Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ! - Vistara News

ಕರ್ನಾಟಕ

Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

Utthana Essay Competition 2024: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

VISTARANEWS.COM


on

Utthana Essay Competition 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು (Utthana Essay Competition 2024) ಆಯೋಜಿಸಲಾಗಿದೆ.

ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼ ರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ: Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಉತ್ಥಾನ ಮಾಸಪತ್ರಿಕೆಯು ಕಳೆದ ಹಲವು ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನಲ್ಲಿ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಸ್ಪರ್ಧೆಯ ನಿಯಮಗಳು

ಸ್ಪರ್ಧೆಯಲ್ಲಿ ಪದವಿ, ಯಾ ತತ್ಸಮಾನ ಮತ್ತು ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಪ್ರಬಂಧವು ಕನ್ನಡ ಭಾಷೆಯಲ್ಲಿರಬೇಕು. ಪ್ರಬಂಧವು 1500 ಪದಗಳು ಮೀರದಂತೆ ಇರಲಿ. ಪ್ರಬಂಧವನ್ನು ಪೋಸ್ಟ್ ಮೂಲಕ ಅಥವಾ ಇಮೇಲ್ ಮೂಲಕ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸುವ ಪ್ರಬಂಧ ವಿದ್ಯಾರ್ಥಿಯ ಸ್ವಂತ ರಚನೆಯಾಗಿರಬೇಕು. ಈವರೆಗೆ ಎಲ್ಲಿಯೂ ಯಾವ ರೀತಿಯಲ್ಲೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು. ಕಳುಹಿಸುವ ಪ್ರಬಂಧವನ್ನು ಕಾಲೇಜು/ವಿಭಾಗ ಮುಖ್ಯಸ್ಥರಿಂದ ದೃಢೀಕರಿಸಬೇಕು. ಪ್ರಬಂಧವನ್ನು ಹಾಳೆಯ ಒಂದೆ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು. ಹಾಳೆಗಳನ್ನು ಚಿತ್ರಗಳಿಂದ, ಬಣ್ಣಗಳಿಂದ ಅಲಂಕರಿಸುವುದು ಬೇಡ. ಸ್ಪರ್ಧಿಗಳು ತಮ್ಮ ಹೆಸರು, ಪರಿಚಯ, ಮೊಬೈಲ್ ನಂಬರ್, ಕಾಲೇಜಿನ ಹೆಸರು, ವಿಳಾಸ ಇತ್ಯಾದಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು. ಜತೆಗೆ ಭಾವಚಿತ್ರವೂ ಇರಬೇಕು.

ಪ್ರಬಂಧವನ್ನು ನುಡಿ/ಯೂನಿಕೋಡ್ ತಂತ್ರಾಶದಲ್ಲಿ ಸಿದ್ಧಪಡಿಸಿ (ಪಿಡಿಎಫ್‌ ಮತ್ತು ವರ್ಡ್‌ ಫೈಲ್‌ ಎರಡನ್ನೂ) utthanacompetition@gmail.com ಈ ವಿಳಾಸಕ್ಕೆ ಇ-ಮೇಲ್ ಮೂಲಕವೂ ಕಳುಹಿಸಬಹುದು. ಜೆರಾಕ್ಸ್‌ /ಫೋಟೋ ಪಿಡಿಎಫ್‌ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ. ಪ್ರಬಂಧ ತಲುಪಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಹುಮಾನಗಳ ವಿವರ

ಮೊದಲ ಬಹುಮಾನ: ರೂ. 10,000/-
ಎರಡನೆಯ ಬಹುಮಾನ: ರೂ. 7,000 /-
ಮೂರನೆಯ ಬಹುಮಾನ: ರೂ. 5,000/-
ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ ರೂ. 2,000/-

ಇದನ್ನೂ ಓದಿ: Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

ಪ್ರಬಂಧವನ್ನು ಕಳುಹಿಸಬೇಕಾದ ವಿಳಾಸ

ಸಂಪಾದಕರು, ‘ಉತ್ಥಾನ’ ವಾರ್ಷಿಕ ಪ್ರಬಂಧ ಸ್ಪರ್ಧೆ – 2024
‘ಕೇಶವ ಶಿಲ್ಪ’, ಕೆಂಪೇಗೌಡ ನಗರ ಬೆಂಗಳೂರು –04, ಇ-ಮೇಲ್: utthanacompetition@gmail.com ದೂರವಾಣಿ: 77954 41894

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

Police Raid: ಕೊರಟಗೆರೆ ಪೊಲೀಸ್ ಠಾಣೆಯ ಪೇದೆಯೊಬ್ಬರು ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Koo

ತುಮಕೂರು: ಜಿಲ್ಲೆಯ ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ (Police Raid) ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.

