ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ ಮಂಗಳವಾರ ಯಲ್ಲಾಪುರದ ಆಶಿಯಾ ಸಮಾಜ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ (Cleanliness Movement) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಜ್ರಳ್ಳಿಯ ಸರ್ವೋದಯ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ಟಿ.ಸಿ.ಗಾಂವ್ಕಾರ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತವಾದ ಪರಿಸರ ಎಲ್ಲರ ಸಂಕಲ್ಪವಾಗಬೇಕು. ನಿತ್ಯ ನಾವು ಬಳಸುವ ವಸ್ತುಗಳು ತ್ಯಾಜ್ಯಗಳಾಗಿ ನಮ್ಮ ಜೀವನಕ್ಕೆ ಆತಂಕ ತಂದೊಡ್ಡಿದೆ ಎಂದರು.
ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಗೀರಥ ನಾಯ್ಕ ಮಾತನಾಡಿ, ಸ್ವಚ್ಛತೆಯ ಕುರಿತಾದ ಜಾಗೃತಿ ನಮ್ಮ ಮನಸ್ಸಿನಲ್ಲಿ ಮೊದಲು ಮೂಡಬೇಕು. ನಾವು ಬದಲಾಗದೇ ನಮ್ಮ ಜೀವನ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಬದುಕಿನ ಜತೆಗೆ ಎಲ್ಲರ ಆರೋಗ್ಯ ಪೂರ್ಣವಾದ ಬದುಕನ್ನು ಯೋಚಿಸಿ ಸ್ವಚ್ಛತೆಯ ಕಾಳಜಿ ವಹಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: karnataka Weather : ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ನಮ್ಮ ಸಮಾಜದಲ್ಲಿ ಸ್ವಚ್ಛತೆ ಕಾಪಾಡಿದರೆ ನಾವು ದೇಶಸೇವೆ ಮಾಡಿದ ಹಾಗೆಯೇ. ಕಸದ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಪ್ಲಾಸ್ಟಿಕ್ ಮರುಬಳಕೆಯ ಬಗ್ಗೆ ಗಂಭೀರವಾಗಿ ಯೋಚಿಸುವ ಕಾಲ ಬಂದಿದೆ ಎಂದರು.
ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಭಟ್ಟ ಕೀಚನಾಳ, ಆಶಿಯಾ ಸಮಾಜ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವಿಜಯ ನಾಯ್ಕ, ಅಧ್ಯಕ್ಷ ಅನಿಲ್ ಮರಾಠೆ, ಸಂಸ್ಥೆಯ ಸದಸ್ಯರಾದ ಫರಜಾನಾ, ಆಯೇಷಾ, ಬಾನು ಬಿ., ಮುಶೃತ್, ಬಾಲಚಂದ್ರ ಹಾಗೂ ಮುಖ್ಯಾಧ್ಯಾಪಕ ಎಂ. ಕೆ. ಭಟ್ಟ, ಗ್ರಾಮ ಪಂಚಾಯಿತಿಯ ದತ್ತಾತ್ರೇಯ ಆಚಾರಿ, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?
ಶಿಕ್ಷಕ ಎಸ್. ಟಿ. ಬೇವಿನಕಟ್ಟಿ ನಿರ್ವಹಿಸಿ, ವಂದಿಸಿದರು. ನಂತರ ವಜ್ರಳ್ಳಿಯ ಬೀಗಾರ ಬಸ್ ನಿಲ್ದಾಣದಿಂದ ಹೊನ್ನಗದ್ದೆ ಕ್ರಾಸ್ ವರೆಗೆ ಆಶಿಯಾ ಸಮಾಜ ಸೇವಾ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯ ನಡೆಸಿದರು.