Site icon Vistara News

Uttara Kannada News: ಅಕ್ಷರ ದಾಸೋಹ ಕುರಿತು ದೂರು ಬಂದಲ್ಲಿ ಕಠಿಣ ಕ್ರಮ: ಡಿಸಿ ಗಂಗೂಬಾಯಿ ಮಾನಕರ್

Uttara Kannada DC Gangubai Manakar visit government school shirawada

ಕಾರವಾರ: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅಕ್ಷರ ದಾಸೋಹದ ಆಹಾರ ಪದಾರ್ಥಗಳ ಸರಬರಾಜು ಮತ್ತು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದ ಕುರಿತಂತೆ ಯಾವುದೇ ದೂರುಗಳು (complaints) ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಎಚ್ಚರಿಕೆ (Uttara Kannada News) ನೀಡಿದರು.

ಶಿರವಾಡದ ಶಾಲೆಯೊಂದರ ಮತಗಟ್ಟೆಗೆ ಭೇಟಿ ನೀಡಿ ಮತಗಟ್ಟೆ ಪರಿಶೀಲಿಸಿ, ನಂತರ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅವರು ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ನೆಲದಲ್ಲೇ ಕುಳಿತು ಭೋಜನ ಸೇವಿಸುವ ಮೂಲಕ ಅಕ್ಷರ ದಾಸೋಹದಲ್ಲಿ ವಿತರಿಸುವ ಆಹಾರದ ಗುಣಮಟ್ಟವನ್ನು ಜಿಲ್ಲಾಧಿಕಾರಿಗಳು ಖುದ್ದು ಪರೀಕ್ಷಿಸಿದರು.

ಇದನ್ನೂ ಓದಿ: SSLC And PUC Exam : ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಡೇಟ್‌ ಫಿಕ್ಸ್‌; ಏನಿದೆ ಈ ಬಾರಿ ಷರತ್ತುಗಳು

ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ಉತ್ತಮ ಗುಣಮಟ್ಟ ಮತ್ತು ರುಚಿಯಿಂದ ಕೂಡಿರುವ ಆಹಾರವನ್ನು ನೀಡಬೇಕು. ಆಹಾರ ತಯಾರಿಕೆಗೆ ಸರಬರಾಜು ಆಗುವ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಿ ಬಳಸುವಂತೆ ಹಾಗೂ ಆಹಾರ ತಯಾರಿಕಾ ಕೊಠಡಿಯಲ್ಲಿ ಮತ್ತು ಆಹಾರ ತಯಾರಿಕೆಗೆ ಬಳಸುವ ಪಾತ್ರೆಗಳಲ್ಲಿ ಗರಿಷ್ಠ ಶುಚಿತ್ವವನ್ನು ಕಾಪಾಡಬೇಕು. ಇವುಗಳ ಕುರಿತಂತೆ ಯಾವುದೇ ದೂರುಗಳು ಕೇಳಿ ಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಾರವಾರ ಡಿಡಿಪಿಐ ಲತಾ ನಾಯ್ಕ ಉಪಸ್ಥಿತರಿದ್ದರು.

ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಮತಗಟ್ಟೆಯಲ್ಲಿ ಮತದಾರರಿಗೆ ಸುಗಮ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Dharmendra Pradhan: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎರಡು ಬಾರಿ 10, 12ನೇ ತರಗತಿ ಬೋರ್ಡ್‌ ಪರೀಕ್ಷೆ ಬರೆಯಲು ಅವಕಾಶ

ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರಿನ ಸೌಲಭ್ಯ, ನೆರಳಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ವಿಕಲಚೇತನ ಮತದಾರರಿಗೆ ವೀಲ್‌ಚೇರ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಮತದಾರರು ಮತಗಟ್ಟೆಗೆ ಆಗಮಿಸಲು ಮತ್ತು ಮತದಾನದ ನಂತರ ನಿರ್ಗಮಿಸಲು ಸೂಕ್ತ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮತಗಟ್ಟೆಯಲ್ಲಿ ಮತದಾರರಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Exit mobile version