Site icon Vistara News

Uttara Kannada News: ಮಾನವ ಕಳ್ಳಸಾಗಾಣಿಕೆ ತಡೆಗೆ ಎಲ್ಲರೂ ಕೈ ಜೋಡಿಸಿ: ನ್ಯಾ. ರೇಣುಕಾ ರಾಯ್ಕರ್

everyone join hands to stop human trafficking says Judge Renuka Raikar at karwar

ಕಾರವಾರ: ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್ (Uttara Kannada News) ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಭಾಗಿದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: IND vs ENG: ರಾಜ್​ಕೋಟ್​ನ ಪಿಚ್​ ರಿಪೋರ್ಟ್​, ಹವಾಮಾನ ವರದಿ ಹೇಗಿದೆ?

ಮಾನವ ಕಳ್ಳ ಸಾಗಾಣಿಕೆ ಒಂದು ಸಂಘಟಿತ ಅಪರಾಧವಾಗಿದ್ದು, ಒತ್ತಾಯ ಪೂರ್ವಕ ದುಡಿಮೆ, ಲೈಂಗಿಕ ದೌರ್ಜನ್ಯ, ಭಿಕ್ಷಾಟನೆ ಮತ್ತು ಕಾನೂನು ಬಾಹಿರ ಅಂಗಾಂಗಗಳ ಜೋಡಣೆ ಹಾಗೂ ಉದ್ಯೋಗದ ಬಗ್ಗೆ ಸುಳ್ಳು ಭರವಸೆ ರೂಪದಲ್ಲಿ ಮಹಿಳೆಯರು ಮತ್ತು ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿದ್ದಾರೆ. ಇಂಥವರನ್ನು ರಕ್ಷಿಸಿ ಸೂಕ್ತ ಪುನರ್ವಸತಿ ಒದಗಿಸಿ, ಸಮಾಲೋಚನೆ ಮೂಲಕ ಅವರಿಗೆ ಧೈರ್ಯ ತುಂಬುವ ಕಾರ್ಯವಾಗಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ವಿರೂಪಾಕ್ಷಗೌಡ ಪಿ. ಪಾಟೀಲ್ ಮಾತನಾಡಿ, ಮೊಬೈಲ್ ಬಳಕೆಯಿಂದ ಅನೇಕ ದುಷ್ಪರಿಣಾಮಗಳು ಸಂಭವಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರನ್ನು ಪರಿಚಯ ಮಾಡಿಕೊಳ್ಳುವಾಗ ಪ್ರತಿಯೊಬ್ಬರು ಎಚ್ಚರದಿಂದರಬೇಕು. ಇಲ್ಲವಾದಲ್ಲಿ ತಮಗೆ ಗೊತ್ತಿಲ್ಲದೇ ಮೋಸದ ಬಲೆಗೆ ಬೀಳುವಂತಾಗುತ್ತದೆ ಎಂದರು.

ನ್ಯಾಯವಾದಿ ಎ.ಆರ್.ಬಿ ಡಿಸೋಜಾ, ದೇವಿದಾಸ ನಾಯ್ಕ ಅವರು ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ, ಕಾರಣಗಳು ಮತ್ತು ದುಷ್ಪರಿಣಾಮಗಳ ಮತ್ತು ತಡೆಗಟ್ಟುವಿಕೆ ಬಗ್ಗೆ ಉಪನ್ಯಾಸ ನೀಡಿದರು.

ಇದನ್ನೂ ಓದಿ: James Anderson: 41ನೇ ವಯಸ್ಸಿನಲ್ಲೂ ವಿಶ್ವ ದಾಖಲೆ ಬರೆಯಲು ಸಜ್ಜಾದ ಜೇಮ್ಸ್ ಆಂಡರ್ಸನ್!

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬಸಾಬ ಮುಲ್ಲಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕಿ ಲತಾ ನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಲಕ್ಷ್ಮೀದೇವಿ ಎಸ್, ವಿವಿಧ ಇಲಾಖೆಯ ಸಿಬ್ಬಂದಿ, ಕಾವಲು ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Exit mobile version