Site icon Vistara News

Uttara Kannada News: ಯಲ್ಲಾಪುರದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆ

Taluk Level Youth Parliament Competition in Yallapur

ಯಲ್ಲಾಪುರ: ಪಟ್ಟಣದ ಆಡಳಿತ ಸೌಧದ ಸಭಾಭವನದಲ್ಲಿ ಗುರುವಾರ ತಾಲೂಕು ಮಟ್ಟದ ಯುವ ಸಂಸತ್ (Youth Parliament) ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಗೆ ತಾಲೂಕು ದಂಡಾಧಿಕಾರಿ ಗುರುರಾಜ್ ಎಂ. ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಹಾಗೂ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಯುವ ಸಂಸತ್ತು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಮಾತನಾಡಿ, ಇಂದಿನ ಯುವಕರು ಆಡಳಿತಾತ್ಮಕ ರೀತಿ ನೀತಿಗಳನ್ನು ತಿಳಿದುಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ; ಕರಾವಳಿಗೆ ಯೆಲ್ಲೋ ಅಲರ್ಟ್‌

ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಮಾತನಾಡಿದರು.

ಯುವ ಸಂಸತ್ತು ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಬೀಸ್ಕೋಡಿನ ಶ್ರಿಯಾ ಶ್ರೀಧರ್ ಭಟ್ ಹಾಗೂ ಪ್ರಸಾದಿನಿ ನರಸಿಂಹ ಭಟ್ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದರೆ, ಮುರಾರ್ಜಿ ವಸತಿ ಶಾಲೆಯ ಲತಾ ಸಿದ್ದಿ ತೃತೀಯ, ಸರ್ಕಾರಿ ಪ್ರೌಢಶಾಲೆ ಬಿಸಗೊಡಿನ ಅಪೂರ್ವ ಕರುಮನೆ 4ನೇ ಸ್ಥಾನ ಹಾಗೂ ಕೆಪಿಎಸ್ ಕಿರವತ್ತಿಯ ಲಕ್ಷ್ಮಿ ಕಿರೆಹೊಸೂರು 5ನೇ ಸ್ಥಾನವನ್ನು ಪಡೆಯುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

ಸ್ಪರ್ಧೆಯ ನಿರ್ಣಾಯಕರಾಗಿ ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟ, ಉಪನ್ಯಾಸಕ ಶ್ರೀಪಾದ ಹೆಗಡೆ ಹಾಗೂ ರಾಜಾರಾಮ್ ವೈದ್ಯ ಪಾಲ್ಗೊಂಡಿದ್ದರು.

ಸಮಾಜ-ವಿಜ್ಞಾನ ಶಿಕ್ಷಕರ ಸಂಘದ ಅಧ್ಯಕ್ಷೆ ನಾಗರತ್ನ ನಾಯಕ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶ್ರೀಧರ ಹೆಗಡೆ ಸ್ಪರ್ಧೆ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಇದನ್ನೂ ಓದಿ: Education News : ಪದವೀಧರ ಶಿಕ್ಷಕರ ಜ್ಯೇಷ್ಠತೆ ಸಮಸ್ಯೆ ಬಗ್ಗೆ ಸಿಎಂ ಜತೆ ಶೀಘ್ರ ಚರ್ಚೆ: ಮಧು ಬಂಗಾರಪ್ಪ

ಶಿಕ್ಷಕ ರಾಘವೇಂದ್ರ ಹೆಗಡೆ ಸ್ಪರ್ಧೆಯನ್ನು ನಡೆಸಿಕೊಟ್ಟರು ಹಾಗೂ ಯುವ ಸಂಸತ್ ಕಾರ್ಯಕ್ರಮದ ನೋಡಲ್ ಅಧಿಕಾರಿ ಪ್ರಶಾಂತ ಪಟಗಾರ ಸ್ವಾಗತಿಸಿ, ವಂದಿಸಿದರು.

Exit mobile version