Site icon Vistara News

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura

ಯಲ್ಲಾಪುರ: ಜ್ಞಾನವೇ ಶ್ರೇಷ್ಠವಾದ ಸಂಪತ್ತು ಎಂಬ ಧ್ಯೇಯದೊಂದಿಗೆ ಸದಾ ಸಂಸ್ಕಾರಯುತ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯು ಮುಂಚೂಣಿಯಲ್ಲಿ ಸಾಗುತ್ತಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ತಿಳಿಸಿದರು.

ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪ್ರತಿವರ್ಷವೂ ಶಿಕ್ಷಕರ ಕಲಿಕಾ ಕೌಶಲ್ಯ ಮತ್ತು ಸಾಮರ್ಥ್ಯ ವೃದ್ಧಿಗಾಗಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆ ಎಂದರು.

ನಗರಗಳಲ್ಲಿ ದೊರೆಯುವ ಉತ್ತಮ ಗುಣಾತ್ಮಕ ಶಿಕ್ಷಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಶಿಕ್ಷಣ ಸಂಸ್ಥೆಯು ಸದಾ ಅಗತ್ಯ, ರಚನಾತ್ಮಕವಾದ ಚಟುವಟಿಕೆ ಮತ್ತು ಕಾರ್ಯಕ್ರಮಗಳೊಂದಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್‌ನ ‘ಪ್ರಶಿಕ್ಷಣ ಭಾರತಿ’ಯ ಸಹಯೋಗದಲ್ಲಿ ಪಂಚಮುಖಿ ಶಿಕ್ಷಣದ ಪ್ರಾಮುಖ್ಯತೆ, ಶಿಕ್ಷಕರು ತರಗತಿಗಳಲ್ಲಿ ಪಂಚಮುಖಿ ಶಿಕ್ಷಣದ ಅಂಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಅದನ್ನು ಕಲಿಸುವ ಪದ್ಧತಿಗಳ ಕುರಿತು ಒಂದು ದಿನದ ತರಬೇತಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ ಅವರು ಸಂತೋಷದಾಯಕ ತರಗತಿ ನಿರ್ವಹಣೆಯ ಕುರಿತು, ಉಪನ್ಯಾಸಕ ಡಾ. ಮಹೇಶ್ ಭಟ್ ಅವರು ಪಂಚಮುಖಿ ಶಿಕ್ಷಣ ಹಾಗೂ ಸನಾತನ ಶಿಕ್ಷಣ ಪದ್ಧತಿಯ ಕುರಿತು ಮತ್ತು ಕೀರ್ತಿವತಿ ಮಾತಾಜಿಯವರು ಕಲಿಕಾ ಚಟುವಟಿಕೆ ಆಧಾರಿತ ತರಗತಿ ನಿರ್ವಹಣೆಯ ಕುರಿತು ತರಬೇತಿ ನೀಡಿದರು.

ಎರಡನೇ ದಿನ ಬೆಂಗಳೂರಿನ ಮ್ಯಾಕ್ ಮಿಲನ್ ಸಂಸ್ಥೆಯಿಂದ ತರಗತಿ ನಿರ್ವಹಣೆಯಲ್ಲಿ ಶಿಕ್ಷಕರ ಪಾತ್ರ ಮತ್ತು ಮ್ಯಾಕ್ ಮಿಲನ್ ಸಂಸ್ಥೆಯ ಪಠ್ಯ ಪುಸ್ತಕಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಶಿಕ್ಷಕರು ತಮ್ಮ ಕಲಿಕಾ ಕೌಶಲ್ಯವನ್ನು ಹೆಚ್ಚಿಸಿಕೊಂಡು ತರಗತಿಯನ್ನು ಸುಗಮ ಗೊಳಿಸುವ ಕುರಿತು ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಚಾರ್ಯರಾದ ಸುಜಾತ ಹಿರೇಮಠ್ ಭಾಗವಹಿಸಿದ್ದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ, ಪ್ರಾಂಶುಪಾಲೆ ಮಹಾದೇವಿ ಭಟ್, ಪಿಯು ವಿಭಾಗದ ಪ್ರಾಚಾರ್ಯ ಡಿ.ಕೆ. ಗಾಂವ್ಕರ್, ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ, ಕೇಂದ್ರೀಯ ಶಾಲೆಯ ಉಪ ಪ್ರಾಂಶುಪಾಲೆ ಆಸ್ಮಾ ಶೇಖ್ ಹಾಗೂ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

Exit mobile version