Site icon Vistara News

Uttara Kannada News: ಜನತಾ ದರ್ಶನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ: ಸಚಿವ ಮಂಕಾಳ ವೈದ್ಯ

Uttara Kannada District Incharge Minister Mankalu S Vaidya speech in Janata Darshan programme in Karwar

ಕಾರವಾರ: ಜನತಾ ದರ್ಶನ ಕಾರ್ಯಕ್ರಮದ (Janata Darshan) ಮೂಲಕ ಒಂದೇ ಸೂರಿನಡಿ ಜಿಲ್ಲೆಯ ಬಡವರು, ಅಸಹಾಯಕರು ಸೇರಿದಂತೆ ಎಲ್ಲಾ ವರ್ಗಗಳ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸರ್ಕಾರದ ಸೌಲಭ್ಯಗಳನ್ನು (Government Facilities) ತಲುಪಿಸುವ ಮೂಲಕ ನ್ಯಾಯ (Justice) ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ತಿಳಿಸಿದರು.

ನಗರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಜನತಾ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆದಷ್ಟು ಶೀಘ್ರದಲ್ಲಿ ಅವರ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯ ಮಂಜೂರು ಮಾಡಬೇಕು. ಸರ್ಕಾರಿ ಕಚೇರಿಗಳಿಗೆ ವಿನಾ ಕಾರಣ ಅಲೆದಾಡಿಸುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ

ಸಾರ್ವಜನಿಕರು ನೀಡುವ ಅರ್ಜಿಗಳನ್ನು ಅಧಿಕಾರಿಗಳು ಮಾನವೀಯತೆ ನೆಲೆಯಲ್ಲಿ ಪರಿಶೀಲಿಸಿ ಸರ್ಕಾರಿ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಸಹ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಶಾಸಕ ಸತೀಶ್ ಸೈಲ್ ಮಾತನಾಡಿ, ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಲು ನಿರಂತರ ಸೇವೆ ಸಲ್ಲಿಸಲಾಗುವುದು ಹಾಗೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಪಡಿತರ ಚೀಟಿ ವರ್ಗಾವಣೆ ಸಮಸ್ಯೆ, ವಸತಿ ಮಂಜೂರು ಸಮಸ್ಯೆ, ಪಂಚಾಯತ್ ಮಟ್ಟದ ಸಮಸ್ಯೆಗಳು, ಮಾಜಿ ಸೈನಿಕರಿಗೆ ಭೂ ಮಂಜೂರಾತಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು. ಈ ಎಲ್ಲಾ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸಿ ವರದಿ ನೀಡುವಂತೆ ಮತ್ತು ಎಲ್ಲಾ ಅರ್ಜಿಗಳಿಗೆ ಹಿಂಬರಹ ನೀಡಿ, ಪೂರಕ ದಾಖಲೆಗಳ ಅಗತ್ಯವಿದ್ದಲ್ಲಿ ಅರ್ಜಿದಾರರಿಂದ ಸಂಗ್ರಹಿಸಿ ಅಗತ್ಯ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಸಚಿವರು ನಿರ್ದೇಶನ ನೀಡಿದರು.

ಇದನ್ನೂ ಓದಿ: Ganesh Chaturthi: 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್‌ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ

ಜನತಾ ದರ್ಶನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು 6 ಪ್ರತ್ಯೇಕ ವಿಭಾಗಗಳನ್ನು ತೆರೆಯಲಾಗಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದ 41, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ 17 ಅರ್ಜಿಗಳು ಸೇರಿದಂತೆ ಸುಮಾರು 115ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ವಿಷ್ಣ್ಣುವರ್ಧನ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಪ್ರಶಾಂತ ಕುಮಾರ ಕೆ.ಸಿ., ರವಿಶಂಕರ್, ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಿಲೇಶ ಶಿಂಧೆ ದೇವೋಬ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಸ್ವಾಗತಿಸಿದರು.

Exit mobile version