ಬನವಾಸಿ: ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ಕದಂಬೋತ್ಸವ-2024 (Kadambotsava-2024)ರ ಅಂಗವಾಗಿ ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಗೆ ಮಂಗಳವಾರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಚಾಲನೆ (Uttara Kannada News) ನೀಡಿದರು.
ಮೆರವಣಿಗೆಯು ಇಲ್ಲಿನ ಮಧುಕೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಾರಂಭಗೊಂಡು ಕದಂಬ ವೃತ್ತದ ಮೂಲಕ ಸಾಗಿ ಕದಂಬೋತ್ಸವ ಮೈದಾನದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು, ಆಕರ್ಷಕ ರೂಪಕಗಳು, ವಾದ್ಯ ತಂಡಗಳು, ಶಾಲಾ ಮಕ್ಕಳ ಪಥ ಸಂಚಲನ, ಕಲಾ ತಂಡಗಳು ಮೆರವಣಿಗೆಗೆ ಭವ್ಯ ಆಕರ್ಷಣೆ ನೀಡಿದವು.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ; ಇಷ್ಟಿದೆ ಇಂದಿನ ದರ
ಮೆರವಣಿಗೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತೆ ಅಪರ್ಣಾ ರಮೇಶ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ಗ್ರೇಡ್ 2 ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.