ಕಳ್ಳ ಮಂಜ ಮತ್ತು ಪೊಲೀಸ್‌ ಪೇದೆ ದೊಡ್ಡಲಿಂಗಯ್ಯ

ಸಿಗ್ನಲ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಕಳ್ಳನನ್ನು ಪೇದೆ ಅಡ್ಡಗಟ್ಟಿದ್ದಾರೆ. ಆದರೂ ಅವರನ್ನು ಎಳೆದುಕೊಂಡು ಕಳ್ಳ ಮುಂದೆ ಸಾಗಿದ್ದಾನೆ. ಪಟ್ಟು ಬಿಡದ ಪೊಲೀಸ್‌, ಕಳ್ಳನನ್ನು ಬೆನ್ನಟ್ಟಿ ಕಾಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಅಲ್ಲಿದ್ದ ಟ್ರಾಫಿಕ್‌ ಪೊಲೀಸರು ಕಳ್ಳನನ್ನು ಹಿಡಿಯಲು ನೆರವಾಗಿದ್ದಾರೆ. ನಂತರ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಕಳ್ಳನಿಗೆ ಹಿಗ್ಗಾಮುಗ್ಗಾ ಬಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಖತರ್ನಾಕ್ ಕಳ್ಳನಿಗೆ ಚಿನ್ನದ ಸರ ಹಾಕಿರುವ ವೃದ್ಧೆಯರೇ ಟಾರ್ಗೆಟ್. ವೃದ್ಧೆಯರನ್ನೇ ಟಾರ್ಗೆಟ್ ಮಾಡಿ, ಪಿಂಚಣಿ, ಸರ್ಕಾರದ ಸವಲತ್ತು ಕೊಡಿಸುತ್ತೇನೆಂದು ನಂಬಿಸಿ, ಚಿನ್ನದ ಸರ ಕದ್ದು ಖತರ್ನಾಕ್ ಮಂಜ ಪರಾರಿಯಾಗುತ್ತಿದ್ದ. ಈತನ ವಿರುದ್ಧ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಹೆಬ್ಬೂರು ಪೊಲೀಸ್ ಠಾಣೆ ಸೇರಿ ಸುಮಾರು 10ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದವು.

ಸುಮಾರು 1 ತಿಂಗಳಿಂದ ಪೊಲೀಸರ ಕೈಗೆ ಸಿಗದೇ ಕಣ್ತಪ್ಪಿಸಿ ಓಡಾಡುತ್ತಿದ್ದ 420 ಮಂಜ, ಬೆಂಗಳೂರಿನ ಮತ್ತಿಕೆರೆ ಕಡೆಯಿಂದ ಸದಾಶಿವನಗರ ಪೊಲೀಸ್ ಠಾಣೆ ಕಡೆಗೆ, ಬಿಳಿ ಬಣ್ಣದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ಬರುತ್ತಿರುವ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದರು. ಸದಾಶಿವನಗರ ಠಾಣೆ ಸಿಗ್ನಲ್ ಬಳಿ 420 ಮಂಜನನ್ನು ಹಿಡಿಯಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ದೊಡ್ಡಲಿಂಗಯ್ಯ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನ ಹಿಡಿದಿದ್ದಾರೆ.

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight

ಸದ್ಯ ಖತರ್ನಾಕ್ ಕಳ್ಳ 420 ಮಂಜನನ್ನು ಬಂಧಿಸಿ ಕೊರಟಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ತನಿಖೆ ಮುಂದುವರಿದಿದೆ.

