Site icon Vistara News

Uttara Kannada News: ಕಾಳಮ್ಮನಗರ ಪ್ರೌಢಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ್

MLA Shivaram Hebbar inaugurated English medium section in Kalammanagar High School

ಯಲ್ಲಾಪುರ: ಇಂಗ್ಲೀಷ್ (English) ಹಾಗೂ ಕಂಪ್ಯೂಟರ್ ಜ್ಞಾನವನ್ನು (Computer knowledge) ಪಡೆದ ವಿದ್ಯಾರ್ಥಿಗಳು (Students) ಇಂದು ಜಗತ್ತನ್ನೇ (World) ಗೆಲ್ಲಬಹುದಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.

ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪಿಎಂ ಪೋಷಣ ಅಭಿಯಾನದಡಿ 9 ಮತ್ತು 10 ನೆ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ಹಾಗೂ ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರದ ವತಿಯಿಂದ ಮೊಟ್ಟೆ ನೀಡಲಾಗುತ್ತಿದೆ. ಉತ್ತಮ ಆಹಾರ, ಉತ್ತಮ ಶಿಕ್ಷಣ ಎರಡೂ ದೊರೆಯುತ್ತಿದೆ, ಹೀಗಾಗಿ ಮಕ್ಕಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡುವಂತೆ ತಿಳಿಸಿದರು.

ಖಾಸಗಿ ಶಾಲೆಗಳನ್ನು ಮೀರಿಸುವಂತಹ ಶಿಕ್ಷಣವನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪಡೆಯಬೇಕು. ಜಗತ್ತಿನ ಯಾವುದೇ ಮೂಲೆಯನ್ನು ಸಂಪರ್ಕಿಸಲು ಸಹಕಾರವಾಗುವ ಕಂಪ್ಯೂಟರ್ ಶಿಕ್ಷಣ ಹಾಗೂ ಅದರೊಂದಿಗೆ ಸಂವಹನ ನಡೆಸಲು ಅಗತ್ಯವಾಗಿರುವ ಇಂಗ್ಲಿಷ್ ಕಲಿಕೆಯಲ್ಲಿ ಹಿಂದೇಟು ಹಾಕಬೇಡಿ ಎಂದು ಹೇಳಿದರು.

ಇದನ್ನೂ ಓದಿ: Agriculture APP : ರೈತರಿಗಾಗಿ AI ಆಧಾರಿತ ಆ್ಯಪ್ ಶೀಘ್ರ; ಕೃಷಿ ಇಲಾಖೆಯಿಂದ ಮಹತ್ವದ ಹೆಜ್ಜೆ

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಈ ವಿಷಯದ ಕುರಿತು ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡಿ, ಅವರ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ತಿಳಿಸಬೇಕು. ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯಗಳು ಸಮರ್ಪಕವಾಗಿ ದೊರೆತಾಗ ಉತ್ತಮ ಫಲಿತಾಂಶವನ್ನು ನಾವೆಲ್ಲ ಅಪೇಕ್ಷಿಸಬಹುದು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಒಟ್ಟಾಗಿ ಪ್ರಯತ್ನಿಸೋಣ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಕೆ. ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪ.ಪಂ. ಸದಸ್ಯರಾದ ಸುನಂದಾ ದಾಸ್, ನರ್ಮದಾ ನಾಯ್ಕ, ಅಬ್ದುಲ್ ಅಲಿ, ಡಿಡಿಪಿಐ ಪಾರಿ ಬಸವರಾಜು, ಉರ್ದು ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಇರ್ಷಾದ್ ಕಾಗಲಕರ್, ಇಲಾಖೆಯ ಅಧಿಕಾರಿಗಳು, ಎಸ್.ಡಿ.ಎಂ.ಸಿ. ಸದಸ್ಯರು ಇದ್ದರು.

ಇದನ್ನೂ ಓದಿ: Dental Health: ಸದಾ ಜಗಿಯುತ್ತಿರುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ ಅನ್ನೋದು ನಿಜವೆ?

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಸ್ವಾಗತಿಸಿದರು. ದೈಹಿಕ ಶಿಕ್ಷಕ ನಾರಾಯಣ ನಾಯಕ ನಿರೂಪಿಸಿದರು. ಮುಖ್ಯಾಧ್ಯಾಪಕ ದೇವಿದಾಸ ಪಟಗಾರ ವಂದಿಸಿದರು.

Exit mobile version