ಬನವಾಸಿ: ಸಮೀಪದ ಗುಡ್ನಾಪುರ ಗ್ರಾ.ಪಂ ವ್ಯಾಪ್ತಿಯ ಗುಡ್ನಾಪುರ ಗ್ರಾಮದಲ್ಲಿ ಕುಡಿಯುವ ನೀರಿನ (Drinking Water) ಸಮಸ್ಯೆಯಿಂದ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾ.ಪಂ ಸದಸ್ಯರೊಬ್ಬರು ಸ್ವಂತ ಖರ್ಚಿನಲ್ಲಿ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಿ, ಗ್ರಾಮಸ್ಥರಿಗೆ ಅನುಕೂಲ (Uttara Kannada News) ಕಲ್ಪಿಸಿದ್ದಾರೆ.
ಇದನ್ನೂ ಓದಿ: Preventing Grey Hair Growth: ಕೂದಲು ಬಿಳಿಯಾಗುತ್ತಿದೆಯೇ? ಇಲ್ಲಿದೆ ಪರಿಹಾರ!
ಕಳೆದ ಎರಡು ತಿಂಗಳಿನಿಂದ ಗುಡ್ನಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೆರೆ, ಕೊಳವೆ ಬಾವಿ, ಬಾವಿಗಳು ಬತ್ತಿ ಹೋಗಿ ಕುಡಿಯುವ ನೀರಿಗಾಗಿ ಜನ ಪರದಾಡುವಂತಾಗಿದೆ. ಇಲ್ಲಿಯ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಬಂಗಾರೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಗ್ರಾಮದಲ್ಲಿ ಹಬ್ಬದ ವಾತಾವರಣವಿದೆ. ಅದರೆ ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ಸಮಯದಲ್ಲಿ ಗುಡ್ನಾಪೂರ ಗ್ರಾಪಂನ ಸದಸ್ಯ ರಘು ನಾಯ್ಕ್ ಅವರು ಸ್ನೇಹಿತರೊಂದಿಗೆ ಸೇರಿ ತಮ್ಮ ಸ್ವಂತ ಖರ್ಚಿನಲ್ಲಿ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆಯನ್ನು ಕಲ್ಪಿಸಿ, ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ: Ranji Trophy Final: ರಹಾನೆ ಶತಕ; ಭಾರೀ ಮುನ್ನಡೆ ಸಾಧಿಸಿದ ಮುಂಬೈ
ಸಮಾಜ ಸೇವಕ ರಘು ನಾಯ್ಕ್ ಅವರು ಇಂತಹ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗ್ರಾಮ ಪಂಚಾಯತಿ ಹಾಗೂ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ತಮಗೆ ನೀಡುವ ಗೌರವ ಧನವನ್ನು ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೀಡಿ ಸಹಕಾರ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ಮಳೆ ಅಭಾವದಿಂದ ಈ ಬಾರಿ ಭೀಕರ ಜಲಕ್ಷಾಮ ಎದುರಾಗಿದೆ. ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಸಾರ್ವಜನಿಕರಿಗೆ ನೀರಿನ ತೊಂದರೆ ಆಗದಿರಲಿ ಎಂದು ಯುವಕರೊಂದಿಗೆ ಸೇರಿ ನೀರಿನ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಲಾಗಿದೆ.
-ರಘು ನಾಯ್ಕ್, ಸದಸ್ಯರು ಗುಡ್ನಾಪೂರ ಗ್ರಾಮ ಪಂಚಾಯತಿ