Site icon Vistara News

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Yallapur Tehsildar Tanuja T savadatti instructed to create awareness about infectious diseases

ಯಲ್ಲಾಪುರ: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ (infectious diseases) ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ (Uttara Kannada News) ಹೇಳಿದರು.

ಶುಕ್ರವಾರ ಮಿನಿ ವಿಧಾನಸೌಧದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತು ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲೀಚಿಂಗ್ ಪೌಂಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ಡೆಂಗ್ಯೂ, ಚಿಕುನ್‌ಗುನ್ಯ, ಮಲೇರಿಯಾ, ಆನೆಕಾಲುರೋಗ, ಮೆದುಳು ಜ್ವರಗಳ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ಕಲುಷಿತ ನೀರಿನಿಂದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವುದು ಸೂಕ್ತ. ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡಬೇಕು ಎಂದ ಅವರು, ಓ.ಆರ್.ಎಸ್. ತಯಾರಿಸಿ ಬಳಸುವ ವಿಧಾನ, ಸೊಳ್ಳೆ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಲಸಿಕಾ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರ್‌.ಸಿ.ಎಚ್.‌ ಅಧಿಕಾರಿ ಡಾ. ನಟರಾಜ್‌ ಕೆ., ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ದಡಾರ ಕೂಡ ಒಂದಾಗಿದ್ದು, ದಡಾರ ನಿರ್ಮೂಲನೆಗೆ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಸಭೆಯಲ್ಲಿ ಬಿಪಿಎಂ ಎಸ್‌.ಎಸ್‌. ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ ವಂದಿಸಿದರು.

Exit mobile version