Uttara Kannada News: ಶ್ರೀಶಂಕರರ ಮೂಲಮಠ ಪುನರುತ್ಥಾನಕ್ಕೆ ಸಂಕಲ್ಪ: ರಾಘವೇಶ್ವರ ಶ್ರೀ ಘೋಷಣೆ - Vistara News

ಉತ್ತರ ಕನ್ನಡ

Uttara Kannada News: ಶ್ರೀಶಂಕರರ ಮೂಲಮಠ ಪುನರುತ್ಥಾನಕ್ಕೆ ಸಂಕಲ್ಪ: ರಾಘವೇಶ್ವರ ಶ್ರೀ ಘೋಷಣೆ

Uttara Kannada News: ಗೋಕರ್ಣದ ಅಶೋಕೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಖ್ಯಾಪನಾ ಕಾರ್ಯಕ್ರಮ ನಡೆಯಿತು.

VISTARANEWS.COM

on

Shri Raghaveshwara Bharathi maha swamiji aashirvachan in Khyapana programme at Ashoke Sri Ramachandrapur Mutt
ಗೋಕರ್ಣದ ಅಶೋಕೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಖ್ಯಾಪನಾ ಕಾರ್ಯಕ್ರಮದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೋಕರ್ಣ: ಶತಮಾನಗಳಿಂದ ನಿರ್ಜಲ ಮತ್ತು ನಿರ್ಜಲವಾಗಿದ್ದ ಅಶೋಕೆಯ ಪುಣ್ಯ ಪರಿಸರದಲ್ಲಿ ಮತ್ತೆ ಜೀವಚೈತನ್ಯ ಪ್ರವಾಹವಾಗಿ ಹರಿದಿರುವುದು ಶಂಕರಾಚಾರ್ಯರು ಸ್ಥಾಪಿಸಿದ ಮೂಲಮಠದ ಪುನರುತ್ಥಾನದ ಪರ್ವಕಾಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ತಿಳಿಸಿದರು.

ಆದಿಗುರು ಶಂಕರರು ಮೂಲಮಠ ಸ್ಥಾಪಿಸಿದ ಅಶೋಕೆಯ ಪರಿಸರದಲ್ಲಿ ಶ್ರೀರಾಮಚಂದ್ರಾಪುರ ಮಠದ ಸಮಸ್ತ ಶಿಷ್ಯರು ಹಮ್ಮಿಕೊಂಡಿದ್ದ ಖ್ಯಾಪನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಅಶೋಕೆಯ ಪುಣ್ಯಭೂಮಿಗೆ ಇಂದು ಜನಸ್ತೋಮ ಹರಿದುಬಂದಿದೆ. ಜೀವಚೈನತ್ಯ ಮೈವೆತ್ತಿದ ಪುಣ್ಯಪರ್ವ. ಆದಿ ಗುರು ಶಂಕರರೆಂಬ ಮಹಾಚೈತನ್ಯವನ್ನು ಮೂರು ಬಾರಿ ಆಕರ್ಷಿಸಿದ ಈ ಕ್ಷೇತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ತಪೋಭೂಮಿ. ಹೀಗೆ ಇಡೀ ಗೋಕರ್ಣ ಮಂಡಲಕ್ಕೆ ರಾಜಧಾನಿಯಾಗಿ ಸಮಸ್ತ ಸಮಾಜಕ್ಕೆ ಧರ್ಮನಿರ್ದೇಶಗಳನ್ನು ನೀಡುತ್ತಾ ವೈಭವದಿಂದ ಮೆರೆಯುತ್ತಿದ್ದ ಆದ್ಯ ರಘೋತ್ತಮ ಮಠ (ಈಗಿನ ರಾಮಚಂದ್ರಾಪುರ ಮಠ) ಇದೀಗ ಗತವೈಭವವನ್ನು ಮರಳಿ ಪಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಬಣ್ಣಿಸಿದರು.

