Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ - Vistara News

ಉತ್ತರ ಕನ್ನಡ

Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನೆಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ. ರಮಣ ರೆಡ್ಡಿ ತಿಳಿಸಿದ್ದಾರೆ.

VISTARANEWS.COM


on

Create employment opportunities for local youth says Dr Raman Reddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನೆಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಇ.ವಿ. ರಮಣರೆಡ್ಡಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ಮತ್ತು ನೌಕಾ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗವಕಾಶಗಳನ್ನು ಸ್ಥಳೀಯ ಯುವಜನತೆ ಒದಗಿಸುವ ಮೂಲಕ ಸ್ಥಳೀಯರಿಗೆ ಆರ್ಥಿಕ ಭದ್ರತೆ ಒದಗಿಸಬಹುದಾಗಿದೆ.

ಪ್ರಸ್ತುತ ಈ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಸ್ಥಳೀಯ ಯುವಜನತೆ ದೊರೆಯದ ಕಾರಣ ಹೊರರಾಜ್ಯದಿಂದ ಕಾರ್ಮಿಕರು ಬರುತ್ತಿದ್ದಾರೆ. ಈ ಕಾರ್ಮಿಕರಿಗೆ ಇಲ್ಲಿ ತಂಗಲು ವಸತಿ ವ್ಯವಸ್ಥೆ ಮತ್ತು ಊಟೋಪಚಾರದ ವ್ಯವಸ್ಥೆಯನ್ನೂ ಸಹ ಸಂಬಂಧಪಟ್ಟ ಕಾರ್ಮಿಕ ಏಜೆನ್ಸಿಗಳು ನೋಡಿಕೊಳುತ್ತಿದ್ದು ಅವರಿಗೂ ಸಹ ಇದು ಹೆಚ್ಚಿನ ಹೊರೆಯಾಗಿದೆ ಎಂದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

ಆದ್ದರಿಂದ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಲಭ್ಯವಿರುವ ಉದ್ಯೋಗವಕಾಶಗಳು, ಮಾನವ ಸಂಪನ್ಮೂಲದ ಬೇಡಿಕೆ ಮತ್ತು ಅದಕ್ಕೆ ಅಗತ್ಯವಿರುವ ಕೌಶಲ್ಯ ತರಬೇತಿಯ ಕುರಿತಂತೆ ಸಂಬಂಧಪಟ್ಟ ಸಂಸ್ಥೆಗಳಿಂದ ಮಾಹಿತಿ ಪಡೆದು, ಇಲ್ಲಿನ ಸ್ಥಳೀಯ ಯುವಜನತೆಗೆ ಕೌಶಲ್ಯ ತರಬೇತಿ ನೀಡುವುದರ ಮೂಲಕ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೌಶಲ್ಯ ತರಬೇತಿ ಪಡೆದಿರುವ ಜಿಲ್ಲೆಯ ಸ್ಥಳೀಯ ಯುವಜನತೆಗೆ ನೌಕಾ ನೆಲೆಯಲ್ಲಿ ಅಪ್ರೆಂಟಿಸ್ ತರಬೇತಿ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಒದಗಿಸುವುದಾಗಿ ನೌಕಾನೆಲೆಯ ಅಧಿಕಾರಿಗಳು ತಿಳಿಸಿದರು. ಸೂಕ್ತ ತರಬೇತಿ ಪಡೆದಿರುವ ಸ್ಥಳೀಯ ಯುವಜನತೆಗೆ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ನೀಡುವುದಾಗಿ ಮಾನವ ಸಂಪನ್ಮೂಲ ಒದಗಿಸುವ ಸಂಸ್ಥೆಗಳ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ತಿಳುವಳಿಕೆ ಪತ್ರದ ಒಪ್ಪಂದ ಮಾಡಿಕೊಂಡು, ಸ್ಥಳೀಯ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಾ.ಇ.ವಿ.ರಮಣರೆಡ್ಡಿ ಸೂಚನೆ ನೀಡಿದರು.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್ ನೌಕಾನಲೆ, ಕೌಶಲ್ಯಾಭಿವೃದ್ದಿ, ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Uttara Kannada News: ಐಆರ್‌ಬಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಸಚಿವ ಮಂಕಾಳ ವೈದ್ಯ ಸೂಚನೆ

