Site icon Vistara News

Uttara Kannada News: ಯಲ್ಲಾಪುರದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸಲು ಆಗ್ರಹ, ಬೃಹತ್‌ ಮೆರವಣಿಗೆ

Demand for construction of bypass road in Yallapur

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ತಡೆಯಲು ಬೈಪಾಸ್‌ ರಸ್ತೆ (Bypass Road) ನಿರ್ಮಿಸುವಂತೆ ಒತ್ತಾಯಿಸಿ ನಾಗರಿಕ ವೇದಿಕೆ ಹಾಗೂ ಬೈಪಾಸ್‌ ಹೋರಾಟ ಸಮಿತಿ ವತಿಯಿಂದ ಬೃಹತ್‌ ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ವೈಟಿಎಸ್‌ಎಸ್‌ ಮೈದಾನದಿಂದ ಹೊರಟ ಮೆರವಣಿಗೆಯಲ್ಲಿ ನಾಗರಿಕ ವೇದಿಕೆ ಹಾಗೂ ಹೋರಾಟ ಸಮಿತಿಯ ಸದಸ್ಯರು, ಅನೇಕ ಸಂಘ ಸಂಸ್ಥೆಗಳ ಪ್ರಮುಖರು, ಪಟ್ಟಣ ಪಂಚಾಯಿತಿ ಸದಸ್ಯರು, ಅಂಗಡಿಗಳ ಮಾಲೀಕರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ, ತಾಲೂಕು ಆಡಳಿತ ಸೌಧಕ್ಕೆ ತೆರಳಿ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ

ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅತಿ ಶೀಘ್ರದಲ್ಲಿ ಬೈಪಾಸ್‌ ನಿರ್ಮಿಸಬೇಕು. ಈ ಬಾರಿ ಕೇವಲ ಮನವಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್‌ ಗುರುರಾಜ್‌ ಎಂ. ಸರ್ಕಾರಕ್ಕೆ ಮನವಿ ರವಾನಿಸಿ, ಶೀಘ್ರವಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇದನ್ನೂ ಓದಿ: Vijay Hazare Trophy: ಸೆಮಿಫೈನಲ್​ ಪ್ರವೇಶಿಸಿದ ಕರ್ನಾಟಕ

ಈ ಸಂದರ್ಭದಲ್ಲಿ ಪ್ರಮುಖರಾದ ರವಿ ಶ್ಯಾನಭಾಗ್‌, ಉಮೇಶ್‌ ಭಾಗ್ವತ್‌, ವೇಣುಗೋಪಾಲ ಮದ್ಗುಣಿ, ಬೀರಣ್ಣ ನಾಯಕ ಮೊಗಟಾ, ಶೋಭಾ ಹುಲಿಮನಿ, ಪುಷ್ಪಾ ನಾಯ್ಕ, ಬೇಬಿ ಅಮೀನಾ ಶೇಖ್‌, ಎಂ. ಆರ್‌ ಹೆಗಡೆ ಕುಂಬ್ರಿಗುಡ್ಡೆ, ಎ.ಎ. ಶೇಖ್‌, ಮೊಹಮ್ಮದ್‌ ಗೌಸ್‌, ಜಯರಾಮ ಗುನಗಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Exit mobile version