Site icon Vistara News

Uttara Kannada News: ಉ.ಕ ಜಿಲ್ಲೆಯಲ್ಲಿ ಕ್ಷೀಣವಾದ ಮಳೆ, ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ತರು

Uttara Kannada News

ಕಾರವಾರ: ಜಿಲ್ಲೆಯಲ್ಲಿ ಬುಧವಾರ ಮಳೆ ಕ್ಷೀಣಗೊಂಡಿದ್ದು, ಹೊನ್ನಾವರ ತಾಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ತರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಮಾನವ ಜೀವಹಾನಿ, 8 ಮನೆಗಳು ಸಂಪೂರ್ಣ ಹಾನಿ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ ಹಾನಿ ಹಾಗೂ 2 ಜಾನುವಾರು ಸಾವು ಸಂಭವಿಸಿದೆ. 830 ಮನೆಗಳು ನೀರಿನಿಂದ ಜಲಾವೃತವಾಗಿದ್ದು, 809 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ವೈದ್ಯಕೀಯ ನೆರವು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಇದನ್ನೂ ಓದಿ: Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

Exit mobile version