ಇದನ್ನೂ ಓದಿ: Virat Kohli: ಮೊದಲ ಟಿ20 ಪಂದ್ಯಕ್ಕೆ ಕೊಹ್ಲಿ ಅಲಭ್ಯ; ಖಚಿತಪಡಿಸಿದ ಕೋಚ್​

ಸುಮತಿಯಿಂದ ಸೋತ ಅಶೋಕನೆಂಬ ರಾಜ ಪ್ರಕ್ಷದ್ವೀಪದಿಂದ ಇಲ್ಲಿಗೆ ಬಂದು ಘೋರ ತಪಸ್ಸು ಮಾಡಿ, ಕಳೆದುಕೊಂಡಿದ್ದನ್ನು ಮರಳಿ ಪಡೆದು ಧರ್ಮರಾಜ್ಯ ಸ್ಥಾಪನೆ ಮಾಡಿದ ಬಗ್ಗೆ ಸ್ಕಂದಪುರಾಣದಲ್ಲಿ ಉಲ್ಲೇಖವಿದೆ. ಹಿಂದೆ ವಿದ್ಯಾ ತಪಸ್ಸಿನ ಜ್ಞಾನ ಸಾಮ್ರಾಜ್ಯವಾಗಿ ಕಂಗೊಳಿಸಿದ್ದ ಅಶೋಕೆ ಕಾಲಗರ್ಭದಲ್ಲಿ ಸಿಲುಕಿ ಇಲ್ಲಿನ ಚೈತನ್ಯಕ್ಕೆ ಮಬ್ಬು ಕವಿದಿತ್ತು. ಆದರೆ ಇಡೀ ಸಮಾಜವೇ ಮತ್ತೊಮ್ಮೆ ಸೇರುವ ಮೂಲಕ ಚೈತನ್ಯ ಪುಟಿದೆದ್ದಿದೆ. ಇದು ಶ್ರೀಮಠದ ಪುನರುತ್ಥಾನದ ಪರ್ವಕಾಲ ಎಂದು ವಿವರಿಸಿದರು.

ಆದಿಗುರು ಶಂಕರರ ವಾಕ್ಯ ಪರಿಪಾಲನೆಗಾಗಿ ಬೋಳುಗುಡ್ಡವಾಗಿದ್ದ ಅಶೋಕೆಗೆ ಆಗಮಿಸಿ ಮೂಲಮಠದ ಪುನರುತ್ಥಾನದ ಸಂಕಲ್ಪ ಮಾಡಿದ್ದೇವೆ. ಮೂಲಮಠ ಸ್ಥಾಪನೆ ಸಂದರ್ಭದಲ್ಲಿ ಶ್ರೀಶಂಕರರು ತಮ್ಮ ಜ್ಯೇಷ್ಠಶಿಷ್ಯರಿಗೆ ನೀಡಿದ್ದ ‘ಅತ್ರತಿಷ್ಠ ಯತಿಶ್ರೇಷ್ಠ’ ಎಂಬ ಗುರುವಾಕ್ಯ ಪರಿಪಾಲನೆಯಷ್ಟೇ ಈ ಸಂಕಲ್ಪಕ್ಕೆ ಮೂಲ ಎಂದರು.

ಆದಿಗುರುವಿನ ವಾಕ್ಯ ಪರಿಪಾಲನೆ ಸಾಧ್ಯವಾಗದ ಬೇಸರ, ನೋವಿನಿಂದ ಅಶೋಕೆಯನ್ನು ನಮ್ಮ ಪೂರ್ವಾಚಾರ್ಯರು ತೊರೆಯಬೇಕಾದ ಸಂದರ್ಭ ಬಂದದ್ದು ನಮ್ಮ ಇಡೀ ಸಮಾಜದ ಅಧಃಪತನಕ್ಕೆ ಕಾರಣವಾಯಿತು. ಮೂಲಮಠವಷ್ಟೇ ಅಲ್ಲದೇ ಇಲ್ಲಿದ್ದ ಅಗ್ರಹಾರ ಕೂಡಾ ನಾಶವಾಯಿತು. ಇದಕ್ಕೆ ಗುರುಗಳ ನೋವು ಕಾರಣ. ಮಲ್ಲಿಕಾರ್ಜುನನ ಉಪೇಕ್ಷೆ ಕಾರಣ. ಇಂಥ ತಪ್ಪುಗಳಿಗೆ ಖ್ಯಾಪನೆಯ ಮೂಲಕ ಪೂರ್ವಾಚಾರ್ಯರ ಕ್ಷಮೆ ಯಾಚಿಸುವ ಮೂಲಕ ಪುನರುತ್ಥಾನಕ್ಕೆ ಅವರ ಅನುಗ್ರಹ ಬೇಡೋಣ ಎಂದು ಸೂಚಿಸಿದರು.

