Uttara Kannada News: ಬನವಾಸಿ ಕದಂಬೋತ್ಸವದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ: ಡಿಸಿ ಗಂಗೂಬಾಯಿ ಮಾನಕರ್ - Vistara News

ಉತ್ತರ ಕನ್ನಡ

Uttara Kannada News: ಬನವಾಸಿ ಕದಂಬೋತ್ಸವದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ: ಡಿಸಿ ಗಂಗೂಬಾಯಿ ಮಾನಕರ್

Uttara Kannada News: ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಅಯೋಜಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

VISTARANEWS.COM


on

Drinking water problem Provide water immediately by tanker says DC
ಉತ್ತರ ಕನ್ನಡ ಡಿಸಿ ಗಂಗೂಬಾಯಿ ಮಾನಕರ್‌.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಾರ್ಚ್ 6 ರಂದು ನಡೆಯುವ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ಮುಕ್ತ ಅವಕಾಶವಿದ್ದು, ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್‌ ಅಂಬಾನಿ- ರಾಧಿಕಾ ಮದುವೆ ವಿಶೇಷ!

ರಾಜ್ಯಮಟ್ಟದ ಪುರುಷ ಕುಸ್ತಿ ಸ್ಪರ್ಧೆಯು 65+ ಕೆಜಿಯಿಂದ 80 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗಧೆ ನೀಡಲಾಗುವುದು. ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಸ್ಪರ್ಧೆಯು 60+ ಕೆಜಿಯಿಂದ 76 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಮಹಿಳಾ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗಧೆ ನೀಡಲಾಗುವುದು.

ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯು 30 ಕೆಜಿ, 40 ಕೆ.ಜಿ. 50 ಕೆಜಿ, 60 ಕೆಜಿ ಮತ್ತು 65 ಕೆ.ಜಿ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆಯಲಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Elephant Attack: ʼಕರ್ನಾಟಕದ ಪರಿಹಾರ ಬೇಕಿಲ್ಲ…ʼ ಕಾಡಾನೆ ಬಲಿ ಪಡೆದ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ರೂ. ಕೊಟ್ಟ ಕೇರಳ ಸರ್ಕಾರ

ಮಾರ್ಚ್ 6 ರಂದು ಬೆಳಗ್ಗೆ 8 ಗಂಟೆಯಿಂದ ಕುಸ್ತಿ ಸ್ಪರ್ಧೆಗಳು ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Karnataka Rain: ರಾಜ್ಯಾದ್ಯಂತ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ. ರಾತ್ರಿ ಸುರಿದ ಒಂದು ಮಳೆಗೆ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಮಳೆಗೆ ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಬಸ್‌ವೊಂದು ಸಿಲುಕಿಕೊಂಡು ಪ್ರಯಾಣಿಕರು ಕಂಗಲಾದರು.

VISTARANEWS.COM


on

By

Karnataka Rain
Koo

ಬೆಂಗಳೂರು/ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ (karnataka Rain) ಮಳೆಯಾಗುತ್ತಿದ್ದು, ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯ ಕತಗಾಲ ಬಳಿ ಚಂಡಿಕಾ ಹೊಳೆ ಉಕ್ಕಿ ರಸ್ತೆಗೆ ಹರಿದಿದೆ. ಪರಿಣಾಮ ಬಸ್‌ವೊಂದು ನೀರಿನಲ್ಲಿ ಸಿಲುಕಿತ್ತು. ಗ್ರಾಮ ಪಂಚಾಯತಿ ಅಧಿಕಾರಿಗಳು, ಸ್ಥಳೀಯರಿಂದ ಬೋಟ್ ಮೂಲಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಶಿರಸಿ-ಕುಮಟಾ ಹೆದ್ದಾರಿ ಸಂಚಾರ ಬಂದ್ ಆಗಿದ್ದು, ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರತಿವರ್ಷ ಮಳೆಗಾಲದಲ್ಲಿ (karnataka weather forecast) ಚಂಡಿಕಾ ಹೊಳೆ ತುಂಬಿ ಹರಿಯಲಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಶಿವಮೊಗ್ಗದಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬಗಳು

