Site icon Vistara News

Uttara Kannada News: ನರೇಂದ್ರ ಮೋದಿ ದೇಶದ, ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ

Nari Shakti Vandana marathon programme

ಕಾರವಾರ: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದ್ದು, ನರೇಂದ್ರ ಮೋದಿ ಅವರೇ ಈ ದೇಶದ, ವಿಶ್ವದ ಆಶಾಕಿರಣ ಎಂದು ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ (Uttara Kannada News) ಬಣ್ಣಿಸಿದರು.

ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿದ್ದ ನಾರಿಶಕ್ತಿ ವಂದನ ಮ್ಯಾರಥಾನ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮಿಸಲಾತಿಯನ್ನು ನೀಡಿದ ಬಗ್ಗೆ ಒಬ್ಬ ಮಹಿಳೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹೆಣ್ಣುಮಕ್ಕಳಿಗೆ ಶಕ್ತಿ ನೀಡಲು ಮೊದಲ ಬಾರಿಗೆ ಈ ಮಸೂದೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಇದನ್ನೂ ಓದಿ: Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

ನಮ್ಮೆಲ್ಲರಿಗೂ ಮೋದಿಯೇ ಗ್ಯಾರಂಟಿ. ಬೇರೆ ಯಾವುದೇ ಗ್ಯಾರಂಟಿ ವಾರಂಟಿ ಬೇಡ. ರಾಜ್ಯ ಸರ್ಕಾರವು ಗ್ಯಾರಂಟಿಯ ಹೆಸರಿನಲ್ಲಿ ಬಡ ಜನರಿಗೆ ತೊಂದರೆ ಕೊಡುತ್ತಿದೆ. ಕೆಲವರಿಗೆ ಮಾತ್ರ ವಿದ್ಯುತ್ ಶುಲ್ಕ ವಿನಾಯಿತಿ ಮಾಡಿದಂತೆ ತೋರಿಸಿ, ಹಿಂಬಾಗಿಲಿನಿಂದ ಇತರರಿಗೆ ವಿದ್ಯುತ್ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಸಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೂರು ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದು ಮ್ಯಾರಥಾನ್ ಪೂರ್ಣಗೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ನಾಳೆ ಬೈಕ್‌ ರ್ಯಾಲಿ, ಮತ್ತು ಮೂರನೆಯ ದಿನ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಾತನಾಡುವ ಮೂಲಕ ಸಮಾರೋಪಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Anant Ambani: ಅನಂತ್‌ ಅಂಬಾನಿ ವಾಚ್‌ ನೋಡಿ ದಂಗಾದ ಜುಕರ್‌ಬರ್ಗ್;‌ ಬೆಲೆ ಎಷ್ಟು ಕೋಟಿ?

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಮಾತನಾಡಿ, ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ಮಹಿಳೆಯರು ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ವಿನಂತಿಸಿದರು.

ಈ ವೇಳೆ ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ‌ ಅಧ್ಯಕ್ಷ ಸುಭಾಷ ಗುನಗಿ, ಅಂಕೋಲಾ ಮಂಡಲದ ಗೋಪಾಲಕೃಷ್ಣ ವೈದ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚಾ ಪ್ರಮುಖರು, ಯುವ ಮೋರ್ಚಾ ಸೇರಿದಂತೆ ಮತ್ತಿತರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

ಕಾರವಾರ ನಗರದ ಮಾಲಾದೇವಿ ಮೈದಾನದಿಂದ ಶ್ರೀ ಸಿದ್ದಿ ವಿನಾಯಕ ದೇವಾಲಯದವರೆಗಿನ ಬೃಹತ್ ಮ್ಯಾರಾಥಾನ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ವಿವಿಧೆಡೆಯಿಂದ ಮಹಿಳೆಯರು ಆಗಮಿಸಿದ್ದರು. ಈ ವೇಳೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ವಿವಿಧ ವಿಭಾಗದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version