Site icon Vistara News

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Uttara Kannada Lok Sabha constituency Congress candidate Dr Anjali Nimbalkar latest statement

ಯಲ್ಲಾಪುರ: ಇದು ನಾಯಕರ ಚುನಾವಣೆಯಲ್ಲ, ಪ್ರತಿ ಕಾರ್ಯಕರ್ತರ ಚುನಾವಣೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಅಲೆ ಇದೆ ಎಂದು‌ ಚುನಾವಣೆಯನ್ನು ಬಹಳ ಸುಲಭವಾಗಿ ಪರಿಗಣಿಸಬಾರದು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ (Uttara Kannada News) ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರಕನ್ನಡ ಲೋಕಸಭಾ ಕ್ಷೇತ್ರ ದೊಡ್ಡದು. ಐದು ಜನ ಶಾಸಕರು ನಮ್ಮವರಿದ್ದು, ನಾವೆಲ್ಲರೂ ಸೇರಿ ಕೆಲಸ ಮಾಡಿ ಈ ಬಾರಿ ಗೆಲುವು ಸಾಧಿಸಬೇಕಿದೆ. ಪ್ರತಿ ಹಳ್ಳಿಗಳಿಗೆ ನನಗೆ ಪ್ರಚಾರಕ್ಕೆ ತೆರಳಲು ಕಷ್ಟವಿದೆ, ಸಮಯದ ಕೊರತೆ ಇದೆ. ಹೀಗಾಗಿ ಕಾರ್ಯಕರ್ತರು ನೀವೇ ಅಭ್ಯರ್ಥಿಯಾಗಿ ಪ್ರಚಾರ ಮಾಡಬೇಕು ಎಂದರು.

ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಪ್ರತಿ ಮನೆ ಮನೆಗೂ ಮುಟ್ಟಿದೆ. ಜನರ ಪರ ಕೆಲಸ ಮಾಡಬೇಕಾದರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಜನರಲ್ಲಿದೆ. ಒಂದೊಂದು‌ ತಾಲೂಕಲ್ಲೂ ಒಂದೊಂದು ರೀತಿಯ ಸಮಸ್ಯೆಗಳಿವೆ. ಸಂಸದಳಾದರೆ ಶಾಸಕರು, ಸಚಿವರೊಂದಿಗೆ ಮಾತನಾಡಿ ತಾಲೂಕಾವಾರು ಸಮಸ್ಯೆಗಳನ್ನು ಪರಿಹಸರಿಲು ಚರ್ಚಿಸುತ್ತೇನೆ. ಇದು ನನ್ನ ಕ್ಷೇತ್ರ. ಜನ ವಿಶ್ವಾಸದಿಂದ ಆಶೀರ್ವದಿಸಿದರೆ ಜಿಲ್ಲೆಯ ಸಮಸ್ಯೆಗಳಿಗೆ ಹೋರಾಟಕ್ಕೆ ಸಿದ್ಧಳಿದ್ದೇನೆ ಎಂದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮಾಜಿ ಶಾಸಕ ವಿ.ಎಸ್.ಪಾಟೀಲ ಮಾತನಾಡಿ, ಚುನಾವಣೆ ಸರಳವಲ್ಲ. ಎದುರಾಳಿಯನ್ನು ಎದುರಿಸುವ ಮನೋಭಾವ ನಮ್ಮಲ್ಲಿರಬೇಕು. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಆಗಲ್ಲ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಆದರೆ ಐದೂ ಗ್ಯಾರಂಟಿಗಳನ್ನೂ ಜನರಿಗೆ ತಲುಪಿಸುವಲ್ಲಿ ಸಫಲರಾಗಿದ್ದೇವೆ. ಇದೀಗ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಗೆಲ್ಲಿಸುವ ಮೂಲಕ ಮತ್ತೊಂದು ಗ್ಯಾರಂಟಿ ಕೊಡಬೇಕಿದೆ ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿ, ಡಾ.ಅಂಜಲಿ ನಿಂಬಾಳ್ಕರ್ ಸುಶಿಕ್ಷಿತರು. ರೋಗಿಯ ಸೇವೆ ದೇವರ ಸೇವೆ ಎಂದುಕೊಂಡ ಅವರು, ಜನಸೇವೆಗಾಗಿ ರಾಜಕೀಯ ಆಯ್ದುಕೊಂಡರು. ಜಿಲ್ಲೆಯ ಸಮಸ್ಯೆಗಳನ್ನು ದೆಹಲಿಯ ಮಟ್ಟಕ್ಕೆ ಮುಟ್ಟಿಸಬಲ್ಲ ಸಮರ್ಥರು‌. ಅವರು ಈ ಬಾರಿ ಗೆದ್ದು ಸಂಸತ್‌ನಲ್ಲಿ ನಮ್ಮ ಧ್ವನಿಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಉಲ್ಲಾಸ್ ಶಾನಭಾಗ, ಶ್ರೀನಿವಾಸ್ ಧಾತ್ರಿ, ಟಿ.ಸಿ.ಗಾಂವ್ಕರ್, ವಿ.ಎಸ್.ಭಟ್, ದೀಪಕ್ ದೊಡ್ಡೂರು, ರಾಘವೇಂದ್ರ ಭಟ್, ಎಂ.ಜಿ.ಭಟ್, ದೇವಿದಾಸ್ ಶಾನಭಾಗ, ವಿ.ಎನ್.ಭಟ್, ಮತ್ತಿತರರಿದ್ದರು.

ಇದನ್ನೂ ಓದಿ: Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

ಗ್ರಾಮದೇವಿಗೆ ವಿಶೇಷ ಪೂಜೆ

ಸಭೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರದ ಗ್ರಾಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Exit mobile version