ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧನವಾಗಿರುವ ಮಾಜಿ ಸಚಿವ ನಾಗೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ನಿಗಮದ ಈ ಹಿಂದಿನ ಎಂಡಿ ಕಲ್ಲೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಲ್ಲೇಶ್ ಅವರು ಸದ್ಯ ಮಾಜ ಕಲ್ಯಾಣ ಇಲಾಖೆಯ ಅಪಾರ ನಿರ್ದೇಶಕರಾಗಿದ್ದು, ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಕಲ್ಲೇಶ್ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿ.ಎನ್.ಎಸ್.ಕಾಯ್ದೆ ಸೆಕ್ಷನ್ 351(2), 352ರಡಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 351(2) ಜೀವ ಬೆದರಿಕೆ ಹಾಕುವುದು, 352 ಉದ್ದೇಶ ಪೂರ್ವಕವಾಗಿ ನಿಂದಿಸುವುದಕ್ಕೆ ಸಂಬಂಧಿಸಿದೆ. ದೂರುದಾರ ಕಲ್ಲೇಶ್‌ನನ್ನು ಪೊಲೀಸರು ವಿಚಾರಣೆಗೆ ಕರೆಸಲಿದ್ದು, ಈ ವೇಳೆ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ. ದೂರಿಗೆ ಸಂಬಂಧಪಟ್ಟಂತೆ ಯಾವುದಾದರೂ ಸಾಕ್ಷ್ಯಾಗಳು ಇದ್ದರೆ ಪಡೆದುಕೊಳ್ಳಲಿದ್ದು, ನಂತರ ಇಡಿ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಲಿದ್ದಾರೆ.
ಎಫ್.ಐ.ಆರ್.ನಲ್ಲಿ ಏನಿದೆ?
ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ವೇಳೆ 17 ಪ್ರಶ್ನೆಗಳನ್ನು ಕೇಳಿರುವ ಇಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡು, ಒತ್ತಾಯ ಪೂರ್ವಕ ಸಹಿ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಕಲ್ಲೇಶ್ ಉಲ್ಲೇಖಿಸಿದ್ದಾರೆ. ಅಕ್ರಮ ವರ್ಗಾವಣೆಯಲ್ಲಿ ನಿನ್ನನ್ನು ಬಂಧಿಸುತ್ತೇವೆ, ಎರಡು ವರ್ಷ ಬೇಲ್ ಸಿಗಲ್ಲಾ ಎಂದು ಧಮ್ಕಿ ಹಾಕಿದ್ದಾರೆ. ನೀನೊಬ್ಬ ಅಪರಾಧಿ, ನಿನ್ನನ್ನು ಹೀಗಲೇ ಅರೆಸ್ಟ್ ಮಾಡುತ್ತೇವೆ, ಇಡಿ ಬಗ್ಗೆ ನಿನಗೆ ಗೊತ್ತಿಲ್ಲಾ ಎಂದು ಮಿತ್ತಲ್ ಬೈದಿದ್ದಾರೆ.
ಇದನ್ನೂ ಓದಿ | TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ
ಎಂಜಿ ರಸ್ತೆ ಶಾಖೆಗೆ ಹಣ ವರ್ಗಾವಣೆ ಮಾಡಲು ನಾಗೇಂದ್ರ ಹಾಗೂ ಹೈ ಅಥಾರಿಟಿ ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಗಿದೆ. ಈ ಕೂಡಲೇ ಬರೆದು ಕೊಟ್ಟು ಸಹಿ ಮಾಡಿಕೊಡುವಂತೆ ಒತ್ತಡ ಹೇರಿದ್ದಾರೆ. ಹಣ ವರ್ಗಾವಣೆಗೆ ಒತ್ತಡ ಇತ್ತು ಎಂದು ಬರೆದುಕೊಡಲು ತಿಳಿಸಿದ್ದಾರೆ. ಪದೇಪದೆ ಇದೇ ಪ್ರಶ್ನೆ ಕೇಳಿ 7 ವರ್ಷ ಜೈಲು, ಶಿಕ್ಷೆ ಕೊಡಿಸುವವರೆಗೂ ಬಿಡುವುದಿಲ್ಲ ಎಂದಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಕಾನೂನು ಬಾಹಿರವಾಗಿ ವಿಚಾರಣೆ ಮಾಡಿ ಬೈದು ಬೆದರಿಕೆ ಹಾಕಿದ್ದಾರೆ ಎಂದು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಮುರುಳಿ ಕಣ್ಣನ್ ಅವರ ವಿರುದ್ದ ದೂರು