ಗುರು ದೇವರ ಪ್ರತಿಬಿಂಬ. ಗುರುಗಳಿಗೆ, ನೋವು ನೀಡಿದವರು, ಮಠಕ್ಕೆ ಅಪಚಾರ ಮಾಡಿದವರು ಬ್ರಹ್ಮರಾಕ್ಷಸರಾಗುತ್ತಾರೆ ಎನ್ನುವುದು ಶಾಸ್ತ್ರವಿಧಿತ. ಯಾವುದೇ ಪ್ರಮಾದಗಳಿಗೆ ಪಶ್ಚಾತ್ತಾಪವೇ ಪ್ರಾಯಶ್ಚಿತ. ಇದರಲ್ಲಿ ನಾಲ್ಕು ಬಗೆ. ಖ್ಯಾಪನೆ, ಅನುತಾಪ, ತಪಸ್ಸು ಮತ್ತು ಅಧ್ಯಯನ. ಆದ್ದರಿಂದ ಪುನರುತ್ಥಾನದ ಮೊದಲ ಕಾರ್ಯ ಖ್ಯಾಪನೆ ಅಥವಾ ಪಾಪ ಪರಿಮಾರ್ಜನೆ ಎಂದು ವಿವರಿಸಿದರು.

ಇದನ್ನೂ ಓದಿ: Hardware Business : ಹಾರ್ಡ್‌ವೇರ್‌ ಬಿಸಿನೆಸ್‌ ಆರಂಭಿಸೋದು ಹೇಗೆ, ಬಂಡವಾಳ ಎಷ್ಟು ಬೇಕು, ಲಾಭ ಎಷ್ಟು?

ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಗುರುಪರಂಪರೆಯ ನೋವಿನ ಪರಿಮಾರ್ಜನೆಗಾಗಿ ಇಡೀ ಸಮಾಜ ಖ್ಯಾಪನೆ ಮಾಡುತ್ತಿದೆ. ಭಕ್ತಿಭಾವದಿಂದ, ನಿರ್ಮೋಹದಿಂದ ಪಶ್ಚಾತ್ತಾಪ ಪಡುತ್ತಿದ್ದೇವೆ. ಇಡೀ ಸಮಾಜ ಖ್ಯಾಪನೆಗಾಗಿ ಎದ್ದುಬಂದಿದ್ದು, ಪರಿಮಾರ್ಜನೆಯಿಂದ ಪ್ರಸನ್ನರಾಗಬೇಕು ಎಂದು ಮನವಿ ಮಾಡಿಕೊಂಡರು.

ಧರ್ಮಕರ್ಮ ವಿಭಾಗದ ಶ್ರೀಸಂಯೋಜಕ ಕೂಟೇಲು ರಾಮಕೃಷ್ಣ ಭಟ್ಟ ಖ್ಯಾಪನೆ ಬೋಧಿಸಿದರು. ಅತಿರುದ್ರ ಮಹಾಸಮಿತಿ ಗೌರವಾಧ್ಯಕ್ಷ ದೇವಶ್ರವ ಶರ್ಮಾ, ಕಾರ್ಯಾಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಕೋಶಾಧ್ಯಕ್ಷ ರಮಣ ಭಟ್ ಮುಂಬೈ, ಉಪಾಧ್ಯಕ್ಷರಾದ ಸಂತೋಷ್ ಹೆಗಡೆ, ಜಿ.ಎಲ್.ಗಣೇಶ್, ಸುಬ್ರಾಯ ಅಗ್ನಿಹೋತ್ರಿ, ಆರ್.ಎಸ್.ಹೆಗಡೆ ಹರಗಿ, ಕಾರ್ಯದರ್ಶಿಗಳಾದ ಶ್ರೀಕಾಂತ ಪಂಡಿತ್, ಮುರೂರು ಸುಬ್ರಾಯ ಭಟ್, ಆರ್.ಜಿ.ಹೆಗಡೆ ಹೊಸಾಕುಳಿ, ಪರಮೇಶ್ವರ ಮಾರ್ಕಂಡೆ, ಪೆದಮಲೆ ನಾಗರಾಜ ಭಟ್, ಎಸ್.ಎಸ್.ಹೆಗಡೆ, ಜಿ.ಎಸ್.ಹೆಗಡೆ, ಅಶ್ವಿನಿ ಉಡುಚೆ, ಕಾರ್ಯಾಲಯ ಕಾರ್ಯದರ್ಶಿ ಜಿ.ವಿ.ಹೆಗಡೆ, ರಾಮಚಂದ್ರ ಅಜ್ಜಕಾನ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ, ಲೋಕಸಂಪರ್ಕಾಧಿಕಾರಿಗಳಾದ ಜಿ.ಕೆ.ಹೆಗಡೆ, ಹರಿಪ್ರಸಾದ್ ಪೆರಿಯಾಪ್ಪು ಭಾಗವಹಿಸಿದ್ದರು.

