Uttara Kannada News: ಮಕ್ಕಳಿಗೆ ಶುಚಿ-ರುಚಿ ಆಹಾರ ನೀಡಿ: ಸತೀಶ್ ಹೆಗಡೆ - Vistara News

ಉತ್ತರ ಕನ್ನಡ

Uttara Kannada News: ಮಕ್ಕಳಿಗೆ ಶುಚಿ-ರುಚಿ ಆಹಾರ ನೀಡಿ: ಸತೀಶ್ ಹೆಗಡೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಾನಳ್ಳಿ, ಸಾಲ್ಕಣಿ, ಮೇಲಿನ ಓಣಿಕೇರಿ, ಹಾಗೂ ಹುಣಸೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Children should be given quality education along with good food says satish hegde
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮವಾದ ಆಹಾರ ನೀಡಬೇಕು. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಸೂಚನೆ (Uttara Kannada News) ನೀಡಿದರು.

ಜಿಲ್ಲೆಯ ಶಿರಸಿ ತಾಲೂಕಿನ ವಾನಳ್ಳಿ, ಸಾಲ್ಕಣಿ, ಮೇಲಿನ ಓಣಿಕೇರಿ, ಹಾಗೂ ಹುಣಸೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಶಾಲೆಯಲ್ಲಿ ನೀಡುವ ಆಹಾರದ ಗುಣಮಟ್ಟ, ಆಹಾರದ ಪ್ರಮಾಣ, ದಾಖಲೆಗಳ ನಿರ್ವಹಣೆ ಹಾಗೂ ಶಾಲಾ ಕೊಠಡಿ, ಗ್ರಂಥಾಲಯ ಇತರೆ ವಿಷಯಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಶಾಲೆಯಲ್ಲಿನ ಅಡುಗೆ ಕೋಣೆ ಸ್ವಚ್ಛವಾಗಿರಬೇಕು. ಅಲ್ಲದೇ ಮಕ್ಕಳಿಗೆ ನೀಡಲಾಗುವ ಪೌಷ್ಟಿಕ ಆಹಾರ ಸರಿಯಾಗಿ ವಿತರಣೆಯಾಗಬೇಕು, ಆಹಾರ ಶೇಖರಣಾ ಕೊಠಡಿಯು ಶುದ್ಧವಾಗಿದ್ದು, ಭದ್ರವಾಗಿರಬೇಕು. ಅವಧಿ ಮೀರಿದ ಹಾಗೂ ಶುದ್ಧವಿಲ್ಲದ ಅಕ್ಕಿ, ಬೇಳೆಕಾಳುಗಳ ಬಳಕೆ ಮಾಡದಂತೆ ಅವರು ಸೂಚನೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು ನರೇಗಾದಡಿ ಮಾನವದಿನಗಳ ಸೃಜನೆ, ಕಾಮಗಾರಿಯಲ್ಲಿ ಪ್ರಗತಿ ಸಾಧನೆ, ಎಸ್‌ಬಿಎಂ, ವಸತಿ ಮನೆ ನಿರ್ಮಾಣ ಇತ್ಯಾದಿ ವಿಷಯಗಳ ಕುರಿತು ಪ್ರಗತಿ ಸಾಧಿಸುವಂತೆ ತಿಳಿಸಿದರು.

ಇದನ್ನೂ ಓದಿ: Kannada New Movie: ಮೈಸೂರಿನ 100 ವರ್ಷಗಳ ಹಳೇ ಮನೆಯಲ್ಲಿ ʼಫಾದರ್ʼ ಸಿನಿಮಾ ಚಿತ್ರೀಕರಣ

ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರವಿ ಬೆಂಚುಳ್ಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

VISTARANEWS.COM


on

rain news kottigehara bus stand collapse
Koo

ಚಿಕ್ಕಮಗಳೂರು: ಮಲೆನಾಡಿನಲ್ಲಿ (Western Ghats) ಧಾರಾಕಾರ ಮಳೆ (Rain News) ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ (Kottigehara Bus Stand) ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ (bus stand collapse) ಧ್ವಂಸವಾಗಿದೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.

