Site icon Vistara News

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Uttara Kannada News

ಕಾರವಾರ: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15ರವರೆಗೆ ನಡೆಯುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ (Uttara Kannada News) ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದರು. ಸೋಮವಾರ ವೀಡಿಯೋ ಸಂವಾದ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ಆಗಸ್ಟ್ 13ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೈಕ್, ಸೈಕಲ್ ಜಾಥಾ ಮೂಲಕ ತಿರಂಗ ರ‍್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ವಾಕಥಾನ್ ಮೂಲಕ ತಿರಂಗ ರ‍್ಯಾಲಿ ಮತ್ತು ರಂಗೋಲಿ ಚಿತ್ರದ ಮೂಲಕ ಅಭಿಯಾನ ಕೈಗೊಳ್ಳಬೇಕು. ಆಗಸ್ಟ್ 15 ರಂದು ಪ್ರತಿ ಮನೆ ಮನೆಯಲ್ಲೂ ಧ್ವಜಾರೋಹಣ ಕೈಗೊಂಡು, ತಿರಂಗಾ ಜತೆಗಿನ ಸೆಲ್ಫಿಯನ್ನು harghartiranga.com ನಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು, ಸ್ಥಳೀಯವಾಗಿ ಆಯೋಜಿಸಲಾಗುವ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸ್ವಾತಂತ್ರ‍್ಯದ ಸಂಭ್ರಮವನ್ನು ಪ್ರತಿ ಮನೆ-ಮನೆಯಲ್ಲೂ ಹಾಗೂ ಸರ್ಕಾರಿ/ಅರೆ ಸರ್ಕಾರಿ/ನಿಗಮ-ಮಂಡಳಿಗಳು/ಸ್ವ-ಸಹಾಯ ಗುಂಪುಗಳು/ಸಾರ್ವಜನಿಕ ಉದ್ಯಮ ಸಂಸ್ಥೆಗಳು/ ಸಂಘ-ಸಂಸ್ಥೆಗಳು/ ನಾಗರಿಕ ಸೇವಾ ಸಂಸ್ಥೆಗಳು/ ಶಾಲಾ ಕಾಲೇಜು ವಿದ್ಯಾರ್ಥಿಗಳು/ ಸಾರ್ವಜನಿಕರು/ ಇತರೆ ಎಲ್ಲ ಸಿಬ್ಬಂದಿ ಹಾಗೂ ಕುಟುಂಬ ವರ್ಗದವರು ಸೇರಿ ಸ್ವತಃ ತಾವೇ ಸ್ವಯಂ ಕ್ರಿಯಾಶೀಲರಾಗಿ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Exit mobile version