Uttara Kannada News: ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐಆರ್‌ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

VISTARANEWS.COM


on

Minister Mankala Vaidya instructed to file a case against IRB and National Highways officers
Koo

ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐಆರ್‌ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ (Uttara Kannada News) ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಉಸ್ತುವಾರಿ ಸಚಿವರು, ಈ ಘಟನೆಗೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಪ್ರಮುಖ ಕಾರಣವಾಗಿದ್ದು, ಮೃತರ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಐಆರ್‌ಬಿ ಕಂಪನಿಯ ಅಧಿಕಾರಿಗಳ ವಿರುದ್ಧ ಪೊಲೀಸ್ ಪ್ರಕರಣ ಮತ್ತು ಗುಡ್ಡ ಕುಸಿತಕ್ಕೆ ಕಾರಣವಾದ ಕಾರಣ ಅರಣ್ಯ ಇಲಾಖೆಯ ಕಾಯ್ದೆಯಡಿ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ, ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದು, ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದರು.

ಇದನ್ನೂ ಓದಿ: Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

ರಸ್ತೆ ಕಾಮಗಾರಿಯನ್ನು ಯಾವಾಗ ಮುಕ್ತಾಯಗೊಳಿಸುತ್ತೀರಿ? ಎಂಬ ಪ್ರಶ್ನೆಗೆ ಐಆರ್‌ಬಿ ಅಧಿಕಾರಿಗಳು ಸೂಕ್ತ ಉತ್ತರ ನೀಡಲಿಲ್ಲ‌. ಇದರಿಂದ ತೀವ್ರ ಅಸಮಾಧಾನಗೊಂಡ ಸಚಿವರು, ಸ್ಪಷ್ಟ ಉತ್ತರ ನೀಡುವವರೆಗೆ ಜಿಲ್ಲಾಡಳಿತದಿಂದ ಯಾವುದೇ ಸಹಕಾರ ನೀಡದಂತೆ ಸೂಚಿಸಿದರು.

ಮಳೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲು ವಿಳಂಬ ಮಾಡಬೇಡಿ, ಕಾಳಜಿ ಕೇಂದ್ರದಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ತಿಳಿಸಿದ ಸಚಿವರು, ಎಲ್ಲಾ ತಾಲೂಕುಗಳಿಗೆ ಕಾಳಜಿ ಕೇಂದ್ರ ತೆರೆಯಲು ಅನುದಾನದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದರು.

ಅಣಶಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ರಸ್ತೆ ಅಗಲೀಕರಣ ಕೈಗೊಳ್ಳಲು ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿ, ಜಾರಿಗೊಳಿಸುವಂತೆ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದರು.

ಇದನ್ನೂ ಓದಿ: Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Karnataka Rain: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

ಉಡುಪಿ ಜಿಲ್ಲೆಯ ಸೀತಾ ನದಿ ಹರಿಯುವ ಭಾಗದಲ್ಲಿ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯ.
Koo

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿಯಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ (Karnataka Rain) ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನ ರಭಸಕ್ಕೆ ಹಲವೆಡೆ ಸೇತುವೆಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ವರುಣಾರ್ಭಟಕ್ಕೆ ನದಿಗಳು ಉಕ್ಕಿ ಹರಿದು ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆಯಾಗಿದೆ. ಕುಮಟಾ ತಾಲೂಕಿನ ಹಲವು ಗ್ರಾಮಗಳಲ್ಲಿ ಅಘನಾಶಿನಿ ನೆರೆ ಸೃಷ್ಟಿಸಿದ್ದು, ಹವ್ಯಾಸಿ ಛಾಯಾಚಿತ್ರಗಾರ ಗೋಪಿ ಜಾಲಿ ಡ್ರೋನ್ ಕ್ಯಾಮೆರಾದಲ್ಲಿ ನೆರೆ ಸ್ಥಿತಿಯನ್ನು ಸೆರೆಹಿಡಿದಿದ್ದಾರೆ.