ಶಿವಮೊಗ್ಗದಲ್ಲೂ ಧಾರಾಕಾರ ಮಳೆಯಿಂದಾಗಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಸಾಗರ ತಾಲೂಕಿನ ಹೊಳೆಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿದೆ. ಹೊಳೆಬಾಗಿಲು, ಕಳಸವಳ್ಳಿ, ತುಮರಿ ರಸ್ತೆ ವಿದ್ಯುತ್‌ ಕಂಬಗಳು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ

ಕೊಡಗಿನಲ್ಲಿ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು, ನದಿ ತುಂಬಿ ಹರಿಯುತ್ತಿದೆ. ಕಾವೇರಿಯ ತವರು ಬ್ರಹ್ಮಗಿರಿ ತಪ್ಪಲಿನಲ್ಲೂ ರಾತ್ರಿಯಿಂದ ಭಾರಿ ಮಳೆಯಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಸೋರುತಿಹುದು ಅರಸೀಕೆರೆ ರೈಲ್ವೆ ಫ್ಲಾಟ್ ಫಾರಂ

ಮಳೆ ಬಂದರೆ ಹಾಸನ ಜಿಲ್ಲೆಯ ಅರಸೀಕೆರೆ ಜಂಕ್ಷನ್‌ನ ರೈಲ್ವೆ ಫ್ಲಾಟ್ ಫಾರಂ ಬಚ್ಚಲು ಮನೆಯಂತೆ ಬಾಸವಾಗುತ್ತದೆ. ರೈಲ್ವೆ ಫ್ಲಾಟ್ ಫಾರಂನ ಛಾವಣಿ ಸೋರುತ್ತಿದ್ದು, ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಯಾಣಿಕರ ಲ್ಯಾಗೇಜ್‌ಗಳ ಮೇಲೆ ನೀರು ಸೋರುತ್ತಿದ್ದು, ಕೂಡಲೇ ಛಾವಣಿ ದುರಸ್ತಿ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

Rain News: ಈ ಮೂರು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ.

VISTARANEWS.COM


on

rain news no entry falls
Koo

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Continue Reading

ಮಳೆ

Karnataka Weather: ಇಂದು ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾನೆ ವರುಣ!

Karnataka Weather: ಜುಲೈ 6ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಜುಲೈ 4ರಂದು (ಗುರುವಾರ) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ (Rain Fall) ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 6ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

ವಿರಾಜಪೇಟೆ ತಾಲೂಕಿನಲ್ಲಿ ಕುಸಿದ ಕಾಂಕ್ರೀಟ್ ರಸ್ತೆ

ಕೊಡಗು: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರದಿಂದ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಪುತ್ತಮಕ್ಕಿ ಸ್ಕೂಲ್ ಸಮೀಪ ಕಾಂಕ್ರೀಟ್‌ ರಸ್ತೆ ಕುಸಿದ ಘಟನೆ ಬುಧವಾರ ನಡೆದಿದೆ. ಕಳೆದ ನಾಲ್ಕು ವರ್ಷದ ಹಿಂದೆ ಕಾಮಗಾರಿ ನಡೆದಿತ್ತು. ವಿರಾಜಪೇಟೆ ತೆರ್ಮೆಮೊಟ್ಟೆ ಮೂಲಕ ತೋರಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ 5 ವರ್ಷದ ಹಿಂದೆ ತೋರದ ಬಳಿ ಭಾರಿ ಕುಸಿತವಾಗಿದ್ದ ಸ್ಥಳದಿಂದ 8 ಕಿ.ಮೀ. ದೂರದಲ್ಲಿ ಘಟನೆ‌ ನಡೆದಿದೆ.

ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ ನಾಲ್ವರ ರಕ್ಷಣೆ

ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ. ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ.

ಚಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ. ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ಆಲದ ಮರ; ಮನೆಯಲ್ಲಿದ್ದವರು ಪಾರು

ಉಡುಪಿ: ಬಿರುಗಾಳಿ ಸಹಿತ ಭಾರಿ ಮಳೆಗೆ ನಗರದ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಆಲದ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ವಸಂತಿ ಶೆಟ್ಟಿ, ಮಗಳು, ಮೊಮ್ಮಕ್ಕಳು ಮನೆಯಲ್ಲಿದ್ದರು.

