Site icon Vistara News

Uttara Kannada News: ಶಿರಸಿ ತಾಲೂಕಿಗೆ ಜಿ.ಪಂ ಸಿಇಒ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Uttara Kannada ZP CEO visit to Sirsi Taluk Inspection of various works

ಕಾರವಾರ: ಶಿರಸಿ (Sirsi) ತಾಲೂಕಿನ ವಿವಿಧ ಸ್ಥಳಗಳಿಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ZP CEO) ಈಶ್ವರ ಕಾಂದೂ ಭೇಟಿ ನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಶಿರಸಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಅಂಗಾಂಶ ಕೃಷಿ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪ್ರಯೋಗಾಲಯದ ಮಾಹಿತಿ ಪಡೆದು, ಅಲ್ಲಿನ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಉಂಚಳ್ಳಿ ಗ್ರಾಮ ಪಂಚಾಯಿತಿಯ ಬಿದ್ರಕಾನ್ ಗ್ರಂಥಾಲಯಕ್ಕೆ ಭೇಟಿ ನೀಡಿ, ಸುವ್ಯವಸ್ಥಿತವಾಗಿ ಗ್ರಂಥಾಲಯ ಮುನ್ನಡೆಸಿಕೊಂಡು ಹೋಗುತ್ತಿರುವ ಸಿಬ್ಬಂದಿಯನ್ನು ಅಭಿನಂದಿಸಿದರು. ಉಂಚಳ್ಳಿ ಪಂಚಾಯಿತಿಯಲ್ಲಿ ನರೇಗಾ ಒಗ್ಗೂಡಿಸುವ ಯೋಜನೆಯಡಿ ಪ್ರಗತಿಯಲ್ಲಿರುವ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ವೀಕ್ಷಿಸಿದರು.

ಇದನ್ನೂ ಓದಿ: CDAC Recruitment 2023: 278 ಹುದ್ದೆಗಳಿವೆ; ಇಂದೇ ಅರ್ಜಿ ಸಲ್ಲಿಸಿ

ಬಳಿಕ ಕಲ್ಲಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉನ್ನತೀಕರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಪಕ್ಕದ ಸಹಸ್ರಳ್ಳಿ ಗ್ರಾಮದ ವ್ಯಾಪ್ತಿಯ ಸಿದ್ದಾರ್ಥ ನಾಯ್ಕ ಅವರು ತೋಟಗಾರಿಕೆ ಇಲಾಖೆಯ ಆರ್‌ಕೆವಿವೈ (RKVY) ಯೋಜನೆಯಡಿ ನಿರ್ಮಿಸಿದ ಕೃಷಿ ಹೊಂಡ ಕಾಮಗಾರಿ ಪರಿಶೀಲಿಸಿದರು.

ಇದನ್ನೂ ಓದಿ: ENG vs NZ: ಸಬರಮತಿ ತೀರದಲ್ಲಿ ವಿಶ್ವಕಪ್ ಕ್ರಿಕೆಟ್​ ಮಹಾ ಸಮರಕ್ಕೆ ಚಾಲನೆ; ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಕಿವೀಸ್​

ಈ ಸಂದರ್ಭದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಸತೀಶ ಬಿ.ಪಿ., ಶಿರಸಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಹೆಗಡೆ ಹಾಗೂ ಪಿಆರ್‌ಇಡಿ ಮತ್ತು ಆರ್‌ಡಬ್ಲೂಎಸ್ ಇಲಾಖೆಯ ವಿವಿಧ ಅಧಿಕಾರಿಗಳು, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

Exit mobile version