Site icon Vistara News

V Somanna: ಚಾಮರಾಜನಗರ ಚುನಾವಣೆ ಉಸ್ತುವಾರಿಗೆ ಸೋಮಣ್ಣ ಬೇಡ, ವಿಜಯೇಂದ್ರ ಓಕೆ: ಬಿಜೆಪಿಯಲ್ಲಿ ಆಕ್ರೋಶ

V Somanna not to be incharge of Chamarajanagar elections says local BJP

ಚಾಮರಾಜನಗರ: ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಹೊತ್ತಿನಲ್ಲಿ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಸೇರಿದಂತೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಇತ್ತ ಚುನಾವಣೆ (Karnataka Election 2023) ಸಂದರ್ಭದಲ್ಲಿ ನೆಚ್ಚಿನ ನಾಯಕರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡರೆ ಸೂಕ್ತ ಎಂಬುದು ಆಯಾ ಭಾಗದ ನಾಯಕರ ಇಂಗಿತವೂ ಆಗಿದ್ದು, ಈ ಬಗ್ಗೆ ನಾಯಕರಲ್ಲಿ ಒತ್ತಡವನ್ನೂ ಹೇರುತ್ತಿರುತ್ತಾರೆ. ಈಗ ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ. ಸಚಿವ ವಿ. ಸೋಮಣ್ಣ (V Somanna) ಅವರಿಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋ ಬ್ಯಾಕ್ ಚಳವಳಿ ಮಾಡುವ ಎಚ್ಚರಿಕೆ ಕೇಳಿಬಂದಿದೆ. ಬದಲಾಗಿ ಹಳೇ ಮೈಸೂರು ಭಾಗದ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಕಾರಣ, ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಊಹಾಪೋಹ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ನಮ್ಮ ಪಕ್ಷದ ಪರ ಕೆಲಸ‌ ಮಾಡಿಲ್ಲ. ನಮ್ಮ ಅಭ್ಯರ್ಥಿ ವಿರುದ್ಧ ಗೆದ್ದ ಅಭ್ಯರ್ಥಿಗೆ ಮನೆಯನ್ನೇ ಗಿಫ್ಟ್ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರ ಕೆಲಸ ಮಾಡಿಲ್ಲ. ಹೀಗಾಗಿ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಬಾರದು. ಅವರು ದೆಹಲಿಯಲ್ಲಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ನನಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಮತ್ತು ಟಿಕೆಟ್ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ” Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

ಸೋಮಣ್ಣ ನನಗೆ ಫೋನ್ ಮಾಡಿ ಸುದ್ದಿಗೋಷ್ಠಿ ಮಾಡಬೇಡಿ ಎಂದು ಹೇಳಿದರು. ಅವರು ಚಾಮರಾಜನಗರ ಜಿಲ್ಲೆಯಲ್ಲೇ ಸ್ಪರ್ಧೆ ಮಾಡಬಾರದು. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಬಿಡಲ್ಲ. ಸೋಮಣ್ಣ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಲ್ಲ. ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ. ಜಿಲ್ಲೆಗೆ ಸೋಮಣ್ಣ ಬೇಕು ಎಂಬುವವರು ಅವರ ಕೆಲವು ಬೆಂಬಲಿಗರು ಮಾತ್ರ. ಪಕ್ಷದ ಅಧಿಕಾರದಲ್ಲಿರುವವರು ಸೋಮಣ್ಣ ಜಿಲ್ಲೆಗೆ ಬೇಡ ಎಂದೇ ಹೇಳುತ್ತಾರೆ ಎಂದು ತಿಳಿಸಿದರು.

Exit mobile version