ಸಕಲೇಶಪುರ ಬಳಿ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಸುಮಾರು 500 ಮೀಟರ್ ಉದ್ದಕ್ಕೂ ರಸ್ತೆಗೆ ಹೊಂದಿಕೊಂಡಿದ್ದ ತಡೆ ಗೋಡೆ ಕುಸಿಯುತ್ತಿದೆ. ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗೋ ಆತಂಕ ಇದೆ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಆರೋಪ ಕೇಳಿಬಂದಿದೆ. ನೆನ್ನೆ ಕೂಡ ತಾಲೂಕಿನ ಗುಲಗಳಲೆ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಮಳೆ ನೀರು ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.

ದೊಡ್ಡತಪ್ಲು ಬಳಿ‌ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ‌ ಗುಡ್ಡ ಕುಸಿದಿದ್ದರಿಂದ ಸುಮಾರು ಒಂದುಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆಗೆ ಕುಸಿದು ಮಣ್ಣು ತೆರವು ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಕಡೆಯಿಂದ‌ ಮಂಗಳೂರು ಕಡೆಗೆ ಹೋಗೋ ವಾಹನಗಳ‌ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಾನುಬಾಳ್ ಮೂಲಕ ತೆರಳಲು ಸೂಚಿಸಿಲಾಗಿದೆ.

ಶೃಂಗೇರಿಯಲ್ಲಿ ನಿಲ್ಲದ ತುಂಗಾ ನದಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟಿಸುತ್ತಿದೆ. ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ.

ಭಾರಿ ಮಳೆಗೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲೂ ಗುಡ್ಡ ಕುಸಿತಿದ್ದು, ಐದರಿಂದ ಆರು ಕಡೆ ಗುಡ್ಡದ ಮಣ್ಣು ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಿ ತಾಣಗಳಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ಮುರಿದು ಬಿದ್ದ ಕಬ್ಬಿಣದ ಸೇತುವೆ

ಭಾರೀ ಮಳೆ ಹಿನ್ನೆಲೆ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಮ್ಮಾರು ಗ್ರಾಮದ ತೂಗು ಸೇತುವೆ ಕುಸಿದಿದೆ. ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೇ ಕಬ್ಬಿಣದ ಸೇತುವೆ ಮುರಿದು ಬಿದ್ದಿದೆ.
ಸುಮಾರು ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊಳೆಹದ್ದು ಸೇತುವೆ ಇದಾಗಿದ್ದು, ಗ್ರಾಮದಿಂದ ಹೊರ ಬರಲಾಗದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತವಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಲಕಾಪುರ ಕಲ್ಲುಗಣಿಯಲ್ಲಿ‌ ತಡೆಗೋಡೆ ಕುಸಿದಿದೆ.

ಹೊನ್ನಾಳಿ, ಹರಿಹರದಲ್ಲಿ ನದಿ ಪಾತ್ರದ ಪ್ರದೇಶಗಳು ಮುಳುಗಡೆ

ದಾವಣಗೆರೆ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ದಾವಣಗೆರೆ ಜಿಲ್ಲೆಯ ಸಮೀಪ ತುಂಗಭದ್ರಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿಯಿಂದ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಮುಂಭಾಗಕ್ಕೆ ತುಂಗಭದ್ರಾ ನದಿ ನೀರು ಬಂದಿದ್ದು, ಸ್ನಾನ ಘಟ್ಟ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಮುಳುಗಡೆಯಾಗಿದೆ. ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಪ್ರತಿ ಬಾರಿ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್ ಆಗಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಕೂಡ ವಸತಿ ಪ್ರದೇಶಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಭಾರಿ ಮಳೆಯಿಂದ ಗೋಪಾಲ ಶಾಹೀರ್ ಎಂಬುವವರ ಮನೆಯ ಚಾವಣಿ ಕುಸಿತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಲೆ ಗದ್ದೆಮಠದ ಹತ್ತಿರ ಬಿದ್ದ ಬೃಹತ್ ಮರ ಬಿದ್ದಿದೆ.