ವಿವಿಧ ವಿಭಾಗಗಳ ನಿರ್ದೇಶಕರಾದ ಶ್ರೀವತ್ಸ ಮುರಗೋಡು, ಪ್ರಮೋದ್ ಪಂಡಿತ್, ಹಾರಕೆರೆ ನಾರಾಯಣ ಭಟ್, ಶಾಂತಾರಾಮ ಹಿರೇಮನೆ, ಈಶ್ವರಿ ಬೇರ್ಕಡವು, ರಾಜಾರಾಮ ಭಟ್ ಮುರೂರು, ವೀಣಾ ಗೋಪಾಲಕೃಷ್ಣ, ಮೋಹನ ಭಟ್ ಹರಿಹರ, ಹೇರಂಬ ಶಾಸ್ತ್ರಿ, ಮಹಾಮಂಡಲ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.‌

ಇದನ್ನೂ ಓದಿ: Rahul Dravid: ಅಯ್ಯರ್​,ಇಶಾನ್​ ಅಶಿಸ್ತು ವಿಚಾರದಲ್ಲಿ ಸ್ಪಷ್ಟನೆ ನೀಡಿದ ಕೋಚ್​​ ದ್ರಾವಿಡ್

ಶ್ರೀಮಲ್ಲಿಕಾರ್ಜುನ ಸ್ವಾಮಿಗೆ ಹಮ್ಮಿಕೊಂಡಿದ್ದ ಹನ್ನೊಂದು ದಿನಗಳ ಅತಿರುದ್ರ ಅಭಿಷೇಕ ಪರಮಪೂಜ್ಯರು ಸುವರ್ಣ ಕಲಶಾಭಿಷೇಕ ಮಾಡುವ ಮೂಲಕ ಸಂಪನ್ನಗೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

PM Narendra Modi: ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

VISTARANEWS.COM

on

Congress instigates bombers We are crushing traitors through NIA PM Narendra Modi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಘಟನೆ ಬಗ್ಗೆ ಗರಂ ಆಗಿ ಮಾತನಾಡಿದರು.

ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಎಕ್ಸ್‌ರೇ ಮಾಡುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮ್ಮ ಸೇವೆ ಮಾಡುವುದಕ್ಕಾಗಿಯೇ ಪರಮಾತ್ಮ ನರೇಂದ್ರ ಮೋದಿಯನ್ನು ಕಳುಹಿಸಿದ್ದಾನೆ. ನಿಮ್ಮ ಕನಸೇ ಮೋದಿ ಸಂಕಲ್ಪ ಅಂತಾ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮುಸ್ಲಿಂ ದೊರೆಗಳ ದೌರ್ಜನ್ಯ ಹಾಗೂ ಅತ್ಯಾಚಾರಗಳ ಬಗ್ಗೆ ಕಾಂಗ್ರೆಸ್ ಸೊಲ್ಲಿಲ್ಲ. ವೋಟ್‌ ಬ್ಯಾಂಕ್ ಹಾಗೂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ರಾಜಕಾರಣ ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕದಂಬ ವಂಶಸ್ಥರು ಆಡಳಿತ ನಡೆಸಿ ಅಪಾರ ಕೊಡುಗೆ ನೀಡಿದ್ದಾರೆ. ಕದಂಬ ವಂಶಸ್ಥರು ಕನ್ನಡ ಅಭಿವೃದ್ಧಿಗೆ ನೀಡಿದ ಒತ್ತನ್ನು ಯಾರೂ ಮರೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi: ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM

on

PM Narendra Modi proposing arecanut millets and fisheries
Koo

ಶಿರಸಿ (ಉತ್ತರ ಕನ್ನಡ): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನಕ್ಕೆ ಪ್ರಚಾರ ಕಾರ್ಯವನ್ನು ಆರಂಭ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

PM Narendra Modi: ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM

on

PM Narendra Modi in Sirsi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉತ್ತರ ಕನ್ನಡ ಅಡಿಕೆಗೆ ಜಿಐ ಟ್ಯಾಗ್‌ ನೀಡಿದ್ದು ನಾವೇ

ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ. ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

PM Narendra Modi Live : ಭಾನುವಾರ (ಏಪ್ರಿಲ್‌ 28) ಬೆಳಗಾವಿಯಲ್ಲಿ ಸಮಾವೇಶ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇದರ ಲೈವ್‌ ವಿಡಿಯೊ ಇಲ್ಲಿದೆ.

VISTARANEWS.COM

on

PM Narendra Modi Live in Sirsi campaign meeting here
Koo

ಶಿರಸಿ (ಉತ್ತರ ಕನ್ನಡ): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Modi in Karnataka) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾವಿ ಸಮಾವೇಶದಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ. ಈ ಸಮಾವೇಶದ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಭಾನುವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಷಣ ಮಾಡಿ, ಈಗ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading
Advertisement
CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ14 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ15 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ25 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ42 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ58 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ3 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