Site icon Vistara News

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Protest by BJP in Yallapur against petrol and diesel price hike

ಯಲ್ಲಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ, ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ (Uttara Kannada News) ನಡೆಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಉಮೇಶ ಭಾಗ್ವತ್ ಮಾತನಾಡಿ, ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು, ಅಭಿವೃದ್ಧಿ ಕಾರ್ಯ ಮಾಡಲು ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲದೆ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆಯಾಗಿಸಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಕಾಂಗ್ರೆಸ್ ಸರ್ಕಾರದ ಶಾಸಕರೇ ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತೈಲ ಬೆಲೆ ಏರಿಕೆ ನೇರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಗ್ಯಾರಂಟಿ ಯೋಜನೆಗಳಿಗಾಗಿ ಜನರ ಬದುಕನ್ನು ದುಸ್ತರವಾಗಿಸುವ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ, ಹಿರಿಯ ನಾಯಕ ರಾಮು ನಾಯ್ಕ್, ಗೋಪಾಲಕೃಷ್ಣ ಗಾವಂಕರ್, ಶಿವಲಿಂಗಯ್ಯ ಅಲ್ಲಯ್ಯನವರಮಠ, ಪ.ಪಂ ಸದಸ್ಯರಾದ ಕಲ್ಪನಾ ನಾಯ್ಕ, ಸೋಮೇಶ್ವರ ನಾಯ್ಕ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version