ಬನವಾಸಿ: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ (Uttara Kannada News) ನಡೆಯಿತು.
ಮಹಾರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಇದನ್ನೂ ಓದಿ: Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!
ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಭಕ್ತಿ ಸಮರ್ಪಿಸಿದರು. ರಾತ್ರಿ 12 ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು.
ಬಳಿಕ ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ-ಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು.
ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ
ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಮಹಾ ರಥೋತ್ಸವವು ಶುಕ್ರವಾರ ಬೆಳಿಗ್ಗೆ 5 ಗಂಟೆ ವೇಳೆಗೆ ಸಂಪನ್ನಗೊಂಡಿತು.