Uttara Kannada News: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಲು ಡಿಸಿ ಆದೇಶ - Vistara News

ಉತ್ತರ ಕನ್ನಡ

Uttara Kannada News: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಲು ಡಿಸಿ ಆದೇಶ

Uttara Kannada News: ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Implement strict model code of conduct in district says DC Gangubai Manakar
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿ ಗಂಗೂಬಾಯಿ ಮಾನಕರ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು (Model Code of Conduct) ಅನುಷ್ಠಾನಗೊಳಿಸುವಂತೆ, ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಹೊರಡಿಸುವ ಮಾದರಿ ನೀತಿ ಸಂಹಿತೆಯನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಯಾವುದೇ ಸಂದರ್ಭದಲ್ಲೂ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದು. ನೀತಿ ಸಂಹಿತೆ ವ್ಯಾಪ್ತಿಗೆ ಒಳಪಡುವ ವಿಷಯಗಳ ಕುರಿತಂತೆ ರೂಪಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಇದನ್ನೂ ಓದಿ:‘Kohli’s Kitchen’: ಕೊಹ್ಲಿ ಹೆಸರಿನಲ್ಲಿ ಬೆಂಗಳೂರು ಅಭಿಮಾನಿಯ ರೆಸ್ಟೋರೆಂಟ್; ಇಲ್ಲಿ ಏನೆಲ್ಲ ಸಿಗುತ್ತೆ?

ನೀತಿ ಸಂಹಿತೆ ಜಾರಿಗೊಳಿಸುವ ಅವಧಿಯಲ್ಲಿ ರಾಜಕಿಯ ಮುಖಂಡರುಗಳು, ರಾಜಕೀಯ ಪಕ್ಷಗಳು , ಸಚಿವರುಗಳಿಗೆ ನಿಗಧಿಪಡಿಸಿರುವ ಕಾರ್ಯ ವ್ಯಾಪ್ತಿಯನ್ನು ಅಧಿಕಾರಿಗಳು ತಿಳಿದು ಅದರಂತೆ ಕಾರ್ಯನಿರ್ವಹಿಸಬೇಕು. ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷಗಳಿಗೆ ಸರ್ಕಾರಿ ನೌಕರರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆಂಬಲ ನೀಡುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದ್ದು ಈ ಕುರಿತಂತೆ ಸಂಬಂಧಪಟ್ಟ ನೌಕರರ ವಿರುದ್ದ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಗಳೂ ಸಹ ತಮಗೆ ವಹಿಸುವ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ಸಬೂಬುಗಳನ್ನು ಹೇಳಿ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳುವಂತಿಲ್ಲ. ತಮಗೆ ವಹಿಸಲಾಗುವ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು. ಸರ್ಕಾರಿ ನೌಕರರು ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವುದು, ಬೆಂಬಲಿಸುವುದು, ಕಮೆಂಟ್ ಮಾಡುವುದು, ಮತ್ತೊಬ್ಬರಿಗೆ ಕಳುಹಿಸುವುದು ನೀತಿ ಸಂಹಿತೆಯ ಉಲ್ಲಂಘನೆ ವ್ಯಾಪ್ತಿಗೆ ಬರಲಿದೆ ಎಂದರು.

ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ,ಪಾರದರ್ಶಕ ಹಾಗೂ ಶಾಂತಿಯುತ ಚುನಾವಣೆ ನಡೆಯಲು ಮಾದರಿ ನೀತಿ ಸಂಹಿತೆಯ ಅನುಷ್ಠಾನ ಅತ್ಯಂತ ಅಗತ್ಯವಾಗಿದ್ದು, ಈ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಇದನ್ನೂ ಓದಿ: Deepika Padukone: BAFTA ಪ್ರಶಸ್ತಿ ಸಮಾರಂಭ ನಿರೂಪಿಸುವವರ ತಂಡದಲ್ಲಿರುವ ಏಕೈಕ ಭಾರತೀಯ ನಟಿ ಈಕೆ!

