Site icon Vistara News

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Drinking water problem Provide water immediately by tanker says DC

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರು (Drinking Water) ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದ್ದಾರೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರತಿದಿನ ವರದಿಯಾಗುತ್ತಿದ್ದು, ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳು ಆ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸೌಲಭ್ಯ ಒದಗಿಸಬೇಕು, ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಟೆಂಡರ್ ಕರೆಯಲು ಎಲ್ಲಾ ತಹಸೀಲ್ದಾರ್‌ಗಳಿಗೆ ಈಗಾಗಲೇ ಅನುಮತಿಯನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದು, ಒಂದು ವೇಳೆ ಅಗತ್ಯ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದಲ್ಲಿ, ಸದರಿ ಟೆಂಡರ್‌ಗೆ ಸಾರ್ವಜನಿಕ ಹಿತದೃಷ್ಠಿಯಿಂದ ಘಟನೋತ್ತರ ಮಂಜೂರಾತಿ ನೀಡಲು ಅನುಮತಿ ನೀಡಲಾಗುವುದು. ಆದರೆ ಯಾವುದೇ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರಿಗೆ ನೀರು ಒದಗಿಸಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಾತ್ರವಲ್ಲದೇ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲೆಯಲ್ಲಿರುವ ಎಲ್ಲಾ ಗೋಕಟ್ಟೆಗಳಿಗೂ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಮತ್ತು ಜಿಲ್ಲೆಯ ಅರಣ್ಯ ಭಾಗದ ಗ್ರಾಮಗಳಲ್ಲಿ ಕೂಡಾ ಜಾನುವಾರುಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ತಮ್ಮ ಸಮಸ್ಯೆಯಿದ್ದಲ್ಲಿ 24*7 ಕಾರ್ಯ ನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಗೋಕರ್ಣ, ನಾಡುಮಾಸ್ಕೇರಿ, ಹೆಗಡೆ, ಕುಜಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

Exit mobile version