Site icon Vistara News

Child Care Center: ನರೇಗಾ ಕೂಲಿಕಾರರ ಮಕ್ಕಳಿಗಾಗಿ ಸುಸಜ್ಜಿತ ಶಿಶುಪಾಲನಾ ಕೇಂದ್ರ

Preparation for establishment of 51 childcare centers across the district: ZP CEO Ishwara Kandu

ಕಾರವಾರ: ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ-ಪಾಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕೂಸಿನ ಮನೆ’ (ಶಿಶು ಪಾಲನಾ ಕೇಂದ್ರ) (child care Center) ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ 12 ತಾಲೂಕುಗಳ ಪೈಕಿ ಒಟ್ಟು 51 ಕಡೆಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಕೂಸಿನ ಮನೆ ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೂಲಿ ಕಾರ್ಮಿಕರ ಶಿಶುಗಳ ಪೋಷಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ 229 ಗ್ರಾಮ ಪಂಚಾಯಿತಿಗಳ ಪೈಕಿ ಜಾಗದ ಹಾಗೂ ಸರ್ಕಾರಿ ಕಟ್ಟಡಗಳ ಲಭ್ಯತೆಗೆ ಅನುಗುಣವಾಗಿ ಆಯ್ದ 51 ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಕೂಸಿನ ಮನೆ ಕಾರ್ಯಾರಂಭಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಗ್ರಾಮೀಣ ಪ್ರದೇಶದ ಮಹಿಳೆಯರು ಕೂಸಿನ ಮನೆಯಲ್ಲಿ ತಮ್ಮ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ನಿಶ್ಚಿಂತೆಯಿಂದ ಕೆಲಸಕ್ಕೆ ತೆರಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿ ಘಟಕಕ್ಕೆ 1 ಲಕ್ಷ ಅನುದಾನ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ ಸರ್ಕಾರಿ ಶಾಲೆ, ಸಮುದಾಯ ಭವನ ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳನ್ನು ಕೂಸಿನ ಮನೆ ಆರಂಭಿಸುವ ಆಯ್ಕೆಗೆ ಪರಿಗಣಿಸಿದೆ. ಈ ಕಟ್ಟಡಗಳ ಅಲ್ಪಸ್ವಲ್ಪ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರ ಆರಂಭದಲ್ಲಿ ಪ್ರತಿ ಘಟಕಕ್ಕೆ 1 ಲಕ್ಷ ಅನುದಾನ ಬಿಡುಗಡೆ ಮಾಡುತ್ತದೆ. ಶಿಶುಗಳಿಗೆ ಪೂರಕ ಪೌಷ್ಠಿಕ ಆಹಾರ, ತೊಟ್ಟಿಲು, ಆಟಿಕೆ ಸಾಮಗ್ರಿ, ಕುಡಿಯುವ ನೀರು, ಗಾಳಿ-ಬೆಳಕು ಮತ್ತಿತರ ಸೌಲಭ್ಯಗಳನ್ನು ಈ ಕೇಂದ್ರದಲ್ಲಿ ಕಲ್ಪಿಸಲಾಗುತ್ತದೆ.

ಇದನ್ನೂ ಓದಿ: Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ

ಕೂಸಿನ ಮನೆಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು, ಪೌಷ್ಠಿಕ ಆಹಾರ ದೊರೆಯದೇ ಮಕ್ಕಳು ಅಪೌಷ್ಠಿಕತೆಗೆ ಒಳಗಾಗುತ್ತಾರೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುವ ಸಂಭವವಿರುತ್ತದೆ. ಈ ಎಲ್ಲ ಸಮಸ್ಯೆಗಳ ನಿವಾರಣೆಗಾಗಿ ಸರ್ಕಾರ ಕೂಸಿನ ಮನೆ ಯೋಜನೆ ರೂಪಿಸಿದೆ.

ನರೇಗಾ ಕೂಲಿಕಾರರೇ ಕೂಸಿನ ಮನೆ ಸಿಬ್ಬಂದಿ

ವಿಶೇಷವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿರುವ 22 ರಿಂದ 45 ವರ್ಷ ವಯಸ್ಸಿನೊಳಗಿನ ಕನಿಷ್ಠ 10ನೇ ತರಗತಿ ವರೆಗೆ ವ್ಯಾಸಂಗ ಮಾಡಿರುವ 10 ಜನ ಮಹಿಳಾ ಕೂಲಿ ಕಾರ್ಮಿಕರನ್ನೇ ಈ ಕೂಸಿನ ಮನೆಗೆ ಕೇರ್ ಟೆಕರ್ಸ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇವರಿಗೆ ಸರ್ಕಾರದಿಂದ ಪ್ರತ್ಯೇಕವಾಗಿ ಗೌರವಧನ ನೀಡದೇ ಮನರೇಗಾ ಯೋಜನೆಯಡಿ ಎನ್.ಎಂ.ಆರ್ ಸೃಜನೆ ಮಾಡಿ ದಿನಕ್ಕೆ ರೂ.316 ರಂತೆ ನೂರು ದಿನಗಳವರೆಗೆ ಕೆಲಸ ನೀಡಲಾಗುತ್ತದೆ. ಒಂದು ವೇಳೆ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರು 100 ದಿನ ಕೆಲಸ ನಿರ್ವಹಿಸಿದರೆ ನಂತರ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Year in Search: ಈ ವರ್ಷ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಆದ ಸಿನಿಮಾ, ವೆಬ್‌ ಸೀರೀಸ್ ಯಾವುವು?

ನಿರ್ವಹಣೆಗೆ ತರಬೇತಿ

ಕೂಸಿನ ಮನೆ ಪ್ರಾರಂಭಿಸುವ ಹಿನ್ನಲೆಯಲ್ಲಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಜನರಿಗೆ ರಾಜ್ಯ ಮಟ್ಟದಲ್ಲಿ ತರಬೇತಿ ನೀಡಲಾಗಿದೆ. ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದುಕೊಂಡ ಪರಿಣಿತ ಮಾಸ್ಟರ್ ಟ್ರೇನರ್‌ಗಳು ಜಿಲ್ಲೆಯ 8 ಸ್ಥಳಗಳಲ್ಲಿ ಈಗಾಗಲೇ ಎಲ್ಲ ಗ್ರಾಮ ಪಂಚಾಯಿತಿ ಕೇರ್ ಟೇಕರ್ಸ್‌ಗಳಿಗೆ ತರಬೇತಿ ನೀಡಿದ್ದಾರೆ.

ಇದನ್ನೂ ಓದಿ: ಅಂಡರ್​-19 ವಿಶ್ವಕಪ್​ನ ಹೊಸ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಬಾಂಗ್ಲಾ ಮೊದಲ ಎದುರಾಳಿ

ಕೆಲಸದ ಸಮಯದಲ್ಲಿ ಹಳ್ಳಿ ಮಹಿಳೆಯರು ತಮ್ಮ ಚಿಕ್ಕ ಮಕ್ಕಳ ಕುರಿತು ಚಿಂತಿಸದೇ ನಿರ್ಭಿತಿಯಿಂದ ಕೆಲಸ ನಿರ್ವಹಿಸಬಹುದು. ಪ್ರತಿಯೊಬ್ಬ ಕೂಲಿಕಾರರೂ ತಮ್ಮ ಹತ್ತಿರದ ಕೂಸಿನ ಮನೆಯಲ್ಲಿ ಮಕ್ಕಳನ್ನು ಬಿಡುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಪಂ ಸಿಇಒ ಈಶ್ವರ ಕಾಂದೂ ಮನವಿ ಮಾಡಿದ್ದಾರೆ.

Exit mobile version