Site icon Vistara News

Uttara Kannada News: ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ಪದಾಧಿಕಾರಿಗಳ ಪದಗ್ರಹಣ

new office bearers of Banavasi Unit of WHR RK Foundation

ಬನವಾಸಿ: ಪಟ್ಟಣದ ಶ್ರೀ ಜಯಂತಿ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಸೋಮವಾರ ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ (Uttara Kannada News) ಜರುಗಿತು.

ಕಾರ್ಯಕ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ಆರ್.ಕೆ ಫೌಂಡೇಶನ್ ಮಹಿಳಾ ಜಿಲ್ಲಾಧ್ಯಕ್ಷೆ ಅರ್ಚನಾ ಜಯಪ್ರಕಾಶ್ ನಾಯ್ಕ್ ಮಾತನಾಡಿ, ಭೂಮಿಯ ಮೇಲಿರುವ ಪ್ರತಿಯೊಬ್ಬ ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು. ಇವುಗಳಿಲ್ಲದೆ ಮನುಷ್ಯನ ಜೀವನ ಎಂದಿಗೂ ಕಷ್ಟವೇ.ಈ ಮೂಲಭೂತ ಸವಲತ್ತುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಮನುಷ್ಯನ ಈ ಮೂಲಭೂತ ಹಕ್ಕುಗಳನ್ನು ಧಮನಿಸುವ ಪ್ರಯತ್ನಗಳೇ ನಡೆಯುತ್ತಿವೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ರಕ್ಷಣೆ ಮಾಡಲು ವಿಶ್ವ ಮಾನವ ಹಕ್ಕುಗಳ ದಿನವನ್ನು ಘೋಷಿಸಲಾಯಿತು. ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Sirsi News: ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಸಂಭ್ರಮದ ಚಾಲನೆ

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಾಮದೇವ ಶಿಂಪಿ ಸಮಾಜದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಚೌದರಿ ಮಾತನಾಡಿ, ಪಟ್ಟಣದಲ್ಲಿ ವಿಶ್ವ ಮಾನವ ಹಕ್ಕುಗಳ ಆರ್.ಕೆ. ಫೌಂಡೇಶನ್ ಕಾರ್ಯರೂಪಕ್ಕೆ ಬಂದಿರುವುದು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಧುಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಜಶೇಖರ ಒಡೆಯರ್, ಸಮಾಜ ಸೇವಕಿ ಮಂಗಲಾ ದಾವಣಗೆರೆ, ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್ ಬನವಾಸಿ ಅಧ್ಯಕ್ಷೆ ಸೀಮಾವತಿ ಕೆರೊಡಿ, ಶಿರಸಿ-ಸಿದ್ದಾಪುರದ ಉಪಾಧ್ಯಕ್ಷೆ ತೆರೇಸಾ ಡಿಸೋಜ ಮಾತನಾಡಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಒಟ್ಟೊಟ್ಟಿಗೆ ಏರಿಕೆ

ಈ ಸಂದರ್ಭದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್ ಬನವಾಸಿ ಘಟಕದ ಅಧ್ಯಕ್ಷ ಸುಧೀರ್ ನಾಯರ್, ಪ್ರಧಾನ ಕಾರ್ಯದರ್ಶಿ ಶೋಭ ಉಳ್ಳಾಗಡ್ಡಿ, ಶಿರಸಿ-ಸಿದ್ದಾಪುರ ಘಟಕದ ಅಧ್ಯಕ್ಷ ಮಂಜುನಾಥ ಡಿ.ನಾಯ್ಕ್, ಅಶೋಕ ಶೆರುಗಾರ ಹಾಗೂ ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್‌ನ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸವಿತಾ ನಾಯ್ಕ್ ನಿರೂಪಿಸಿದರು.

Exit mobile version