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಎಎಸ್ಪಿ ಜಯಕುಮಾರ್ ಹಾಗೂ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Ms Universal Petite 2024: ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ.

VISTARANEWS.COM


on

Ms Universal Petite 2024
Koo

ವಾಷಿಂಗ್ಟನ್‌: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ (Shruti Hegde) ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ (Ms Universal Petite 2024) ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ವಿಶೇಷ ಎಂದರೆ‌ ಶ್ರುತಿ ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಸುಮಾರು 15 ವರ್ಷಗಳಿಂದ ಅಮೆರಿಕದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಮೊದಲ ಬಾರಿಗೆ 2009ರಲ್ಲಿ ಈ ಸ್ಪರ್ಧೆ ನಡೆದಿತ್ತು.

ಶಿರಸಿ, ಹುಬ್ಬಳ್ಳಿ ಮೂಲ

ಶ್ರುತಿ ಅವರು ಶಿರಸಿ ಮತ್ತು ಹುಬ್ಬಳ್ಳಿ ನಂಟು ಹೊಂದಿದ್ದಾರೆ. ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಶ್ರುತಿ ಸದ್ಯ ತಮ್ಮ ಪಾಲಕರಾದ ಕೃಷ್ಣ ಹೆಗಡೆ, ಕಮಲಾ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಕೀರೀಟ ತೊಟ್ಟುಕೊಂಡಿದ್ದ ಶ್ರುತಿ ಕಳೆದ ವರ್ಷ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು.

ಎಂ.ಡಿ. ಅಧ್ಯಯನ

ಹುಬ್ಬಳ್ಳಿಯಲ್ಲಿ ಎಂಬಿಬಿಎಸ್‌ ಓದಿರುವ ಶ್ರುತಿ ಅವರು ಪ್ರಸ್ತುತ ತುಮಕೂರಿನಲ್ಲಿ ಡರ್ಮಟಾಲಜಿಯಲ್ಲಿ ಎಂ.ಡಿ. ಮಾಡುತ್ತಿದ್ದಾರೆ. ಅವರು ಬಹುಮುಖ ಪ್ರತಿಭೆಯೂ ಹೌದು. ಭರತನಾಟ ಕಲಾವಿದೆಯಾಗಿ ವಿವಿಧ ಕಡೆ ಹಲವು ಪ್ರದರ್ಶನ ನೀಡಿದ್ದಾರೆ. ಜತೆಗೆ ಕನ್ನಡದ ಕೆಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ಈ ಬಾರಿಯ ಸ್ಪರ್ಧೆ ಅಮೆರಿಕದ ಫ್ಲೋರಿಡಾದಲ್ಲಿ ಜೂ. 6ರಿಂದ 10ರವರೆಗೆ ಆಯೋಜಿಸಲಾಗಿತ್ತು. ನ್ಯಾಷನಲ್‌ ಕಾಸ್ಟ್ಯೂಮ್‌ ರೌಂಡ್‌, ಪ್ರಶ್ನೋತ್ತರ ರೌಂಡ್‌ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.

ಏನಿದು ಮಿಸ್ ಯೂನಿವರ್ಸಲ್‌ ಪೆಟೀಟ್‌ ಸ್ಪರ್ಧೆ?

ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವುದು ಕಡಿಮೆ ಎತ್ತರ ಹೊಂದಿರುವವರಿಗಾಗಿ ಇರುವ ಸ್ಪರ್ಧೆ. 5.2 ಅಡಿ ಎತ್ತರದ ಶ್ರುತಿ ಅವರಿಗೆ ಈ ಹಿಂದೆ ಮಿಸ್‌ ವರ್ಲ್ಡ್‌, ಮಿಸ್‌ ಯೂನಿವರ್ಸ್‌ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಆಗಿರಲಿಲ್ಲ. ಇದೀಗ ಅವರ ಕನಸು ನನಸಾಗಿದೆ. ಹಲವು ವರ್ಷಗಳಿಂದ ನಡೆಸುತ್ತಿದ್ದ ತಯಾರಿಗೆ ಕೊನೆಗೂ ಫಲ ಸಿಕ್ಕಿದೆ ಎಂದು ಅವರು ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Miss World 2024: ಸಿನಿ ಶೆಟ್ಟಿಗೆ ವಿಶ್ವ ಸುಂದರಿ ಕಿರೀಟ ಜಸ್ಟ್‌ ಮಿಸ್‌

