Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ - Vistara News

ಉತ್ತರ ಕನ್ನಡ

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Uttara Kannada News: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Drinking water problem Provide water immediately by tanker says DC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರು (Drinking Water) ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದ್ದಾರೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರತಿದಿನ ವರದಿಯಾಗುತ್ತಿದ್ದು, ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳು ಆ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸೌಲಭ್ಯ ಒದಗಿಸಬೇಕು, ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಟೆಂಡರ್ ಕರೆಯಲು ಎಲ್ಲಾ ತಹಸೀಲ್ದಾರ್‌ಗಳಿಗೆ ಈಗಾಗಲೇ ಅನುಮತಿಯನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದು, ಒಂದು ವೇಳೆ ಅಗತ್ಯ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದಲ್ಲಿ, ಸದರಿ ಟೆಂಡರ್‌ಗೆ ಸಾರ್ವಜನಿಕ ಹಿತದೃಷ್ಠಿಯಿಂದ ಘಟನೋತ್ತರ ಮಂಜೂರಾತಿ ನೀಡಲು ಅನುಮತಿ ನೀಡಲಾಗುವುದು. ಆದರೆ ಯಾವುದೇ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರಿಗೆ ನೀರು ಒದಗಿಸಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಾತ್ರವಲ್ಲದೇ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲೆಯಲ್ಲಿರುವ ಎಲ್ಲಾ ಗೋಕಟ್ಟೆಗಳಿಗೂ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಮತ್ತು ಜಿಲ್ಲೆಯ ಅರಣ್ಯ ಭಾಗದ ಗ್ರಾಮಗಳಲ್ಲಿ ಕೂಡಾ ಜಾನುವಾರುಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ತಮ್ಮ ಸಮಸ್ಯೆಯಿದ್ದಲ್ಲಿ 24*7 ಕಾರ್ಯ ನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಗೋಕರ್ಣ, ನಾಡುಮಾಸ್ಕೇರಿ, ಹೆಗಡೆ, ಕುಜಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು (Karnataka Weather Forecast), ಕಾರವಾರದ ಟನಲ್‌ ಎದುರು ಗುಡ್ಡ ಕುಸಿತ ಭೀತಿ ಹೆಚ್ಚಾಗುತ್ತಿದೆ. ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಸವಾರರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

VISTARANEWS.COM


on

By

karnataka weather Forecast
Koo

ಕಾರವಾರ/ ಕಲಬುರಗಿ: ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, ಕಲಬುರಗಿಯಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಅನ್ನಪೂರ್ಣೇಶ್ವರಿ ನಗರ, ಲಗ್ಗೆರೆ, ಸುಂಕದಕಟ್ಟೆ, ವಿಧಾನಸೌಧ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಯಡ್ರಾಮಿ ತಾಲೂಕಿನ ವರವಿ-ಕುಕನೂರು ಮಾರ್ಗದಲ್ಲಿ ಹಳ್ಳ ದಾಟಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಜಮೀನಿನಲ್ಲಿ ಬಿತ್ತನೆ ‌ಕಾರ್ಯ ಮುಗಿಸಿ ‌ಮನೆಗೆ ತೆರಳುವಾಗ ರೈತರು ಹಗ್ಗ ಹಿಡಿದು ಹಳ್ಳದಾಟುತ್ತಿದ್ದಾರೆ. ಪ್ರತಿಬಾರಿ ಮಳೆಗಾಲದಲ್ಲೂ ಇದೇ ರೀತಿ ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳದಲ್ಲೂ ಮಳೆ ಸುರಿದಿದೆ. ಕೊಪ್ಪಳ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ. ನಿತ್ಯವೂ ಆಗಾಗ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಕೊಂಚ ಹಿನ್ನಡೆಯಾಗಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಾಳೆ, ನಾಡಿದ್ದು ಅಲ್ಪ ಮಳೆ