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

couple's fight
couple's fight

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕರ್ನಾಟಕ

Karnataka Governor: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಸಿಎಂ

Karnataka Governor: ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಮುಂಬೈ ಮತ್ತು ಕೊಯಮತ್ತೂರಿನಲ್ಲಿ ನಡೆದ ಯಶಸ್ವಿ ಹೂಡಿಕೆ ಅವಧಿಯ ನಂತರ, ಮೂರನೇ ಸಂವಾದಾತ್ಮಕ ಸಭೆಯು ಬೆಂಗಳೂರಿನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

VISTARANEWS.COM


on

Karnataka Governor
Koo

ಬೆಂಗಳೂರು: ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ರಾಜ್ಯಪಾಲ (Karnataka Governor) ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಬುಧವಾರ ಭೇಟಿ (Bengaluru News) ಮಾಡಿದರು.

ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಮುಂಬೈ ಮತ್ತು ಕೊಯಮತ್ತೂರಿನಲ್ಲಿ ನಡೆದ ಯಶಸ್ವಿ ಹೂಡಿಕೆ ಅವಧಿಯ ನಂತರ, ಮೂರನೇ ಸಂವಾದಾತ್ಮಕ ಸಭೆಯು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಇದನ್ನೂ ಓದಿ: Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಸರ್ಕಾರದ ದೃಷ್ಟಿಕೋನ ಮತ್ತು ನಾವೀನ್ಯತೆಗಳನ್ನು ಎತ್ತಿ ತೋರಿಸುವ ಕೈಗಾರಿಕೋದ್ಯಮಿಗಳನ್ನು ಅವರು ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕೈಗಾರಿಕೋದ್ಯಮಿಗಳೊಂದಿಗೆ ವಿವಿಧ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಗಳು ಸಹ ಇರುತ್ತವೆ.

Continue Reading

ಬೆಂಗಳೂರು

Dinesh Gundu Rao: ರಾಜ್ಯದಲ್ಲಿ ಕಳಪೆ ಔಷಧಗಳ ಜಾಲ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ತರಾಟೆ

Dinesh Gundu Rao: ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಗಳು ಪೂರೈಕೆ ಆಗುತ್ತಿದೆ. ಮನಬಂದಂತೆ ಔಷಧಗಳನ್ನು ಜನರಿಗೆ ನೀಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆ ಇವುಗಳನ್ನು ತಡೆಯಲು ವಿಫಲವಾಗಿದೆ. ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾರ್ನಿಂಗ್‌ ಮಾಡಿದ್ದಾರೆ.

VISTARANEWS.COM


on

Dinesh Gundu Rao
Koo

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗರಂ ಆದರು.

ರಾಜ್ಯದ ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ನಿಯಂತ್ರಣವೂ ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರಿಗೆ ನೀಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದ್ದೀರಿ? ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಷ್ಟು ಕಳಪೆ ಔಷಧಿಗಳ ತಯಾರಕರ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ? ಯಾವ ಔಷಧಿಗಳನ್ನು ಟೆಸ್ಟಿಂಗ್ ಒಳಪಡಿಸಲಾಗಿದೆ. ಕಳಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿ ಸಿಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸುವಂತೆ ಡ್ರಗ್ ಕಂಟ್ರೋಲರ್‌ಗೆ ಸಚಿವರು ಸೂಚನೆ ನೀಡಿದರು.

ಇದನ್ನೂ ಓದಿ: Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

ಎಷ್ಟು ಫಾರ್ಮಸಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ವರದಿ ಕೊಡಿ. ಸುಮ್ಮನೆ ಸ್ಪೆಷಲ್ ಡ್ರೈವ್ ಮಾಡುತ್ತಿದ್ದೇವೆ ಎಂದು ಭಾಷಣ ಬಿಗಿಯಬೇಡಿ. ನೀವು ಕೊಡುತ್ತಿರುವ ಅಂಕಿ ಅಂಶಗಳಲ್ಲಿ ಯಾವುದೇ ಪರಿಣಾಮಕಾರಿ ಕಾರ್ಯ ಕಂಡುಬರುತ್ತಿಲ್ಲ ಎಂದು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಚಾಟಿ ಬೀಸಿದರು.