Rainy Season Tourism: ಮಳೆಗಾಲದ ಪ್ರವಾಸ ಮಾಡುವ ಮುನ್ನ ಈ 10 ಎಚ್ಚರಿಕೆಗಳನ್ನು ಪಾಲಿಸಿ

ಮರ ಬಿದ್ದಿದ್ದರಿಂದ ಮನೆಯ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದು ಬಿದ್ದಿದೆ. ಮನೆಯ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರು, ಇದರಿಂದ ಅಪಾಯ ತಪ್ಪಿದೆ. ಅವಘಡದಿಂದ ಸೈಕಲ್ ಶಾಪ್, ಜನಪ್ರಿಯ ಸೌಂಡ್ಸ್, ಸಲೂನ್‌ಗೆ ಹಾನಿಯಾಗಿದೆ.

Continue Reading

ಉತ್ತರ ಕನ್ನಡ

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Lokayukta Raid: ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಕುಮಾರ್‌, ಖಾತಾ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ 60 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಭಾರೀ ಪ್ರಮಾಣದ ಲಂಚದ ಹಾವಳಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Lokayukta Raid Honnavara Pattana Panchayat Chief Executive Engineer caught by lokayukta while recieving money
ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಕುಮಾರ್‌.
Koo

ಕಾರವಾರ: ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಖಾತಾ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ 60 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ (Lokayukta Raid) ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಪ್ರವೀಣ ಕುಮಾರ್‌ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿ. ಪ್ರವೀಣ ಕುಮಾರ್‌ ಅವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60 ಸಾವಿರ ರೂ. ನಗದು ಕೊಡುತ್ತಿದ್ದ ವೇಳೆ, ಲೋಕಾಯುಕ್ತ ಎಸ್‌ಪಿ ಕುಮಾರ ಚಂದ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಈ ಸಂಬಂಧ ಅಧಿಕಾರಿಗಳು ದಾಖಲೆಗಳ‌ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading
Advertisement
Electric shock
ಬೆಂಗಳೂರು ಗ್ರಾಮಾಂತರ5 mins ago

Electric shock : ಕತ್ತಲಲ್ಲಿ ಕೆಲಸಕ್ಕೆ ಹೋದವನಿಗೆ ಕರೆಂಟ್‌ ಶಾಕ್‌

Paris Olympics
ಕ್ರೀಡೆ9 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 9 ಅಥ್ಲೀಟ್​ಗಳು

Bigg Boss Telugu 8 Contestants List Leaked
ಬಿಗ್ ಬಾಸ್10 mins ago

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Lonalva Tragedy
ದೇಶ22 mins ago

Lonavla Tragedy: ಲೋನಾವಲಾದಲ್ಲಿ ಇದುವರೆಗೆ 37 ದುರಂತ ಪ್ರಕರಣಗಳು; 47 ಮಂದಿ ದಾರುಣ ಸಾವು

Gold Rate Today
ಚಿನ್ನದ ದರ26 mins ago

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Juhi Chawla mother-in-law uninvited nearly 2000 guests her wedding
ಬಾಲಿವುಡ್35 mins ago

Juhi Chawla: ಮದುವೆಗೆ 2000 ಜನಕ್ಕೆ ನೀಡಲಾಗಿತ್ತು ಆಮಂತ್ರಣ; ಆದರೆ ಅತ್ತೆ ಹಿಂಪಡೆದರು ಎಂದ ಜೂಹಿ ಚಾವ್ಲಾ!

Karnataka Rain
ಮಳೆ45 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

dengue fever mysore death
ಪ್ರಮುಖ ಸುದ್ದಿ54 mins ago

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Hathras Stampede
ದೇಶ58 mins ago

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Virat Kohli
ಕ್ರೀಡೆ59 mins ago

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ45 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ2 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಟ್ರೆಂಡಿಂಗ್‌