ರಾಜ್ಯದ ಹಲವೆಡೆ ಮಳೆ ಅಬ್ಬರ ತಗ್ಗಿದೆ. ಇನ್ನೊಂದು ವಾರ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂ.12ರಂದು‌ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆ ಜತೆಗೆ ಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಜೂನ್‌ 13ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ಸುತ್ತಮುತ್ತ ಆಗಾಗ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಅಂದಾಜಿಸಲಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 29, 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Banavasi News: ಬನವಾಸಿ ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day celebration in Banavasi
Koo

ಬನವಾಸಿ: ಜೀವ ಸಂಕುಲದ ಉಳಿವಿನಲ್ಲಿ ಪರಿಸರದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಸಂರಕ್ಷಿಸಿ ತಮ್ಮ ಜವಾಬ್ದಾರಿ‌ ನಿರ್ವಹಿಸಬೇಕಿದೆ ಎಂದು ಡಬ್ಲ್ಯೂಎಚ್ಆರ್ ಆರ್.ಕೆ ಫೌಂಡೇಶನ್‌ನ ಜಿಲ್ಲಾಧ್ಯಕ್ಷೆ ಅರ್ಚನಾ ಜಯಪ್ರಕಾಶ್ ನಾಯ್ಕ್ (Banavasi News) ಹೇಳಿದರು.

ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಮ್ಮ ಸುತ್ತಮುತ್ತನಲ್ಲಿರುವ ನೈಸರ್ಗಿಕ ತಾಣವನ್ನು ನೋಡಲು ಹೊರ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಬರುತ್ತಾರೆ ಎಂದರೆ ಅದಕ್ಕೆ ಕಾರಣ ಇಲ್ಲಿನ ಪರಿಸರ ಸಂಪತ್ತು. ಇದನ್ನು ಇನ್ನಷ್ಟು ಬೆಳೆಸಿ, ಉಳಿಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Money Guide: ಹೆಚ್ಚಿನ ಬಡ್ಡಿ ಮಾತ್ರವಲ್ಲ, ಪಿಪಿಎಫ್ ನಿಂದ ಇನ್ನೂ ಏನೇನು ಪ್ರಯೋಜನ?

ಈ ಪರಿಸರ ಮುಂದಿನ ತಲೆಮಾರಿನವರಿಗೆ ಉಳಿಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮದ ಮೂಲಕ ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕಾಗಿದೆ‌. ಅತ್ಯಗತ್ಯವಾಗಿ ನಾವೆಲ್ಲರೂ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ಅಧ್ಯಕ್ಷೆ ಸೀಮಾವತಿ ಕೆರೊಡಿ ಮಾತನಾಡಿ, ಇಂದು ನಮಗೆ ನಮ್ಮ ಸುತ್ತಮುತ್ತಲಿನಲ್ಲಿ ಸಾಕಷ್ಟು ಅರಣ್ಯ ಇದೆ ಎಂದು ಎನಿಸಬಹುದು ಆದರೆ ದಶಕಗಳು ಕಳೆದಂತೆ ಜನಸಂಖ್ಯೆ ಹೆಚ್ಚಳ, ಕಾರ್ಖಾನೆಗಳು, ಪ್ಲಾಸ್ಟಿಕ್ ಉತ್ಪನ್ನ ಬಳಕೆಯಿಂದ ಶುದ್ಧ ಗಾಳಿ, ನೀರನ್ನು ಹಣ ನೀಡಿ ಖರೀದಿಸುವಂತ ಸ್ಥಿತಿ ಬರಬಹುದು ಆ ಸ್ಥಿತಿಗೆ ತಲುಪಬಾರದು ಎಂದರೆ ಪ್ರತಿಯೊಬ್ಬರು ಇಂದಿನಿಂದಲೇ ಒಂದೊಂದು ಗಿಡ ನೆಡಬೇಕು, ಅದರ ಪಾಲನೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದರು.

