Site icon Vistara News

Uttara Karnataka Utsav | ಜ. 21, 22ರಂದು ಬೆಂಗಳೂರಲ್ಲಿ ಉತ್ತರ ಕರ್ನಾಟಕ ಉತ್ಸವ, ಲೋಗೊ ಬಿಡುಗಡೆ

Uttara Karnataka habba

ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಜನವರಿ 21 ಮತ್ತು 22ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 (Uttara Karnataka Utsav) ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಿಡುಗಡೆ ಮಾಡಿದರು.

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ʻಉತ್ತರ ಕರ್ನಾಟಕ ಉತ್ಸವ 2023ʼನ್ನು ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ನಲ್ಲಿ ಆಯೋಜಿಸಿದೆ.

ಉತ್ತರ ಕರ್ನಾಟಕ ಭಾಗದಿಂದ ಉದ್ಯೋಗ ಅರಸಿ ಬಂದು ಬೆಂಗಳೂರು ಮಹಾ ನಗರದಲ್ಲಿ ನೆಲೆಸಿ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ವಿವಿಧ ಬಡಾವಣೆಯಲ್ಲಿ ಸಂಘಗಳನ್ನು ಕಟ್ಟಿಕೊಂಡಿದ್ದಾರೆ.
ಈ ಎಲ್ಲಾ ಸಂಸ್ಥೆಗಳ ಒಕ್ಕೂಟವೇ ʻಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆʼ. ʻʻನಾವು ನಮ್ಮವರಿಗಾಗಿ ಕೈ ಜೋಡಿಸುತ್ತಾ ಎಲ್ಲರನ್ನು ಒಂದೆಡೆ ಸೇರಲು ಮತ್ತು ಬೆಳೆಯಲು ಒಬ್ಬರಿಗೊಬ್ಬರು ಮೆಟ್ಟಿಲಾಗಲು ಹಾಗೂ ನಮ್ಮ ಸಂಸ್ಕೃತಿ ಪರಂಪರೆಯನ್ನು ಮುಂದುವರೆಸಲು “ಉತ್ತರ ಕರ್ನಾಟಕ ಉತ್ಸವ 23” ರನ್ನು ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಪರಂಪರೆ, ಉಡುಗೆ ತೊಡಿಗೆ ಆಹಾರ ಪದ್ಧತಿ ಎಲ್ಲವನ್ನು ಅನಾವರಣಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.

ಭೂಮಿ ಮಂಜೂರು ಮಾಡಿದ ಸಿಎಂಗೆ ಸನ್ಮಾನ
ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲು ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇಟಿ ತಿಳಿಸಿದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಅದೆಂಥಾ ಕ್ಷಮಾಗುಣ: ಅನ್ನದ ಬಟ್ಟಲಿಗೆ ಉಗುಳಿದ ಜೈಲರನ್ನೇ ಮನೆಗೆ ಕರೆದಿದ್ದರು ಮಂಡೇಲಾ!

Exit mobile version