ಮಡಿಕೇರಿ ಸಮೀಪ ಬಿರುಕು ಬಿಟ್ಟ ಗುಡ್ಡ

ಕೊಡಗು: ಮಡಿಕೇರಿ ಸಮೀಪದ ಮದೆನಾಡು ಸಮೀಪ ರಾಷ್ಟ್ರೀಯ 275ರಲ್ಲಿ ಗುಡ್ಡ ಕುಸಿಯುವ ಆತಂಕ ಉಂಟಾಗಿದೆ. ರಸ್ತೆ ಬದಿ ಇರೋ ಗುಡ್ಡದಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವ ಕ್ಷಣದಲ್ಲಾದರೂ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದೆ. ಮಂಜು ಮುಸುಕಿದ ವಾತಾವರಣದಿಂದ ವಾಹನ ಸವಾರರಿಗೆ ದಾರಿ ಸರಿಯಾಗಿ ಕಾಣುತ್ತಿಲ್ಲ. ಬಿರುಕು ಬಿಟ್ಟ ಸ್ಥಳಕ್ಕೆ ಮತ್ತಷ್ಟು ನೀರು ನುಗ್ಗಿದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಉಡುಪಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಘಟ್ಟ, ಹೆಬ್ರಿ, ಕಾರ್ಕಳ, ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಸೀತಾ ನದಿಯ ಸುತ್ತಮುತ್ತಲ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯವನ್ನು ಡ್ರೋನ್ ಕ್ಯಾಮೆರಾದಿಂದ ಛಾಯಾಗ್ರಹಕ ಸಿದ್ಧಾರ್ಥ ನೀಲಾವರ ಸೆರೆಹಿಡಿದಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆ

ಮೈಸೂರು: ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ
ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಇನ್ನು ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದು, ಪ್ರವಾಹದ ಭೀತಿ ಎದುರಿದುತ್ತಿದ್ದಾರೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈದುಂಬಿ ಧುಮ್ಮಿಕ್ಕುತ್ತಿರುವ ಹೊಗೇನಕಲ್ ಜಲಪಾತ

ಚಾಮರಾಜನಗರ: ಕೆ.ಆರ್.ಎಸ್. ಹಾಗೂ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕಾವೇರಿ ರೌದ್ರ ನರ್ತನ ಮಾಡುತ್ತಿದ್ದು, ಇದರಿಂದ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

Continue Reading

ಕರ್ನಾಟಕ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ. ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Ankola landslide Case
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ (Ankola landslide Case) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಏನಿದು ಘಟನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಗುಡ್ಡದ ಮಣ್ಣಿನಡಿ 7 ಮಂದಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದ್ದವು. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದರು. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದು. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ತೆರವು ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ 66 (ಗೋವಾ-ಮಂಗಳೂರು) ಹೆದ್ದಾರಿ ಸಂಪರ್ಕ ಸ್ಥಗಿತ ಹಿನ್ನೆಲೆ‌ಯಲ್ಲಿ ಲಾರಿಗಳು ಐದಾರು ಕಿ.ಮೀ ದೂರದಷ್ಟು ನಿಂತಲ್ಲೇ ನಿಂತಿವೆ. ಇದರಿಂದ ದೂರದ ರಾಜ್ಯಗಳಿಂದ ಬಂದ ಲಾರಿ ಚಾಲಕರು ಊಟ, ನೀರು ಸಿಗದೇ ಪರದಾಡುತ್ತಿದ್ದಾರೆ.

ಮನೆ ಕುಸಿದು ಮೃತಪಟ್ಟ ವೃದ್ಧನ ಕುಟುಂಬಸ್ಥರಿಗೆ ಪರಿಹಾರ

ಕಾರವಾರದ ಕಿನ್ನರ ಗ್ರಾಮದಲ್ಲಿ ಮನೆ ಕುಸಿದು ವೃದ್ಧ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರಿಗೆ ಸಚಿವ ಮಂಕಾಳು ವೈದ್ಯ ಅವರು ಪರಿಹಾರದ ಆದೇಶ ಪತ್ರ ವಿತರಿಸಿದರು.

