ಯಲ್ಲಾಪುರ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ (Lok Sabha Election) ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ (Yallapura Assembly Constituency) ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆಯನ್ನು ಯಾವುದೇ ಲೋಪದೋಷವಿಲ್ಲದೆ ನಡೆಸಲಾಗುವುದು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ (Uttara Kannada News) ತಿಳಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ಕಳೆದ 6 ತಿಂಗಳುಗಳಿಂದ ಪೂರ್ವಭಾವಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಚುನಾವಣಾ ನೀತಿ ಸಂಹಿತೆಗೆ ಧಕ್ಕೆ ಬರದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಯಾವುದೇ ರೀತಿಯ ಅನಧಿಕೃತ ಚಟುವಟಿಕೆಗಳು ಕಂಡುಬಂದಲ್ಲಿ ಅಂತವರ ಮೇಲೆ ಕಾನೂನಿನ ಪ್ರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ: Shivamogga News: ಭಕ್ತಸಾಗರದ ಮಧ್ಯೆ ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ರಥೋತ್ಸವ
ಯಲ್ಲಾಪುರ-ಮುಂಡಗೋಡ ಕ್ಷೇತ್ರದಲ್ಲಿ 93,058 ಪುರುಷ ಹಾಗೂ 91,542 ಮಹಿಳಾ ಮತದಾರರು ಸೇರಿದಂತೆ ಒಟ್ಟೂ 1,84.600 ಮತದಾರರಿದ್ದಾರೆ. ಈ ಬಾರಿ ನಾಮಪತ್ರ ಸಲ್ಲಿಕೆಯ ಹಿಂದಿನ ದಿನದವರೆಗೂ ಮತದಾರರ ನೋಂದಣಿಗೆ ಅವಕಾಶವಿದ್ದು, ಏ.12 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಾರಿ ಮನೆಯಿಂದ ಮತ ಚಲಾವಣೆಗೆ 85 ವರ್ಷ ವಯಸ್ಸನ್ನು ನಿಗದಿಪಡಿಸಲಾಗಿದ್ದು, 85 ವರ್ಷ ಮೇಲ್ಪಟ್ಟವರ ಮನೆಗೆ ತೆರಳಿ ಮತ ಪಡೆಯಲಾಗುವುದು.
ಇದನ್ನೂ ಓದಿ: Ballari News: ನೀತಿ ಸಂಹಿತೆ ಉಲ್ಲಂಘನೆ; 430.96 ಲೀ. ಮದ್ಯ, 5 ವಾಹನ ವಶ
ಯಲ್ಲಾಪುರ- 96, ಮುಂಡಗೋಡ-90, ಶಿರಸಿ-47 ಒಟ್ಟು 233 ಮತಗಟ್ಟೆಗಳಿದ್ದು, 21 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕ್ಷೇತ್ರದಲ್ಲಿ 6 ಕಡೆ ಚೆಕ್‌ಪೋಸ್ಟ್‌ಗಳಿದ್ದು, ಕಿರವತ್ತಿ, ಅಗಡಿ, ಸನವಳ್ಳಿ, ಬಾಚಣಕಿ, ದಾಸನಕೊಪ್ಪ ಹಾಗೂ ತಿಗಡಿಯಲ್ಲಿ ಈಗಾಗಲೇ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತಿದೆ. ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಹೆಚ್ಚಿನ ನಗದು ಹಾಗೂ ಸಾಮಾಗ್ರಿ ಸಾಗಾಟ ಮಾಡುವವರು ಅವಶ್ಯಕ ದಾಖಲೆ ಹೊಂದಬೇಕಿದೆ. ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಕಾರ್ಯಗಳ ಮೇಲೆ ನಿಗಾ ವಹಿಸಲು 6 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.