Site icon Vistara News

Uttara Kannada News: ಅಂಚೆ ಮತಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ: ಡಿಸಿ ಮಾನಕರ್‌

Postal ballot distribution should be systematic says Uttara kannada DC Gangubai Manakar

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ (Lok Sabha Election) ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆ ಮತಪತ್ರಗಳ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ನಿರ್ದೇಶನ (Uttara Kannada News) ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಚೆ ಮತಪತ್ರ ವಿತರಣೆ ಕಾರ್ಯದ ಕುರಿತಂತೆ ಜಿಲ್ಲೆಯಲ್ಲಿನ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮತಪತ್ರ ವಿತರಣೆ ಕುರಿತು, ಮನೆ ಮನೆಗಳಿಗೆ ಭೇಟಿ ನೀಡುವ ಕುರಿತಂತೆ ಸಾಕಷ್ಟು ಮುಂಚಿತವಾಗಿ ಪ್ರಚಾರ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪ್ರತಿಯೊಬ್ಬರ ಅರ್ಹರ ಮನೆಗಳಿಗೂ ಭೇಟಿ ನೀಡಿ ಫಾರಂ ವಿತರಿಸಿ, ಒಪ್ಪಿಗೆ ಪತ್ರ ಪಡೆಯುವಂತೆ ತಿಳಿಸಿದರು.

ಇದನ್ನೂ ಓದಿ: Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್

ಚುನಾವಣಾ ಆಯೋಗದ ಸೂಚನೆಯಂತೆ ನಿಗದಿತ ದಿನಾಂಕದೊಳಗೆ ಅಂಚೆ ಮತಪತ್ರ ವಿತರಣೆ ಮತ್ತು ಒಪ್ಪಿಗೆ ಪತ್ರಗಳನ್ನು ಸಂಗ್ರಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಅರ್ಹ ಮತದಾರರು ಈ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರವಹಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Unilever Comapny: ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆ ಸರಿದ ಯೂನಿಲಿವರ್ ಕಂಪೆನಿ; 7,500 ಉದ್ಯೋಗ ಕಡಿತದ ಸೂಚನೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಅಂಚೆ ಮತಪತ್ರ ವಿತರಣೆಗೆ ನಿಯೋಜಿಸಲಾಗಿರುವ ವಿವಿಧ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version