Site icon Vistara News

Uttara Kannada News: ಯಲ್ಲಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ

Uttara Kannada News National Voters Day celebration in Yallapur

ಯಲ್ಲಾಪುರ: ರಾಜ್ಯದ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬ ಮತದಾರನೂ (Voter) ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಿ, ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಜಿ.ಬಿ. ಹಳ್ಳಾಕಾಯಿ ತಿಳಿಸಿದರು. ‌

ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: National Tourism Day: ಭಾರತದ ಈ ಅತ್ಯಾಕರ್ಷಕ ಸುಸ್ಥಿರ ಪ್ರವಾಸೋದ್ಯಮ ತಾಣಗಳನ್ನು ನೋಡಿದ್ದೀರಾ?

ನಾವು ನೀಡುವ ಪ್ರತಿಯೊಂದು ಮತಕ್ಕೂ ಅದರದ್ದೇ ಆದ ಮಹತ್ವವಿದೆ. ಕೆಲವೊಮ್ಮ ಅಭ್ಯರ್ಥಿಗಳು ಕೇವಲ ಒಂದು ಮತದ ಅಂತರದಿಂದ ಸೋಲು-ಗೆಲುವನ್ನು ಕಂಡಿರುತ್ತಾರೆ. ಹೀಗಾಗಿ ಪ್ರತಿಯೊಬ್ಬರಿಗೂ ತಮ್ಮ ಮತಕ್ಕಿರುವ ಮೌಲ್ಯವನ್ನು ತಿಳಿಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಹೀಗಾಗಿ ಪ್ರತಿ ಬೂತ್‌ ಮಟ್ಟದಲ್ಲಿ ಅಧಿಕಾರಿಗಳು ಮತದಾರರನ್ನು ಹುರಿದುಂಬಿಸಿ, ಚುನಾವಣೆಗಳಲ್ಲಿ ಮತದಾನ ಮಾಡುವಂತೆ ಹುರಿದುಂಬಿಸಬೇಕು. ಮತದಾರರೂ ಸಹ ತಮ್ಮ ಕರ್ತವ್ಯ ನಿರ್ವಹಿಸಿ, ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದರು.

ಸಿವಿಲ್‌ ನ್ಯಾಯಾಧೀಶೆ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ: Karnataka Weather: ಉತ್ತರ ಕರ್ನಾಟಕದಲ್ಲಿ ಭಾರಿ ಚಳಿ; ಉಳಿದೆಡೆ ಹೇಗಿದೆ ವಾತಾವರಣ?

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಗುರುರಾಜ್‌ ಎಂ., ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್‌, ವಿವಿಧ ಇಲಾಖೆಯ ಅಧಿಕಾರಿಗಳು, ವಕೀಲರ ಸಂಘದ ಸದಸ್ಯರು, ತಹಸೀಲ್ದಾರ್‌ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version