ಕ್ರಿಸ್ಟಿನಾ ಪಿಸ್ಕೋವಾಗೆ ವಿಶ್ವ ಸುಂದರಿ ಕಿರೀಟ

ಮುಂಬೈ: ಜೆಕ್ ಗಣರಾಜ್ಯ ದೇಶದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ (Miss World 2024)ಯಾಗಿ ಹೊರಹೊಮ್ಮಿದ್ದಾರೆ. ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡರು. ಕ್ರಿಸ್ಟಿನಾ ಕಾನೂನು ಮತ್ತು ವ್ಯವಹಾರ ಆಡಳಿತ ಎರಡರಲ್ಲೂ ಪದವಿ ಅಧ್ಯಯನ ಮಾಡುತ್ತಿದ್ದಾರೆ ಮತ್ತು ರೂಪದರ್ಶಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಅವರು ಕ್ರಿಸ್ಟಿನಾ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ ಎಂದು ಮಿಸ್ ವರ್ಲ್ಡ್ ಆರ್ಗನೈಸೇಶನ್ ತಿಳಿಸಿದೆ.

ವಿಶೇಷ ಎಂದರೆ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯವನ್ನು ಭಾರತ ಬರೋಬ್ಬರಿ 28 ವರ್ಷಗಳ ಬಳಿಕ ವಹಿಸಿತ್ತು. 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತವು ಕೊನೆಯದಾಗಿ ಆಯೋಜಿಸಿತ್ತು. ಬೆಂಗಳೂರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಗ್ರೀಸ್‌ನ 19ರ ಹರೆಯದ ಐರಿನ್ ಸ್ಕ್ಲಿವಾ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದರು.

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಜಿಲ್ಲೆಯ ರೈತ ಕುಟುಂಬಗಳಿಗೆ 13.93 ಕೋಟಿ ರೂ. ಜೀವನೋಪಾಯ ಪರಿಹಾರ: ಡಿಸಿ

Uttara Kannada News: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಹಾಗೂ ಮುಂಗಾರು ಬರದಿಂದ ಈಗಾಗಲೇ ಬೆಳೆಹಾನಿ ಪರಿಹಾರ ಪಡೆದಿರುವ ರೈತ ಕುಟುಂಬಗಳ ಪೈಕಿ ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ 48,487 ರೈತ ಕುಟುಂಬಗಳಿಗೆ ತಲಾ ಗರಿಷ್ಠ ರೂ.2874 ರಂತೆ ಜಿಲ್ಲೆಗೆ ಒಟ್ಟು 13.93 ಕೋಟಿ ರೂ ಜೀವನೋಪಾಯ ಪರಿಹಾರದ ನೆರವು ದೊರೆಯಲಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