ಯಾವ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಅವರ ರಕ್ಷಣೆಗೆ ನಾವಿದ್ದೇವೆ. ಯಾವ ಒತ್ತಡಕ್ಕೂ ಮಣಿಯುವ ಅಗತ್ಯವಿಲ್ಲ. ಮೊದಲು ಕೆಲಸ ಮಾಡಿ ತೋರಿಸಿ. ನಿಮಗೆ ತೊಂದರೆ ಆದರೆ ಸರ್ಕಾರ ನಿಮ್ಮ ರಕ್ಷಣೆಗೆ ಬರಲಿದೆ.‌ ಸರ್ಕಾರದಿಂದ ಎಲ್ಲ ರೀತಿಯ ಬೆಂಬಲವು ನಿಮಗೆ ಸಿಗಲಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಭರವಸೆ ನೀಡಿದರು.

ಔಷಧ ನಿಯಂತ್ರಣ ಇಲಾಖೆಯನ್ನು ಮುಚ್ಚಿ ಬಿಡೊಣವೇ?

ಔಷಧ ನಿಯಂತ್ರಣಾಧಿಕಾರಿಗಳ ವಿವರಣೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಎಲ್ಲವು ಸರಿಯಿದ್ದರೆ ಔಷಧ ನಿಯಂತ್ರಣ ಇಲಾಖೆಯನ್ನು ಮುಚ್ವಿ ಬಿಡೊಣವೇ ಎಂದು ಪ್ರಶ್ನಿಸಿದರು. ಕಳಪೆ ಔಷಧಿಗಳ ತಯಾರಿಕರ ವಿರುದ್ಧ ಒಂದು ಕೇಸ್ ಬುಕ್ ಮಾಡಿ, ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗಿಲ್ಲ. ನೀವು ಇನ್ನೇನು ಕೆಲಸ ಮಾಡುತ್ತಿದ್ದೀರಾ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ, ಔಷಧ ನಿಯಂತ್ರಣ ಅಧಿಕಾರಿಗಳ ವಿರುದ್ಧ ಗರಂ ಆದರು.

ಇದನ್ನೂ ಓದಿ: Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

ಸಭೆಗೆ ಬರುವ ಮುನ್ನ ಸಂಪೂರ್ಣ ಮಾಹಿತಿಯನ್ನು ತರಬೇಕು. ಅರೆ ಬರೆ ಅಂಕಿ ಅಂಶಗಳನ್ನು ನಮ್ಮ ಮುಂದಿಟ್ಟು ನಿಮ್ಮ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಚಿವರ ನಿರ್ದೇಶನದಂತೆ ಕಳಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ನಿಮ್ಮ ಮುಖ್ಯ ಕೆಲಸ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

Couple’s fight: ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ.

VISTARANEWS.COM


on

couple's fight
Koo

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿ

Murder case

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿಯಾದ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ನಡೆದಿದೆ. ನಮಿತಾ (22) ಸ್ಥಳದಲ್ಲೇ ಸಾವನ್ನಪ್ಪಿದ ಗರ್ಭಿಣಿ. ಚೆಕಪ್‌ಗಾಗಿ ಹೋಲಿ ಕ್ರಾಸ್ ಆಸ್ಪತ್ರೆಗೆ ಬದಿದ್ದ ಮಹಿಳೆ, ತಪಾಸಣೆ ಬಳಿಕ ಆಸ್ಪತ್ರೆ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಪಘಾತವಾಗುತ್ತಿದ್ದಂತೆ ಕುಟುಂಬಸ್ಥರು, ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹೈರಾಣಾದರು. ಅಪಘಾತವಾದ ಬಳಿಕ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Murder case
Murder case

ಕೋಲಾರ: ಪತ್ನಿಯನ್ನು ಕೊಂದು (Murder Case) ಪರಾರಿಯಾಗಿದ್ದ ಪಾತಕಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ತೀವ್ರವಾಗಿ ಗಾಯಗೊಂಡು ಸತ್ತುಹೋಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ (Bangalore Crime) ಪತ್ನಿಯನ್ನು ಕೊಂದಿದ್ದ (husband killed wife) ಆರೋಪಿ, ಕೋಲಾರದಲ್ಲಿ (Kolar News) ಸಾವಿಗೀಡಾಗಿದ್ದಾನೆ.

