Site icon Vistara News

Uttara Kannada News: ಪೌರಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಬದ್ಧ: ಸಚಿವ ಮಂಕಾಳ ಎಸ್ ವೈದ್ಯ

swachata karmikara arivu samagama programme

ಕಾರವಾರ: ನಿಸ್ವಾರ್ಥ ಸೇವೆಯ ಮೂಲಕ ನಗರವನ್ನು ಸ್ವಚ್ಛವಾಗಿರಿಸುವ ಪೌರಕಾರ್ಮಿಕರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ (Uttara Kannada News) ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಉತ್ತರ ಕನ್ನಡ ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರವೀಂದ್ರನಾಥ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಮಿಕರ ಅರಿವು ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಸಂತೋಷದಿಂದ ಇದ್ದರೆ ನಗರವು ಸ್ವಚ್ಛವಾಗಿರುತ್ತದೆ. ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಒದಗಿಸಲು ಬದ್ಧವಾಗಿದ್ದು, ಜಿಲ್ಲೆಯಲ್ಲಿ ಪ್ರಥಮಾದ್ಯತೆಯಲ್ಲಿ ಮನೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಇದನ್ನೂ ಓದಿ: Vijayanagara News: ʼವಿರೂಪಾಕ್ಷ ದೇವರ ಪುರʼ ಹೆಸರಿನ ಶಾಸನ, ಎರಡು ವೀರಗಲ್ಲುಗಳು ಪತ್ತೆ

ಜಿಲ್ಲೆಯಲ್ಲಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 127 ಪೌರ ಕಾರ್ಮಿಕರನ್ನು ಪ್ರಥಮ ಹಂತದಲ್ಲಿ ಖಾಯಂ ನೌಕರರನ್ನಾಗಿ ಇಂದು ನೇಮಕ ಮಾಡಲಾಗುತ್ತಿದ್ದು, ಬಾಕಿ ಉಳಿದಿರುವ 44 ಪೌರ ಕಾರ್ಮಿಕರನ್ನು ಶೀರ್ಘದಲ್ಲಿ ಖಾಯಂ ನೌಕಕರನ್ನಾಗಿ ನೇಮಕ ಮಾಡಲಾಗುವುದು ಹಾಗೂ ಇನ್ನೂ 88 ಪೌರಕಾರ್ಮಿಕರನ್ನು ಹಂತ ಹಂತವಾಗಿ ಖಾಯಂ ನೌಕರರನ್ನಾಗಿ ನೇಮಕ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಮಾತನಾಡಿ, ಪೌರ ಕಾರ್ಮಿಕರ ಹಲವು ವರ್ಷಗಳ ಕನಸು ಇಂದು ನನಸಾಗುತ್ತಿದ್ದು, 127 ಪೌರ ಕಾರ್ಮಿಕರನ್ನು ಖಾಯಂ ನೌಕರರನ್ನಾಗಿ ನೇಮಕ ಮಾಡಲಾಗಿದೆ. ಅವರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸುವ ಜತೆಗೆ ಅವರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮೂಲಭೂತ ಸೌಕರ್ಯ ಒದಗಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಸಚಿವರು ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 127 ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶದ ಪತ್ರ ವಿತರಿಸಿದರು.

ಇದನ್ನೂ ಓದಿ: Uttara Kannada News: ಗುಡ್ನಾಪುರದಲ್ಲಿ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಿದ ಗ್ರಾ.ಪಂ ಸದಸ್ಯ ರಘು ನಾಯ್ಕ್

ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ಟಿ ನಾಯ್ಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೇಲ್ಲಾ ವರ್ಗಿಸ್ ಸೇರಿದಂತೆ ಇತರರು ಇದ್ದರು.

Exit mobile version