A total of Rs 13.93 crore livelihood relief for the farmer families of the district says DC Gangubai Manakar
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಹಾಗೂ ಮುಂಗಾರು ಬರದಿಂದ ಈಗಾಗಲೇ ಬೆಳೆ ಹಾನಿ ಪರಿಹಾರ ಪಡೆದಿರುವ ರೈತ ಕುಟುಂಬಗಳ ಪೈಕಿ ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ 48,487 ರೈತ ಕುಟುಂಬಗಳಿಗೆ ತಲಾ ಗರಿಷ್ಠ ರೂ.2874 ರಂತೆ ಜಿಲ್ಲೆಗೆ (Uttara Kannada News) ಒಟ್ಟು 13.93 ಕೋಟಿ ರೂ ಜೀವನೋಪಾಯ ಪರಿಹಾರದ ನೆರವು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಂಡಿರುವ ರೈತ ಕುಟುಂಬಗಳ ಪೈಕಿ, ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ ರೈತರಿಗೆ ಈ ಜೀವನೋಪಾಯ ಪರಿಹಾರದ ನೆರವು ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ, ಈ ಎಲ್ಲಾ ಅರ್ಹ ರೈತರ ಪಟ್ಟಿಯನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಸಲ್ಲಿಕೆಯಾಗಿರುವ ಈ ಎಲ್ಲಾ ರೈತರಿಗೆ ಶೀಘ್ರದಲ್ಲಿಯೇ ಪರಿಹಾರದ ಮೊತ್ತವು ಕೈ ಸೇರಲಿದ್ದು, ಮೊತ್ತವು ರೈತರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಆಗಲಿದೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ಬರದಿಂದಾಗಿ ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿದ್ದ ರಾಜ್ಯಾದ್ಯಂತ ಒಟ್ಟು 17,84,398 ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 280.52 ಕೋಟಿ ರೂ ಹಾಗೂ ರಾಷ್ಟ್ರೀಯ ವಿಪತ್ತು ನಿಧಿಯಿಂದ 234.40 ಕೋಟಿ ರೂ ಸೇರಿದಂತೆ ಒಟ್ಟು 512.92 ಕೋಟಿಗಳನ್ನು ಬಿಡುಗಡೆ ಮಾಡಲು ಈಗಾಗಲೇ ಆದೇಶಿಸಲಾಗಿದೆ.

ಈ ಪರಿಹಾರದ ಮೊತ್ತವನ್ನು ಅರ್ಹ ಮಳೆಯಾಶ್ರಿತ ಒಣಭೂಮಿ ಹೊಂದಿರುವ ಸಣ್ಣ ಹಾಗೂ ಅತೀ ಸಣ್ಣ ಹಾಗೂ ಕುಟುಂಬ ಐಡಿ ಹೊಂದಿರುವ ರೈತ ಕುಟುಂಬಗಳಿಗೆ ಮಾತ್ರ ಪಾವತಿಸಲಾಗುತ್ತಿದ್ದು, ಒಂದು ಕುಟುಂಬಕ್ಕೆ ಒಂದು ಬಾರಿ ಮಾತ್ರ ಪಾವತಿ ಮಾಡಲಾಗುವುದು. ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಅರ್ಹ ರೈತರಿದ್ದಲ್ಲಿ ಪರಿಹಾರದ ಮೊತ್ತವನ್ನು PRORATA ಆಧಾರದ ಮೇಲೆ ಪ್ರತಿಯೊಬ್ಬ ಅರ್ಹ ರೈತರಿಗೆ ನಿಯಮಾನುಸಾರ ಪಾವತಿಸಲಾಗುವುದು ಮತ್ತು ಜೀವನೋಪಾಯ ಪರಿಹಾರ ಭತ್ಯೆ ಪಾವತಿ ಕುರಿತ ಎಲ್ಲಾ ಫಲಾನುಭವಿಗಳ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು.

ಇದೇ ಸಂದರ್ಭದಲ್ಲಿ ಜಿಲ್ಲೆಗೆ ಬೆಳೆ ಹಾನಿ ಪರಿಹಾರದ ಮೊತ್ತದ 11ನೇ ಕಂತಿನಲ್ಲಿ 8554 ರೈತರಿಗೆ ಒಟ್ಟು 2.20 ಕೋಟಿ ರೂ ಗಳು ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಇದುವರಗೆ ಒಟ್ಟು 1,27,801 ಫಲಾನುಭವಿಗಳಿಗೆ 38.27 ಕೋಟಿ ರೂ ಬೆಳೆ ಹಾನಿ ಪರಿಹಾರದ ಮೊತ್ತ ಬಿಡುಗಡೆಯಾಗಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ಜಿಲ್ಲೆಯಲ್ಲಿ ಕಳೆದ ಸಾಲಿನ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ, ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಜಿಲ್ಲೆಯ 48,487 ಅರ್ಹ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ವಿತರಣೆ ಮಾಡುವ ಕುರಿತಂತೆ ಅರ್ಹ ರೈತರ ವಿವರಗಳನ್ನು ಜಿಲ್ಲಾಡಳಿತದಿಂದ ಆನ್‌ಲೈನ್ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಾಧಿಕಾರದಿಂದಲೇ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಆಗಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