ಕೊಲೆ ನಡೆದ ಐದು ದಿನದ ಬಳಿಕ, ಆರೋಪಿ ತಬ್ರೇಝ್ ಪಾಷಾನ ಬೆನ್ನು ಹತ್ತಿದ ಪೊಲೀಸರಿಗೆ ಆತನ ಹೆಣ ಎದುರಾಗಿದೆ. ಫೇಸ್‌ಬುಕ್ ಲೈವ್ ಮಾಡುತ್ತಲೇ ಪತ್ನಿಯ ಹತ್ಯೆ ಮಾಡಿದ್ದ ಪಾತಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಜೀವ ಕಳೆದುಕೊಂಡಿದ್ದಾನೆ.

ಫಾತಿಮಾ‌ (34) ಪತಿಯಿಂದ ಕೊಲೆಯಾದ ಮಹಿಳೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಝ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಪದೇ ಪದೆ ಮನೆಗೆ ಬರುವಂತೆ ಕಿರುಕುಳ ಕೊಡುತ್ತಿದ್ದ.

ಇತ್ತೀಚೆಗೆ ರಸ್ತೆಯಲ್ಲಿ ಆಕೆಯನ್ನು ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಝ್, ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಝ್ ಏನಾದರೂ ಮಾಡುತ್ತಾನೆ ಎಂಬ ಆತಂಕದಿಂದ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಮನೆಗೆ ಬರುವ ಮುನ್ನ ಹಾಗೂ ಹತ್ಯೆಯ ವೇಳೆ ತನ್ನ ಕೃತ್ಯವನ್ನು ಈ ಪಾತಕಿ ಫೇಸ್‌ಬುಕ್‌ ಲೈವ್ ಮಾಡಿದ್ದ. ಕೊಲೆಯ ಬಳಿಕ ಕೋಲಾರಕ್ಕೆ ಕಾಲ್ಕಿತ್ತಿದ್ದ. ಮೊಬೈಲ್ ಬಳಸದೇ ಕೋಲಾರದ ಮಸೀದಿಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ಬಳಿಕ ನಿನ್ನೆ ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿದ್ದ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಆರೋಪಿಯನ್ನು ಬಂಧಿಸಲು ಕೋಲಾರಕ್ಕೆ ತೆರಳಿದ್ದ ಚಾಮರಾಜಪೇಟೆ ಪೊಲೀಸರ ತಂಡ ಚಿಕ್ಕಮ್ಮನ ಮನೆಗೆ ಪ್ರವೇಶಿಸಿದಾಗ, ತಪ್ಪಿಸಿಕೊಳ್ಳುವ ಭರದಲ್ಲಿ ಸುಮಾರು 12 ಅಡಿ ಎತ್ತರದ ಮನೆಯ ಟೆರೇಸ್‌ನಿಂದ ಈತ ಜಿಗಿದಿದ್ದಾನೆ. ಆಗ ಬಿದ್ದು ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಸಾವಿಗೀಡಾಗಿದ್ದಾನೆ.

Continue Reading
Advertisement
ಕರ್ನಾಟಕ58 mins ago

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

John Abraham
ಕ್ರೀಡೆ60 mins ago

John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

Karnataka Governor
ಕರ್ನಾಟಕ1 hour ago

Karnataka Governor: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಸಿಎಂ

Dinesh Gundu Rao
ಬೆಂಗಳೂರು1 hour ago

Dinesh Gundu Rao: ರಾಜ್ಯದಲ್ಲಿ ಕಳಪೆ ಔಷಧಗಳ ಜಾಲ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ತರಾಟೆ

Bangladesh Unrest
ವಿದೇಶ2 hours ago

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight
ಕರ್ನಾಟಕ2 hours ago

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

Bangladesh Unrest
ವಿದೇಶ2 hours ago

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

World Breastfeeding Week 2024
ಆರೋಗ್ಯ2 hours ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ2 hours ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

IND vs SL 3rd ODI
ಕ್ರೀಡೆ2 hours ago

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