ಕಾರವಾರ: ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ (Uttara Kannada News) ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಾರ್ಚ್ 6 ರಂದು ನಡೆಯುವ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ಮುಕ್ತ ಅವಕಾಶವಿದ್ದು, ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್ ಅಂಬಾನಿ- ರಾಧಿಕಾ ಮದುವೆ ವಿಶೇಷ!
ರಾಜ್ಯಮಟ್ಟದ ಪುರುಷ ಕುಸ್ತಿ ಸ್ಪರ್ಧೆಯು 65+ ಕೆಜಿಯಿಂದ 80 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗಧೆ ನೀಡಲಾಗುವುದು. ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಸ್ಪರ್ಧೆಯು 60+ ಕೆಜಿಯಿಂದ 76 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಮಹಿಳಾ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗಧೆ ನೀಡಲಾಗುವುದು.
ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯು 30 ಕೆಜಿ, 40 ಕೆ.ಜಿ. 50 ಕೆಜಿ, 60 ಕೆಜಿ ಮತ್ತು 65 ಕೆ.ಜಿ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆಯಲಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಾರ್ಚ್ 6 ರಂದು ಬೆಳಗ್ಗೆ 8 ಗಂಟೆಯಿಂದ ಕುಸ್ತಿ ಸ್ಪರ್ಧೆಗಳು ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.