ನಿನ್ನೆ ಸುರಿದ ಧಾರಾಕಾರ ಮಳೆಗೆ ಕಿನ್ನರ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾಗಿತ್ತು. ಮನೆಯಲ್ಲಿದ್ದ ವೃದ್ಧ ತಿಕರ್ಸ್ ಗುರವ(60) ಗೋಡೆಯಡಿ ಸಿಲುಕಿ ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಇಂದು ಕಾರವಾರಕ್ಕೆ ಆಗಮಿಸಿದ ವೇಳೆ ಪರಿಹಾರದ ಆದೇಶಪತ್ರವನ್ನು ಸಚಿವರು ಹಸ್ತಾಂತರಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಮನೆ ಹಾನಿಗೆ 1.5 ಲಕ್ಷ, ಜೀವಹಾನಿಗೆ 5 ಲಕ್ಷ ಸೇರಿ ಒಟ್ಟು 6.5 ಲಕ್ಷ ಪರಿಹಾರ ಆದೇಶ ಪತ್ರ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ, ಶಾಸಕ ಸತೀಶ ಸೈಲ್ ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Continue Reading
Advertisement
Natasa Stankovic
ಕ್ರಿಕೆಟ್8 mins ago

Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

Mattress Buying Guide
ಲೈಫ್‌ಸ್ಟೈಲ್31 mins ago

Mattress Buying Guide: ಹಾಸಿಗೆಗಳಲ್ಲಿ ಎಷ್ಟೊಂದು ವಿಧ? ಯಾವುದು ಸೂಕ್ತ ಆಯ್ಕೆ ಮಾಡಿಕೊಳ್ಳಿ

Karnataka Jobs Reservation
ಪ್ರಮುಖ ಸುದ್ದಿ40 mins ago

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Kapil Dev
ಕ್ರೀಡೆ1 hour ago

Kapil Dev : ಟಿ20 ವಿಶ್ವ ಕಪ್ ಚಾಂಪಿಯನ್ಸ್​ ಕೊಹ್ಲಿ, ರೋಹಿತ್ ಶ್ಲಾಘಿಸಿದ 1983ರ ವಿಶ್ವ ಕಪ್ ವಿಜೇತ ಕಪಿಲ್​ ದೇವ್​​

Hand Painted lehenga Fashion
ಫ್ಯಾಷನ್1 hour ago

Hand Painted lehenga Fashion: ವೆಡ್ಡಿಂಗ್‌ ಫ್ಯಾಷನ್‌ ಟ್ರೆಂಡ್‌ ಲಿಸ್ಟ್‌ಗೆ ಸೇರಿದ ರಾಧಿಕಾ ಮರ್ಚೆಂಟ್‌ ಹ್ಯಾಂಡ್‌ ಪೇಂಟೆಡ್‌ ಲೆಹೆಂಗಾ!

Karnataka Jobs Reservation
ರಾಜಕೀಯ1 hour ago

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

UP CM DCM
ದೇಶ1 hour ago

UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ಕ್ರೀಡೆ1 hour ago

KL Rahul : ಆಮಿರ್​ ಖಾನ್ ಮನೆ ಪಕ್ಕದಲ್ಲೇ 20 ಕೋಟಿ ಫ್ಲ್ಯಾಟ್ ಖರೀದಿಸಿದ ರಾಹುಲ್, ಅಥಿಯಾ ದಂಪತಿ

Raj B Shetty starrer roopanthara is releasing on July 26
ಕರ್ನಾಟಕ1 hour ago

Kannada New Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ನಟನೆಯ ‘ರೂಪಾಂತರ’ ಚಿತ್ರ ಜು.26ಕ್ಕೆ ರಿಲೀಸ್‌

PR Seva Award for Media Connect in Bengaluru
ಕರ್ನಾಟಕ1 hour ago

Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