Site icon Vistara News

Uttara Kannada News: ವಿವಿಧ ಗ್ರಾಪಂ, ವಸತಿ ನಿಲಯಗಳಿಗೆ ಜಿಪಂ ಸಿಇಒ ದಿಢೀರ್ ಭೇಟಿ

surprise visit by the ZP CEO to various villages and hostels Verification at Karwar

ಕಾರವಾರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ZP CEO) ಈಶ್ವರ ಕಾಂದೂ, ಶನಿವಾರ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ (Grama Panchayath) ಬಿಸಿಎಂ ಹಾಸ್ಟೆಲ್ (BCM hostels) , ಗ್ರಂಥಾಲಯ, ಎನ್‌ಆರ್‌ಎಲ್‌ಎಂ ವರ್ಕ್ ಶೆಡ್ ಕಾಮಗಾರಿ ಸ್ಥಳಗಳಿಗೆ ಭೇಟಿ (Visit) ನೀಡಿ, ಪರಿಶೀಲನೆ ನಡೆಸಿದರು.

ಮೊದಲು ಹೋಟೆಗಾಳಿ ಗ್ರಾಮದಲ್ಲಿರುವ ಬಿಸಿಎಂ ವಸತಿ ನಿಲಯಕ್ಕೆ ಭೇಟಿ ನೀಡಿದ ಜಿಪಂ ಸಿಇಒ, ಕುಡಿಯುವ ನೀರಿನ ಮೂಲಗಳ ಬಗ್ಗೆ ವಿಚಾರಿಸಿ, ಆಗಾಗ ನೀರಿನ ಪರೀಕ್ಷೆ ನಡೆಸಬೇಕು ಎಂದ ಅವರು, ಹಾಸ್ಟೆಲ್ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅನುಕೂಲವಾಗಲೆಂದು ಗ್ರಂಥಾಲಯದ ವ್ಯವಸ್ಥೆ ಮಾಡಲಾಗಿದೆ. ಆದರೆ ಗ್ರಂಥಾಲಯ ನಾಮ ಮಾತ್ರವಾಗಿದ್ದು, ತ್ವರಿತವಾಗಿ ಗ್ರಂಥಾಲಯಕ್ಕೆ ಅವಶ್ಯಕವಿರುವ ಪುಸ್ತಕಗಳು, ಕಂಪ್ಯೂಟರ್ ಹಾಗೂ ಪೀಠೋಪಕರಣಗಳ ವ್ಯವಸ್ಥೆಯಾಗಬೇಕು. ಹಾಸ್ಟೆಲ್ ಆರಂಭವಾದಾಗಿನಿಂದ ಮಕ್ಕಳಿಗೆ ಕಿಟ್ ವ್ಯವಸ್ಥೆ ಕಲ್ಪಿಸಿಲ್ಲ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬವಾದಲ್ಲಿ ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ನಂತರ ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿ ಸಾರ್ವಜನಿಕ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿ, ಗ್ರಂಥಾಲಯ ಉತ್ತಮವಾಗಿ ನಿರ್ಮಾಣವಾಗಿದೆ. ಕಾಮಗಾರಿ ಆದಷ್ಟೂ ಶೀಘ್ರ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು.

ಇದನ್ನೂ ಓದಿ: Soldiers Dead: ಲಡಾಕ್‌ನಲ್ಲಿ ನದಿಗೆ ಬಿದ್ದ ಸೇನಾ ವಾಹನ, 9 ಸೈನಿಕರ ಸಾವು

ತದನಂತರ ಘಾಡಸಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಜಾಗದ ಸಮಸ್ಯೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತೆಗೆ ಜಾಗದಲ್ಲಿನ ಮರಗಳನ್ನು ತೆರವುಗೊಳಿಸಿ ಅಲ್ಲಿಯೇ ಘಟಕ ಹಾಗೂ ಎನ್‌ಆರ್‌ಎಲ್‌ಎಂ ವರ್ಕ್ ಶೆಡ್ ನಿರ್ಮಿಸುವಂತೆ ಹಾಗೂ ಪಂಚಾಯಿತಿ ಕಟ್ಟಡವನ್ನು ಜಿಲ್ಲಾ ಪಂಚಾಯಿತಿ ಅಧೀನದಲ್ಲಿರುವ ಗೋಮಾಳ ಜಾಗದಲ್ಲಿ ನಿರ್ಮಿಸಿಕೊಳ್ಳಲು ಸಲಹೆ ನೀಡಿದರು. ಈ ವೇಳೆ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಶಾಲಾ ಕಾಂಪೌಂಡ್ ವೀಕ್ಷಿಸಿದರು‌. ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಪಂಚಾಯಿತಿ ಸಿಬ್ಬಂದಿ ಕಾರ್ಯನಿರ್ವಹಣೆಯ ಮಾಹಿತಿ ಪಡೆದರು.

ನಂತರ ಮುಡಗೇರಿ ಗ್ರಾಮ ಪಂಚಾಯಿತಿಯ ಅರ್ಥಲಾವ ಕೆರೆಗೆ ಭೇಟಿ ಕೊಟ್ಟು, ಪ್ರವಾಸಿ ತಾಣದಂತಿರುವ ಈ ಕೆರೆ ಅಭಿವೃದ್ಧಿಪಡಿಸಿ, ಇದಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: World Cup 2023 : ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರ ಮಸ್ಕಟ್​ ಅನಾವರಣ

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದಕುಮಾರ ಬಾಲಪ್ಪನವರ, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ್ ನಾಯ್ಕ, ಪಿಆರ್‌ಇಡಿ ಎಇಇ, ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ವಸತಿ ನಿಲಯದ ಮೇಲ್ವಿಚಾರಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಹಾಗೂ ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.

Exit mobile version