ಇದೇ ವೇಳೆ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಕಾರ್ಯಕ್ರಮದಲ್ಲಿ ಡಬ್ಲ್ಯೂಎಚ್ಆರ್‌ ಆರ್.ಕೆ. ಫೌಂಡೇಶನ್‌ನ ಪದಾಧಿಕಾರಿಗಳು, ಸದಸ್ಯರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಪಕ್ಷದ್ರೋಹಿ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

Uttara Kannada News: ಶಾಸಕ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ಬೇಕಿದ್ದರೆ ಕಾಂಗ್ರೆಸ್ ಅಥವಾ ಬಿಜೆಪಿಯಲ್ಲಿರಬೇಕು. ಎರಡೂ ಬೇಡದಿದ್ದರೆ ಮನೆಯಲ್ಲಿರಬಹುದು. ಅದನ್ನು ಬಿಟ್ಟು ಮೋಸದ ರಾಜಕೀಯವನ್ನು ಮಾಡಬಾರದು. ಯಲ್ಲಾಪುರ ಮುಂಡಗೋಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ವ್ಯಕ್ತಿ ಆಧಾರಿತ ಚುನಾವಣೆ ಮಾಡುವ ಪ್ರಮೇಯ ಬರುವುದಿಲ್ಲ. ಸಂಘಟನೆಯನ್ನು ಬೆಳೆಸುವ ಉದ್ದೇಶದಿಂದ ಇರುವ ಕಾರ್ಯಕರ್ತರೆಲ್ಲ ಇನ್ನೂ ಪಕ್ಷದಲ್ಲಿಯೇ ಇದ್ದಾರೆ. ಅಧಿಕಾರವನ್ನು ಅರಸಿ ಬಂದವರೆಲ್ಲ ಪಕ್ಷದಿಂದ ಹೊರ ನಡೆದಿದ್ದಾರೆ. ಇನ್ನು ಮುಂದೆ ಎಲ್ಲಾ ಚುನಾವಣೆಯಲ್ಲೂ ಕಾರ್ಯಕರ್ತರು ಇದೇ ರೀತಿ ಕಾರ್ಯ ನಿರ್ವಹಿಸಿ, ಯಾರೇ ಅಭ್ಯರ್ಥಿಯಾದರು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದ್ದಾರೆ.

VISTARANEWS.COM


on

MLA Shivaram Hebbar should resign immediately MLC Shantharama Siddi demands
Koo

ಯಲ್ಲಾಪುರ: ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಅವರು ತಲಾಖ್ ಸಂಸ್ಕೃತಿಯನ್ನು ಅನುಸರಿಸುತ್ತಿದ್ದು, ಯಾರನ್ನು ಅಪ್ಪಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದನ್ನು ತಿಳಿಯದಾಗಿದ್ದಾರೆ. ಅತ್ತ ಕಾಂಗ್ರೆಸ್ ಹೋಗದೆ, ಇತ್ತ ಬಿಜೆಪಿಯಲ್ಲಿ ಇರದೇ, ಎರಡೂ ಪಕ್ಷಗಳಿಗೂ ಹಾಗೂ ಕಾರ್ಯಕರ್ತರಿಗೂ ಗೊಂದಲ ಮೂಡಿಸಿದ್ದು, ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಕ್ಷದ ಪರವಾಗಿ ಆಗ್ರಹಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ (Uttara Kannada News) ತಿಳಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಬೇಕಿದ್ದರೆ ಕಾಂಗ್ರೆಸ್ ಅಥವಾ ಬಿಜೆಪಿಯಲ್ಲಿರಬೇಕು. ಎರಡೂ ಬೇಡದಿದ್ದರೆ ಮನೆಯಲ್ಲಿರಬಹುದು. ಅದನ್ನು ಬಿಟ್ಟು ಮೋಸದ ರಾಜಕೀಯವನ್ನು ಮಾಡಬಾರದು ಎಂದು ಆರೋಪಿಸಿದ ಅವರು, ಯಲ್ಲಾಪುರ ಮುಂಡಗೋಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ವ್ಯಕ್ತಿ ಆಧಾರಿತ ಚುನಾವಣೆ ಮಾಡುವ ಪ್ರಮೇಯ ಬರುವುದಿಲ್ಲ. ಸಂಘಟನೆಯನ್ನು ಬೆಳೆಸುವ ಉದ್ದೇಶದಿಂದ ಇರುವ ಕಾರ್ಯಕರ್ತರೆಲ್ಲ ಇನ್ನೂ ಪಕ್ಷದಲ್ಲಿಯೇ ಇದ್ದಾರೆ. ಅಧಿಕಾರವನ್ನು ಅರಸಿ ಬಂದವರೆಲ್ಲ ಪಕ್ಷದಿಂದ ಹೊರ ನಡೆದಿದ್ದಾರೆ. ಇನ್ನು ಮುಂದೆ ಎಲ್ಲಾ ಚುನಾವಣೆಯಲ್ಲೂ ಕಾರ್ಯಕರ್ತರು ಇದೇ ರೀತಿ ಕಾರ್ಯ ನಿರ್ವಹಿಸಿ, ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.