ಶೃಂಗೇರಿಯಲ್ಲಿ ಮುಳುಗಡೆ

ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿದ್ದು, ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ. ನದಿ ತಟದಲ್ಲಿದ್ದ ಅಂಗಡಿ ಮುಂಗಟ್ಟು, ಪಾರ್ಕಿಂಗ್ ಜಾಗ ಮುಳುಗಡೆಯಾಗಿವೆ. ಪಟ್ಟಣದ ಯಾತ್ರಿ ನಿವಾಸದ ವರೆಗೂ ನದಿಯ ನೀರು ನುಗ್ಗಿದೆ. ನದಿ ಪಕ್ಕದ ಪ್ಯಾರಲಲ್ ರಸ್ತೆಯೂ ಸಂಪೂರ್ಣ ಮುಳುಗಡೆಯಾಗಿದ್ದು, ಶೃಂಗೇರಿಯಲ್ಲಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳಿಗೆ ರಜೆ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಶಿವಮೊಗ್ಗದಲ್ಲಿ ರೆಡ್‌ ಅಲರ್ಟ್‌

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲಿ ವೃದ್ಧೆ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರದ ಪರಿಣಾಮ, ಜಲಾವೃತಗೊಂಡ ಮನೆಯಲ್ಲಿದ್ದ ರೋಗಿಯನ್ನು ಹೊರತರಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು. ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದಲ್ಲಿ ಹೆಚ್ಚಿದ ನೀರಿನ ಪ್ರಮಾಣದಿಂದಾಗಿ ಮನೆಗೆ ನೀರು ನುಗ್ಗಿತ್ತು.

ಅಸ್ತಮಾ ರೋಗದಿಂದ ಬಳಲುತ್ತಿದ್ದ ಸ್ವಾತಿ ರತ್ನಾಕರ ನಾಯ್ಕ (67) ಹಾಗೂ ಅವರ ಪತಿ ನೀರು ನುಗ್ಗಿದ ಮನೆಯಲ್ಲೇ ಉಳಿದಿದ್ದರು. ದಂಪತಿಗಳನ್ನು ತಾಲೂಕಾಡಳಿತ ಹಾಗೂ ಸ್ಥಳೀಯರು ಮನವೊಲಿಸಿ ಮನೆಯಿಂದ ಹೊರತಂದರು. ನಾಲ್ಕು ಅಡಿ ನೀರಿನಲ್ಲೇ ರೋಗಿಯನ್ನ ಹೊತ್ತು ತಂದು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆ ಗೆ ರವಾನಿಸಿದರು.

ತುರ್ತು ಕಾರ್ಯಾಚರಣೆ ಕೇಂದ್ರ

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

Continue Reading

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಾಚರಣೆ ಕೇಂದ್ರ ಸ್ಥಾಪನೆ: ಡಿಸಿ

Uttara Kannada News: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

VISTARANEWS.COM


on

Emergency Operations Center opened for public assistance says DC Lakshmipriya
Koo

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನೌಕಾನೆಲೆ ಬಳಿ ಸಂಭವಿಸಿರುವ ನೆರೆ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿದ್ದು, ಈ ಪ್ರದೇಶದಲ್ಲಿ ನೀರು ಹರಿಯಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಮತ್ತು ನಿಂತಿರುವ ನೀರನ್ನು ಪಂಪ್ ಮಾಡುವ ಮೂಲಕ ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara kannada News: ಪ್ರವಾಹ ಪೀಡಿತ ಪ್ರದೇಶಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಭೇಟಿ

Uttara kannada News: ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ, ಕಾರವಾರ ತಾಲೂಕಿನ ಚೆಂಡಿಯಾ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗಾ, ಐಸ್‌‌ಫ್ಯಾಕ್ಟರಿ ಚೆಂಡಿಯಾ, ಪೋಸ್ಟ್‌ ಚೆಂಡಿಯಾ, ಇಡೂರು ಸೇರಿದಂತೆ‌ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು.

