ.ಗಳ ಕನಿಷ್ಠ ಬಿಡ್ ಸಲ್ಲಿಸುವ ಮೂಲಕ ತನ್ನ ಅಸಾಧಾರಣ ತಾಂತ್ರಿಕ ಸಾಮರ್ಥ್ಯ ಮತ್ತು ವೆಚ್ಚ-ದಕ್ಷತೆಯನ್ನು ಪ್ರದರ್ಶಿಸುವ ಮೂಲಕ ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮುವ ಮೂಲಕ ನಿರ್ಮಾಣ ಕಾರ್ಯದ ಜವಾಬ್ದಾರಿ ವಹಿಸಿಕೊಂಡಿದೆ.

“ಈ ಒಪ್ಪಂದವು ಎಂಇಐಎಲ್‌ಗೆ ಮಹತ್ವದ ಯೋಜನೆ ಜತೆಗೆ ಪರಮಾಣು ಇಂಧನ ಕ್ಷೇತ್ರದ ಪ್ರವೇಶಕ್ಕೆ ಸಮರ್ಥ ವೇದಿಕೆಯಾಗಿದೆ ” ಎಂದು ಎಂಇಐಎಲ್ ನಿರ್ದೇಶಕ ಸಿ.ಎಚ್.ಸುಬ್ಬಯ್ಯ ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

“ಉತ್ಕೃಷ್ಟತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿರುವ ಎಂಇಐಎಲ್‌ ಈ ಯೋಜನೆ ಮೂಲಕ ದೇಶದ ಶುದ್ಧ ಇಂಧನ ಪರಿಹಾರ ಮತ್ತು ಸ್ವಾವಲಂಬನೆಗೆ ಕೊಡುಗೆ ನೀಡಲು ಉತ್ಸುಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Rain News: ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Rain News
ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
Koo

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿ ವಿವಿಧೆಡೆ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ (Rain News) ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಬೃಹತ್‌ ಮರಗಳು ರಸ್ತೆಗೆ ಉರುಳಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಇನ್ನು ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ‌ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನ ನೀಡಿದೆ.

ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

ಕೊಡಗು: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ‌ಯಾಗಿದ್ದು, ಪುಷ್ಪಗಿರಿ, ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರಿ ಮಳೆಯಿಂದನದಿ, ತೊರೆ, ಹಳ್ಳ, ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟವೂ ಗಣನೀಯ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಇನ್ನು ಗಾಳಿ ಮಳೆಗೆ ಹಲವೆಡೆ ಮರ ಗಿಡಗಳು ನೆಲಕ್ಕುರುಳಿವೆ.

ಮಡಿಕೇರಿ ವ್ಯಾಪ್ತಿಯಲ್ಲಿ ರಾತ್ರಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗದಲ್ಲಿ ರಸ್ತೆಯ ಮೇಲೆ ಬೃಹತ್ ಮರ ಬಿದ್ದ‌ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯವಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಇಂದು (ಬುಧವಾರ) ಬೆಳಗ್ಗೆಯಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ, ಮಧ್ಯಾಹ್ನದ ಬಳಿಕ ಮತ್ತೆ ಆರ್ಭಟಿಸುತ್ತಿದ್ದಾನೆ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿದೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ.

ಮಲೆನಾಡಿನಲ್ಲಿ ಮಳೆ ಆರ್ಭಟ ಜೋರು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದ ಬಳಿ ಕಳಸ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಮರ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳೀಯರಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.

ಇನ್ನು ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಮಲೆಮನೆ, ರಾಣಿಜರಿ, ಸುಂಕಸಾಲೆ, ದೇವರಮನೆ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.

ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ, ಇಂದು ಬೆಳಗ್ಗೆಯಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಗಾಳಿ-ಮಳೆಗೆ ಚಾರ್ಮಾಡಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾರವಾರದಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಕಾರವಾರ ನಗರದ ಮಾಲಾದೇವಿ ಮೈದಾನ ಸಮೀಪ ಚರಂಡಿಯಲ್ಲಿ ನೀರು ಹರಿಯದ ಪರಿಣಾಮ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಮಲೆನಾಡು ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಮಳೆಯಬ್ಬರ ಹೆಚ್ಚಿದ್ದು, ಕರಾವಳಿ ಭಾಗದ ಕಾರವಾರ, ಅಂಕೋಲಾ ಭಟ್ಕಳ, ಹೊನ್ನಾವರ ಭಾಗದಲ್ಲಿ ಅಲ್ಪ ಮಳೆಯಾಗಿದೆ. ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇದನ್ನೂ ಓದಿ | IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

Continue Reading

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading
Advertisement
murder case anekal
ಕ್ರೈಂ15 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ38 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ47 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ9 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