ಇದನ್ನೂ ಓದಿ: Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ದೇಶವನ್ನು ಕಟ್ಟಲು ಬಿಜೆಪಿಯ ಕೊಡುಗೆ ಅಪಾರ. ಇಂತಹ ನಾಯಕತ್ವಕ್ಕೆ ಹಾಗೂ ಪಕ್ಷಕ್ಕೆ ಯಲ್ಲಾಪುರದ ಶಾಸಕರು ಮೋಸ ಮಾಡಿದ್ದಾರೆ. ಪಕ್ಷ ಅವರನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದೆ. ಆದರೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂಬಂತೆ, ಬಿಜೆಪಿ ಪಕ್ಷದ ಪ್ರತಿನಿಧಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಮಾಡಿರುವುದನ್ನು ಯಲ್ಲಾಪುರ ಮಂಡಲ ಖಂಡಿಸುತ್ತದೆ. ಅವರ ಹೊರತಾಗಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದ ಅಂತರದಿಂದ ನಮ್ಮ ಅಭ್ಯರ್ಥಿ ಕಾಗೇರಿ ಅವರು ಜಯ ಸಾಧಿಸಿದ್ದಾರೆ. ಹಿಂದಿನ ಎಲ್ಲಾ ಚುನಾವಣೆಯನ್ನು ಕಾರ್ಯಕರ್ತರ ಆಧಾರದ ಮೇಲೆ ಗೆಲ್ಲುತ್ತಾ ಬಂದಿದ್ದು, ಮುಂದೆಯೂ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಶಾಸಕರು ರಾಜಿನಾಮೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಾವು ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಇದನ್ನೂ ಓದಿ: Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

ಈ ಸಂದರ್ಭದಲ್ಲಿ ಪ್ರಮುಖರಾದ ಉಮೇಶ ಭಾಗ್ವತ್, ಪ.ಪಂ. ಸದಸ್ಯೆ ಶ್ಯಾಮಿಲಿ ಪಾಟನಕರ್, ಸೋಮೇಶ್ವರ ನಾಯ್ಕ, ಶ್ರೀನಿವಾಸ್ ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ನಟರಾಜ ಗೌಡರ್, ಜಿಲ್ಲಾ ಕಾರ್ಯಕಾರಣಿ ಸದಸ್ಯ ವೆಂಕಟ್ರಮಣ ಬೆಳ್ಳಿ, ನಾಗರಾಜ್, ಅರ್ಜುನ್ ಬೆಂಡಿಗೇರಿ, ರವಿ ದೇವಡಿಗ, ಬಜ್ಜು ಪಿಂಗಳೆ, ರಾಘವೇಂದ್ರ ಭಟ್, ಗಣೇಶ ಹೆಗಡೆ ಹಾಗೂ ಕಾರ್ಯಕರ್ತರು ಉಪ್ಥಿತರಿದ್ದರು.

Continue Reading
Advertisement
Ready Saree Fashion Tips
ಫ್ಯಾಷನ್10 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ20 mins ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ43 mins ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ50 mins ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ59 mins ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ1 hour ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ1 hour ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್1 hour ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Fish Spa awareness
ಫ್ಯಾಷನ್1 hour ago

Fish Spa Awareness: ಫಿಶ್‌ ಸ್ಪಾಗೂ ಮುನ್ನ ನೂರು ಬಾರಿ ಯೋಚಿಸಿ!

Kuwait Fire
ವಿದೇಶ1 hour ago

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