ಬನವಾಸಿ: ಭಾರತೀಯ ಜನತಾ ಪಾರ್ಟಿ (BJP) ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಗ್ರಾಮ ಪರಿಕ್ರಮ ಯಾತ್ರೆಯನ್ನು ಪಟ್ಟಣದ ರಥಬೀದಿಯಲ್ಲಿ ಬುಧವಾರ (Uttara Kannada News) ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: Onion Benefits: ಈರುಳ್ಳಿಯನ್ನು ಹೊಂಬಣ್ಣಕ್ಕೆ ಕರಿಯುವುದೂ ಒಂದು ಕಲೆ; ಇಲ್ಲಿವೆ ಸರಳ ಸೂತ್ರಗಳು!
ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ್ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತಾಪಿ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದ ಹಲವು ರೈತ ಪರ ಯೋಜನೆಗಳನ್ನು ನಿಲ್ಲಿಸಿದೆ. ರೈತ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.
ಬರ ನಿರ್ವಹಣೆ, ಪರಿಹಾರ ವಿತರಣೆಗೆ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ದನ-ಕರುಗಳಿಗೆ ಮೇವು, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಗೋಶಾಲೆ ತೆರೆಯುವ ನಿರ್ಧಾರ ಮಾಡಿಲ್ಲ. ದುಡ್ಡು ಕೊಟ್ಟು ಮೇವು ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ ಮಾತನಾಡಿದರು.
ಗ್ರಾಮ ಪರಿಕ್ರಮ ಯಾತ್ರೆಗೂ ಮುನ್ನ ಇಲ್ಲಿನ ಐತಿಹಾಸಿಕ ಶ್ರೀ ಮಧುಕೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿ, ನಾಡಿಗೆ ಸಕಾಲದಲ್ಲಿ ಮಳೆ, ಬೆಳೆ ಬಂದು ರೈತರು ಸುಭಿಕ್ಷೆ ಹೊಂದಲಿ ಎಂದು ಪ್ರಾರ್ಥಿಸಿ ವಿಷೇಶ ಪೂಜೆ ನೆರವೇರಿಸಿದರು.
ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ದಾಖಲಾಗಿರುವ ಅತಿವೇಗದ ಶತಕಗಳ ವಿವರ ಈ ಕೆಳಗಿನಂತಿದೆ
ಈ ಸಂದರ್ಭದಲ್ಲಿ ಹಿರಿಯರಾದ ಟಿ.ಜಿ. ನಾಡಿಗೇರ, ರಾಜ್ಯ ರೈತ ಮೋರ್ಚಾ ಸದಸ್ಯ ಗಣೇಶ ಸಣ್ಣಲಿಂಗಣ್ಣನ್ನವರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್ ನಾಯ್ಕ್, ರೈತ ಮೋರ್ಚಾ ಜಿಲ್ಲಾ ಮಾಧ್ಯಮ ಸಲಹೆಗಾರ ಸುಧೀರ್ ನಾಯರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಮರಿಗುಡ್ಡೆ, ಗಜಾನನ ಗೌಡ, ಪುಟ್ಟರಾಜ ಸವಣೂರು, ವಿಶ್ವನಾಥ ಹಾದಿಮನಿ, ಮಹೇಶ, ಸೀಮಾವತಿ ಕೆರೊಡಿ, ಶಾಂತಾ ಸಣ್ಣಲಿಂಗಣ್ಣನ್ನವರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.