VISTARANEWS.COM


on

Former MLA Rupali Naika visited the flood affected area of Karwar taluk
Koo

ಕಾರವಾರ: ಕಾರವಾರ ತಾಲೂಕಿನ ಜಲಾವೃತ ಪ್ರದೇಶಗಳಿಗೆ ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ, ಭೇಟಿ ನೀಡಿ, ಜನತೆಯ ಅಹವಾಲನ್ನು (Uttara kannada News) ಆಲಿಸಿದರು.

ಕಾರವಾರ ತಾಲೂಕಿನ ಚೆಂಡಿಯಾ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗಾ, ಐಸ್‌‌ಫ್ಯಾಕ್ಟರಿ ಚೆಂಡಿಯಾ, ಪೋಸ್ಟ್‌ ಚೆಂಡಿಯಾ, ಇಡೂರು ಸೇರಿದಂತೆ‌ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು.

ಚತುಷ್ಪಥ ಹೆದ್ದಾರಿ ಅಗಲೀಕರಣ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಕಂಪನಿಯು ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆ ಕಾಮಗಾರಿಗಳಿಂದ ಸಮುದ್ರಕ್ಕೆ ಸೇರುವ ನೀರಿಗೆ ತಡೆಯಾಗುತ್ತಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುತ್ತಿದೆ ಎಂದು ತಿಳಿಸಿದ ರೂಪಾಲಿ ಎಸ್. ನಾಯ್ಕ, ನೌಕಾನೆಲೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ಹಿಂದೆ ತಾವು ಶಾಸಕರಾಗಿರುವಾಗಲೂ ನೀರು ಹರಿದುಹೋಗಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೆ. ಆದರೆ ಅಗತ್ಯ ಕ್ರಮ ಕೈಗೊಳ್ಳದೇ ಇರುವುದರಿಂದ ಎಲ್ಲೆಡೆ ನೀರು ತುಂಬುತ್ತಿದೆ. ಜನತೆ ಮೇಲಿಂದ ಮೇಲೆ ತೊಂದರೆ ಅನುಭವಿಸುವಂತಾಗಿದೆ ಎಂದರು.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

ಇಲ್ಲಿನ ಜನತೆ ನೌಕಾನೆಲೆಗಾಗಿ, ರಾಷ್ಟ್ರಕ್ಕಾಗಿ ಮನೆ, ಆಸ್ತಿ ಪಾಸ್ತಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಹೀಗಿದ್ದರೂ ಅವರಿಗೆ ನೌಕಾನೆಲೆ ಸಹಕರಿಸದೇ ಇದ್ದರೆ ಹೇಗೆ. ನೀರು ತುಂಬದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನೀರು ಸರಾಗವಾಗಿ ಹರಿದುಹೋಗಲು ಇರುವ ಅಡ್ಡಿಯನ್ನು ನಿವಾರಿಸಿ ಶಾಶ್ವತ ಕ್ರಮ ಕೈಗೊಳ್ಳುವಂತೆ ನೌಕಾನೆಲೆ ಅಧಿಕಾರಿಗಳಿಗೆ ತಾಕೀತು ಪಡಿಸಿದರು. ನಂತರ ನೀರು ಹರಿದು ಹೋಗಲು ತಡೆಯಾಗುತ್ತಿದ್ದ ಜಾಗಗಳನ್ನು ನೌಕಾನೆಲೆ ಅಧಿಕಾರಿಗಳಿಗೆ ತಿಳಿಸಲಾಯಿತು. ನೀರಿನ ಹರಿವಿಗೆ ಆಗಿರುವ ಅಡ್ಡಿಯನ್ನು ತೆರವುಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ಸುರಿಯುತ್ತಿರುವ ಮಳೆಯ ನಡುವೆಯೇ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಅಲ್ಲದೇ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರೊಂದಿಗೆ ಚರ್ಚಿಸಿ, ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

Continue Reading
Advertisement
Iti Acharya
ಸಿನಿಮಾ12 seconds ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 min ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ4 mins ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

valmiki corporation scam culprits
ಪ್ರಮುಖ ಸುದ್ದಿ28 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ31 mins ago

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Former MPs
ದೇಶ32 mins ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Hardik Pandya
ಕ್ರೀಡೆ35 mins ago

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Monkey Attack
Latest1 hour ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ1 hour ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್1 hour ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ22 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