Karnataka Rain : ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಂಗಳೂರಲ್ಲಿ ಅಂಡರ್‌ಪಾಸ್‌ ಜಲಾವೃತಗೊಂಡಿತ್ತು.

VISTARANEWS.COM


on

By

karnataka Weather Forecast
Koo

ಕಲಬುರಗಿ/ಕೊಪ್ಪಳ: ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಕಲಬುರಗಿಯಲ್ಲಿ ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಕಲಬುರಗಿ ತಾಲೂಕಿನ ಹೊನ್ನ ಕಿರಣಗಿ ಗ್ರಾಮದಲ್ಲಿ‌ಘಟನೆ ನಡೆದಿದೆ.

ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದ್ದು, ಸ್ವಲ್ಪದರಲ್ಲೆ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿಯನ್ನು ‌ನಂದಿಸಿದ್ದಾರೆ. ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಮುಂದುವರೆದ ಆರಿದ್ರಾ ಮಳೆ

ಕೊಡಗಿನಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಅಂಡರ್‌ ಪಾಸ್‌ ಜಲಾವೃತ

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಅಂಡರ್ ಪಾಸ್‌ನಲ್ಲಿ ನೀರು ನಿಂತಿದೆ. ನಿನ್ನೆ ಸುರಿದ ಮಳೆಗೆ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಕೂಡ್ಲಿಗಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಮತ್ತೊಂದು ಕಡೆ ಮಳೆಗಾಗಿ ವಿಶೇಷ ಪೂಜೆ ನಡೆದಿದೆ. ವಿಜಯನಗರದ ಕೂಡ್ಲಿಗಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಳೆಗಾಗಿ ಕೊಂತೆಮ್ಮ ಗಂಗೆ ಪೂಜೆಯನ್ನು ಗ್ರಾಮಸ್ಥರು ನೆರವೇರಿಸಿದ್ದಾರೆ. ಪಂಚ ಮುತ್ತೈದೆಯರು, ಪಂಚ ಕನ್ನಿಕೇಯರಿಂದ ವರುಣನ ಕೃಪೆಗಾಗಿ ಕೊಂತೆಮ್ಮ ಗಂಗೆ ಪೂಜೆ ಸಲ್ಲಿಸಿದರು.

ಮೂರು ಕಾಲು ದಾರಿ ಸೇರುವ ವೃತ್ತದಲ್ಲಿ ನೀರು ತುಂಬಿದ ಕುಂಬವೊಂದನ್ನು ಅಲಂಕಾರ ಮಾಡಿ, ಅದನ್ನೇ ಮಳೆ ಕೊಂತೆಮ್ಮಳೆಂದು ವಿಧಿವತ್ತಾಗಿ ಪಂಚ ಮುತ್ತೈದೆಯರಿಂದ ಪ್ರತಿಷ್ಠಾಪನೆ ಮಾಡಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಿದರು.

ಇದನ್ನೂ ಓದಿ: Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ.

ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Stock Market
ವಾಣಿಜ್ಯ5 mins ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ19 mins ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು31 mins ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ33 mins ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ41 mins ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ46 mins ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

train service
ಬೆಂಗಳೂರು1 hour ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Pawan Kalyan
ದೇಶ1 hour ago

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

actor darshan crazy fans
ವೈರಲ್ ನ್ಯೂಸ್1 hour ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Harshika Poonacha
ಸ್ಯಾಂಡಲ್ ವುಡ್2 hours ago

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